ಬೇಲಿಮಲ್ಲೂರು ಪತ್ತಿನ ಸಂಘ ಅಧ್ಯಕ್ಷರಾಗಿ ಶಿವಮೂರ್ತಿ, ಉಪಾಧ್ಯಕ್ಷರಾಗಿ ಮಂಜುನಾಥ

KannadaprabhaNewsNetwork |  
Published : Nov 24, 2025, 01:30 AM IST
ಹೊನ್ನಾಳಿ ಫೋಟೋ 23ಎಚ್.ಎಲ್.ಐ1. ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರು, ಉಪಾಧ್ಯಕ್ಷರನ್ನು ಸಂಘದ ನಿರ್ದೇಶಕರುಗಳು, ಹಾಗೂ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಹಾಗೂ ಬಯಲು ಸೀಮೆ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಎಚ್.ಬಿ.ಮಂಜಪ್ಪ ಅವರು ಅಭಿನಂದಿಸಿದರು.  | Kannada Prabha

ಸಾರಾಂಶ

ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ನೂತನ ಅಧ್ಯಕ್ಷರಾಗಿ ಶಿವಮೂರ್ತಿ ಬಿ.ಜಿ,, ಉಪಾಧ್ಯಕ್ಷರಾಗಿ ಮಂಜುನಾಥ ಕೆ.ಕೆ. ಅವಿರೋಧ ಅಯ್ಕೆಯಾದರು.

- ಅವಿರೋಧ ಆಯ್ಕೆ ಘೋಷಿಸಿದ ಚುನಾವಣಾಧಿಕಾರಿ ನವೀನ್ ಕುಮಾರ್

- - -

ಹೊನ್ನಾಳಿ: ತಾಲೂಕಿನ ಬೇಲಿಮಲ್ಲೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ನೂತನ ಅಧ್ಯಕ್ಷರಾಗಿ ಶಿವಮೂರ್ತಿ ಬಿ.ಜಿ,, ಉಪಾಧ್ಯಕ್ಷರಾಗಿ ಮಂಜುನಾಥ ಕೆ.ಕೆ. ಅವಿರೋಧ ಅಯ್ಕೆಯಾದರು.

ಅಧ್ಯಕ್ಷರಾಗಿದ್ದ ಚಂದ್ರಪ್ಪ ಎ.ಕೆ. ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆಯಿತು, ಶಿವಮೂರ್ತಿ ಬಿ.ಜಿ. ಅವರೊಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಅಂತೆಯೇ ಉಪಾಧ್ಯಕ್ಷ ಚಂದ್ರಶೇಖರಪ್ಪ ಪಿ. ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಜುನಾಥ ಕೆ.ಕೆ. ಅವರೊಬ್ಬರೇ ಉಮೇದುವಾರಿಕೆ ಸಲ್ಲಿಸಿದ್ದರು. ಆದ್ದರಿಂದ ಚುನಾವಣಾಧಿಕಾರಿಯಾಗಿದ್ದ ಸಹಕಾರ ಅಭಿವೃದ್ದಿ ಅಧಿಕಾರಿ ನವೀನ್ ಕುಮಾರ್ ಅವರು ಶಿವಮೂರ್ತಿ ಬಿ.ಜಿ. ಅಧ್ಯಕ್ಷ, ಮಂಜುನಾಥ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.

ಸಂಘದ ನಿರ್ದೇಶಕರು, ಕಾರ್ಯದರ್ಶಿ ಹನುಮಂತಪ್ಪ ಆರ್., ಗ್ರಾಮದ ಮುಖಂಡರು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು.

ಎಚ್.ಬಿ. ಮಂಜಪ್ಪ ಅಭಿನಂದನೆ:

ಸಂಘದ ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ. ಮಂಜಪ್ಪ ಸಂಘಕ್ಕೆ ಭೇಟಿ ನೀಡಿ, ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಮಾಲಾರ್ಪಣೆ ಹಾಕಿ, ಅಭಿನಂದಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ವಿಶೇಷವಾಗಿ ರೈತರ ಸಂಘಗಳಾಗಿವೆ. ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಪರಸ್ಪರ ವಿಶ್ವಾಸದಿಂದ ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೆಲಸ ಮಾಡಬೇಕು. ಸಂಘದ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಹೇಳಿದರು.

- - - (** ಈ ಫೋಟೋ-ಕ್ಯಾಪ್ಷನ್‌ ಪ್ಯಾನೆಲ್‌ಗೆ ಬಳಸಿ)

-23ಎಚ್.ಎಲ್.ಐ1.ಜೆಪಿಜಿ:

ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ ಅಧ್ಯಕ್ಷ- ಉಪಾಧ್ಯಕ್ಷರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ- ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ.ಮಂಜಪ್ಪ, ಸಂಘದ ನಿರ್ದೇಶಕರು ಅಭಿನಂದಿಸಿದರು.

PREV

Recommended Stories

ವಿದ್ಯಾರ್ಥಿಗಳು ಸರ್ಕಾರಿ ಯೋಜನೆ ಸದುಪಯೋಗ ಪಡೆದುಕೊಳ್ಳಿ
ಗುರು, ಶಿಷ್ಯರದು ಜಗತ್ತಿನ ಶ್ರೇಷ್ಠ ಸಂಬಂಧ