ಜ.1ರಿಂದ ಮಾ.15ರ ತನಕ ಪ್ರವಾಸಿಗರಿಗೆ ಜೋಗ್‌ ಫಾಲ್ಸ್‌ ವೀಕ್ಷಣೆಗೆ ತಾತ್ಕಾಲಿಕ ನಿರ್ಭಂದ

Published : Dec 17, 2024, 03:01 PM IST
Jog falls

ಸಾರಾಂಶ

 ಜೋಗ ಜಲಪಾತದಲ್ಲಿ   ಜ.1 ರಿಂದ ಮಾ.15ರವರೆಗೆ ಎರಡೂವರೆ ತಿಂಗಳು ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತದಲ್ಲಿ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಜ.1 ರಿಂದ ಮಾ.15ರವರೆಗೆ ಎರಡೂವರೆ ತಿಂಗಳು ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆಂಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಇದಕ್ಕೆ ಸಹಕರಿಸುವಂತೆ ಜೋಗ ನಿರ್ವಹಣಾ ಪ್ರಾಧಿಕಾರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯೂ ಆಗಿರುವ ಗುರುದತ್ತ ಹೆಗಡೆ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-251444 ಅನ್ನು ಸಂಪರ್ಕಿಸಬಹುದಾಗಿದೆ.

PREV

Recommended Stories

ಕಾಂಗ್ರೆಸ್ಸಿನ ಹಿರಿಯಕ್ಕನ ಚಾಳಿ ಮನೆ ಮಂದಿಗೆ: ವಿಧಾನ ಪರಿಷತ್‌ ಸದಸ್ಯ ಅರುಣ್‌
ನನ್ನ ಹೇಳಿಕೆ ತಿರುಚಿ, ಅಪಪ್ರಚಾರದಲ್ಲಿ ತೊಡಗಿದ್ದಾರೆ: ಶಾಸಕ ಸಂಗಮೇಶ್ವರ್‌