ತಾನೇ ಹೆರಿಗೆ ಮಾಡಿಕೊಂಡು, ಮಗುವಿನ ಕತ್ತು ಸೀಳಿದ ತಾಯಿ!

Published : Aug 24, 2025, 09:57 AM IST
infant dead

ಸಾರಾಂಶ

ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್‌ನ ಶೌಚಾಲಯಲದಲ್ಲಿ ಆ.16ರಂದು ಮಗುವಿನ ಶವ ಪತ್ತೆಯಾದ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೆತ್ತ ತಾಯಿಯೇ 1 ದಿನದ ಗಂಡು ಮಗುವನ್ನು ಕತ್ತು ಸೀಳಿ ಕೊಲೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ.

ಶಿವಮೊಗ್ಗ: ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್‌ನ ಶೌಚಾಲಯಲದಲ್ಲಿ ಆ.16ರಂದು ಮಗುವಿನ ಶವ ಪತ್ತೆಯಾದ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೆತ್ತ ತಾಯಿಯೇ 1 ದಿನದ ಗಂಡು ಮಗುವನ್ನು ಕತ್ತು ಸೀಳಿ ಕೊಲೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ. 

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ತಿಮ್ಲಾಪುರದ ಶೈಲಾ ಎಂಬಾಕೆಯನ್ನು ಬಂಧಿಸಿದ್ದಾರೆ. ಶೈಲಾಗೆ 2 ಮಕ್ಕಳಿದ್ದು ನಾಲ್ಕು ವರ್ಷಗಳ ಹಿಂದೆ ಸಂತಾನಹರಣ ಶಸ್ತ್ರಚಿಕಿತ್ಸೆ ಆಗಿತ್ತು. ಆದರೂ ಶೈಲಾ ಗರ್ಭಿಣಿಯಾಗಿದ್ದಳು ಈಕೆಗೆ ಥೈರಾಯ್ಡ್‌ ಇದ್ದುದರಿಂದ ಇದನ್ನೇ ನೆಪ ಮಾಡಿಕೊಂಡು ಗರ್ಭಿಣಿ ಆಗಿರುವುದನ್ನು ಕುಟುಂಬಸ್ಥರಿಂದ ಮುಚ್ಚಿಟ್ಟಿದ್ದಾಳೆ.

 ಆಸ್ಪತ್ರೆಯ ಶೌಚಾಲಯದಲ್ಲಿ ಒಬ್ಬಳೇ ನಾರ್ಮಲ್ ಹೆರಿಗೆ ಮಾಡಿಕೊಂಡಿದ್ದಾಳೆ. ಬಳಿಕ ಶಸ್ತ್ರಚಿಕಿತ್ಸೆಗೆ ಬಳಸುವ ಬ್ಲೇಡ್‌ನಿಂದ ಮಗುವಿನ ಕತ್ತು ಕೊಯ್ದು ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾಳೆ ಎಂದು ತಿಳಿದುಬಂದಿದೆ.

PREV
Stay informed with the latest news and developments from Shivamogga district (ಶಿವಮೊಗ್ಗ ನ್ಯೂಸ್) — covering local politics, community issues, environment, tourism, culture, crime and civic matters in Shivamogga district on Kannada Prabha News.
Read more Articles on

Recommended Stories

ಕೇಂದ್ರದ ಹೊಸ ಕಾರ್ಮಿಕ ಸಂಹಿತೆಗಳಿಗೆ ವಿರೋಧ
ಡಿ.೨೧ಕ್ಕೆ ದೀವರ ಸಾಂಸ್ಕೃತಿಕ ವೈಭವ ಕಾರ್ಯಕ್ರಮ