ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ

KannadaprabhaNewsNetwork |  
Published : Jun 05, 2026, 01:45 AM IST
4ಎಚ್ಎಸ್ಎನ್13 :  | Kannada Prabha

ಸಾರಾಂಶ

ಕೆ.ಎಂ. ಶಿವಲಿಂಗೇಗೌಡ ಅವರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನೂರಕ್ಕೆ ನೂರು ವಿಶ್ವಾಸ ನನಗಿದೆ ಎಂದು ಹೇಳಿದರು. ಕಳೆದ ಮೂರು ವರ್ಷಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಅತ್ಯುತ್ತಮ ಆಡಳಿತ ನೀಡಿದ್ದು, ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಬಡವರು, ರೈತರು, ಮಹಿಳೆಯರು ಹಾಗೂ ಶ್ರಮಿಕ ವರ್ಗದ ಧ್ವನಿಯಾಗಿ ಕಾರ್ಯನಿರ್ವಹಿಸಿದ್ದು, ಈಗಿನ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಅಭಿವೃದ್ಧಿ ಮುಂದುವರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ಸಿದ್ದರಾಮಯ್ಯ ಅವರ ಅಭಿವೃದ್ಧಿ ಪರ ಆಡಳಿತದ ಹಾದಿಯಲ್ಲೇ ರಾಜ್ಯವನ್ನು ಮುನ್ನಡೆಸಲಿದ್ದು, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಜನಪರ ಆಡಳಿತ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಮೊದಲ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಅರಸೀಕೆರೆ ಶಾಸಕ ಕೆ. ಎಂ. ಶಿವಲಿಂಗೇಗೌಡ ಅವರಿಗೆ ಸಚಿವ ಸ್ಥಾನ ದೊರೆಯದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಶ್ರೇಯಸ್ ಪಟೇಲ್, ಹಾಸನ ಜಿಲ್ಲೆಗೆ ಸೂಕ್ತ ಪ್ರಾತಿನಿಧ್ಯ ನೀಡುವಂತೆ ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಜನರ ಸಮಸ್ಯೆಗಳು, ಅಭಿವೃದ್ಧಿ ಅಗತ್ಯಗಳು ಮತ್ತು ಜನರ ನಾಡಿಮಿಡಿತವನ್ನು ಚೆನ್ನಾಗಿ ಅರಿತಿರುವ ನಾಯಕತ್ವಕ್ಕೆ ಸಚಿವ ಸ್ಥಾನ ನೀಡಬೇಕೆಂದು ನಾವು ಒತ್ತಾಯಿಸಿದ್ದೇವೆ. ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಾಸನ ಜಿಲ್ಲೆಗೆ ನ್ಯಾಯ ದೊರೆಯಲಿದೆ ಎಂಬ ನಿರೀಕ್ಷೆ ಇದೆ. ಕೆ.ಎಂ. ಶಿವಲಿಂಗೇಗೌಡ ಅವರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನೂರಕ್ಕೆ ನೂರು ವಿಶ್ವಾಸ ನನಗಿದೆ ಎಂದು ಹೇಳಿದರು. ಕಳೆದ ಮೂರು ವರ್ಷಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಅತ್ಯುತ್ತಮ ಆಡಳಿತ ನೀಡಿದ್ದು, ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಬಡವರು, ರೈತರು, ಮಹಿಳೆಯರು ಹಾಗೂ ಶ್ರಮಿಕ ವರ್ಗದ ಧ್ವನಿಯಾಗಿ ಕಾರ್ಯನಿರ್ವಹಿಸಿದ್ದು, ಈಗಿನ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಅಭಿವೃದ್ಧಿ ಮುಂದುವರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ಸಿದ್ದರಾಮಯ್ಯ ಅವರ ಅಭಿವೃದ್ಧಿ ಪರ ಆಡಳಿತದ ಹಾದಿಯಲ್ಲೇ ರಾಜ್ಯವನ್ನು ಮುನ್ನಡೆಸಲಿದ್ದು, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಜನಪರ ಆಡಳಿತ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಇದೇ ಜಿಲ್ಲೆಯವರು ಉಸ್ತುವಾರಿ ಮಂತ್ರಿಗಳಾದರೆ ಒಳ್ಳೆಯದು. ಆದರೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೃಷ್ಣ ಬೈರೇಗೌಡ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲೆಗೆ ಇನ್ನಷ್ಟು ಅಭಿವೃದ್ಧಿ ಯೋಜನೆಗಳು ಮತ್ತು ಆಡಳಿತಾತ್ಮಕ ಪ್ರಾಮುಖ್ಯತೆ ದೊರೆಯುವಂತೆ ಪಕ್ಷದ ನಾಯಕತ್ವವನ್ನು ಮನವಿ ಮಾಡಲಾಗಿದೆ ಎಂದು ಹೇಳಿದರು. ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕಗೊಂಡಿರುವುದನ್ನು ಸ್ವಾಗತಿಸಿದ ಅವರು, “ಹರಿಪ್ರಸಾದ್ ಅವರು ಹಿರಿಯ ರಾಜಕಾರಣಿ, ಹೋರಾಟಗಾರ ಮತ್ತು ಪಕ್ಷದ ನಿಷ್ಠಾವಂತ ನಾಯಕರು. ಅವರ ಅನುಭವ, ಸಂಘಟನಾ ಸಾಮರ್ಥ್ಯ ಮತ್ತು ಪಕ್ಷದ ಮೇಲಿನ ಬದ್ಧತೆಯನ್ನು ಗುರುತಿಸಿ ಈ ಜವಾಬ್ದಾರಿ ನೀಡಲಾಗಿದೆ. ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಸದೃಢವಾಗಿ ಬೆಳೆದು ಮುಂದಿನ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಲಿದೆ " ಎಂದು ವಿಶ್ವಾಸ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿಥಿ ತಂದು ಕೊಟ್ಟಿದ್ದ ಮಾವಿನ ಹಣ್ಣು ಸೇವಿಸಿ ಇಬ್ಬರು ಬಾಲಕಿಯರು ಸಾವು!
ಮೆಡಿಕಲ್‌ ಸೀಟು ಶುಲ್ಕ ಈ ವರ್ಷ ಹೆಚ್ಚಿಸದಿರಲು ಸರ್ಕಾರ ನಿರ್ಧಾರ