ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಸಚಿವ ಮಧು ಬಂಗಾರಪ್ಪ ನೆರವು

ಸಾರಾಂಶ

ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಸಚಿವ ಮಧು ಬಂಗಾರಪ್ಪ ಅವರು ಧನ ಸಹಾಯ ಮಾಡಿ ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ

ಶಿವಮೊಗ್ಗ: ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಸಚಿವ ಮಧು ಬಂಗಾರಪ್ಪ ಅವರು ಧನ ಸಹಾಯ ಮಾಡಿ ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಸೊರಬ ತಾಲೂಕಿನ ಕುಪ್ಪಗಡ್ಡೆ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು.

 ಈ ವೇಳೆ ಘಟನಾ ಸ್ಥಳಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮಿಸಿ, ಗಾಯಾಳುಗಳನ್ನು ಅವರ ಕಾರಿನಲ್ಲಿಯೇ ಸೊರಬ ತಾಲೂಕು ಆಸ್ಪತ್ರೆಗೆ ದಾಖಲಿಸುವಂತೆ ಆಪ್ತ ಸಹಾಯಕರಿಗೆ ಸೂಚಿಸಿದರು. ಬಳಿಕ ನೆರೆದಿದ್ದ ಗ್ರಾಮಸ್ಥರ ಬಳಿ ಮಾಹಿತಿ ಪಡೆದು, ಡಿಕ್ಕಿ ಹೊಡೆದು ಪರಾರಿಯಾದ ಕಾರಿನ ಮಾಹಿತಿ ಪಡೆಯಲು ಪೊಲೀಸ್ ಇಲಾಖೆಗೆ ಸೂಚಿಸಿದರು.

Share this article