ಅರ್ಚಕನಿಗೆ ಸರ್ಕಾರ ಕೊಟ್ಟಿದ್ದ 35000 ರು.ಗಳ ಚೆಕ್‌ ಬೌನ್ಸ್‌

Published : Aug 02, 2025, 09:36 AM IST
Cheque Bounce

ಸಾರಾಂಶ

ದೇವಸ್ಥಾನದ ಅರ್ಚಕರಿಗೆ ನೀಡಿದ್ದ ಸರ್ಕಾರಿ ಚೆಕ್, ಅಮಾನ್ಯ (ಬೌನ್ಸ್) ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಹೊಳೆಹೊನ್ನೂರು: ದೇವಸ್ಥಾನದ ಅರ್ಚಕರಿಗೆ ನೀಡಿದ್ದ ಸರ್ಕಾರಿ ಚೆಕ್, ಅಮಾನ್ಯ (ಬೌನ್ಸ್) ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ. 

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪಟ್ಟಣ ಸಮೀಪದ ಶ್ರೀಕ್ಷೇತ್ರ ಕೂಡ್ಲಿ ಗ್ರಾಮದಲ್ಲಿರುವ ಮುಜರಾಯಿ ಇಲಾಖೆಗೆ ಒಳಪಟ್ಟ ಪಾರ್ವತಿ ಬ್ರಹ್ಮೇಶ್ವರದ ದೇಗುಲದ ಅರ್ಚಕ ಕೆ.ಆರ್.ಆನಂದ್ ಅವರ ಮೂರು ತಿಂಗಳ ವೇತನ ಹಾಗೂ ಇತರೆ ನಿರ್ವಹಣೆ ವೆಚ್ಚ ಸೇರಿ ಒಟ್ಟು ₹35,600 ಮೌಲ್ಯದ ಚೆಕ್‌ ಅನ್ನು ಜು.1ರ ದಿನಾಂಕ ನಮೂದಿಸಿ ಶಿವಮೊಗ್ಗ ತಹಸೀಲ್ದಾರ್ ಸೀಲು ಸಹಿ ಮಾಡಿ ಕೊಟ್ಟಿದ್ದರು.

 ಇತ್ತೀಚೆಗೆ ನಗದೀಕರಣಕ್ಕೆ ಚೆಕ್‌ ಅನ್ನು ಕೂಡ್ಲಿ ಕರ್ನಾಟಕ ಬ್ಯಾಂಕಿಗೆ ನೀಡಲಾಗಿತ್ತು. ಆದರೆ ಚೆಕ್ ನೀಡಲಾಗಿದ್ದ ಖಾತೆಯಲ್ಲಿ ಸಾಕಷ್ಟು ಹಣ ಇಲ್ಲದೆ ಇರುವುದರಿಂದ ಅಮಾನ್ಯಗೊಂಡಿದೆ ಎಂದು ಬ್ಯಾಂಕಿನಿಂದ ಹಿಂಬರಹ ನೀಡಿ ಚೆಕ್ ವಾಪಾಸ್ಸು ನೀಡಿದ್ದಾರೆ. 

ಜೀವನ ನಿರ್ವಹಣೆ ಮಾಡುವುದು ಹಾಗೂ ಕರ್ತವ್ಯ ನಿರ್ವಹಿಸುವುದು ಕಷ್ಟಕರ ಆಗಿದ್ದು, ಮುಂದಿನ ದಿನಗಳಲ್ಲಿ ಇದು ಸರಿಯಾಗದೆ ಇದ್ದಲ್ಲಿ ಕರ್ತವ್ಯದಿಂದ ಮುಕ್ತಿ ಪಡೆಯುವುದಾಗಿ ಅರ್ಚಕ ಕೆ.ಆರ್.ಆನಂದ್ ಬೇಸರ ವ್ಯಕ್ತಪಡಿಸಿದ್ದಾರೆ.

PREV
Stay informed with the latest news and developments from Shivamogga district (ಶಿವಮೊಗ್ಗ ನ್ಯೂಸ್) — covering local politics, community issues, environment, tourism, culture, crime and civic matters in Shivamogga district on Kannada Prabha News.
Read more Articles on

Recommended Stories

ರಾಜ್ಯದಲ್ಲಿ ಮತ್ತೊಂದು ಖಾಸಗಿ ಸ್ಲೀಪರ್‌ ಬಸ್‌ ಬೆಂಕಿಗೆ ಆಹುತಿ!
ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಒತ್ತು ನೀಡಿ