ಶಿವನಗರ: ಮಳೆಹಾನಿ ಕಾಮಗಾರಿ ಪರಿಶೀಲಿಸಿದ ಐವನ್‌

KannadaprabhaNewsNetwork |  
Published : Nov 18, 2026, 02:45 AM IST
ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜಾ ಪರಿಶೀಲನೆ ನಡೆಸಿದರು | Kannada Prabha

ಸಾರಾಂಶ

ಮಳೆಹಾನಿ ದುರಸ್ತಿಗಾಗಿ 3 ಕೋಟಿ ರು. ಅನುದಾನ ಬಿಡುಗಡೆಗೊಂಡಿದ್ದು, ಇದರ ಭಾಗವಾಗಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ ಗ್ರಾಮದ ಶಿವನಗರದಲ್ಲಿ 60 ಲಕ್ಷ ರು. ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ಪರಿಶೀಲನೆ ನಡೆಸಿದರು.

ಮಂಗಳೂರು : ಮಳೆಹಾನಿ ದುರಸ್ತಿಗಾಗಿ 3 ಕೋಟಿ ರು. ಅನುದಾನ ಬಿಡುಗಡೆಗೊಂಡಿದ್ದು, ಇದರ ಭಾಗವಾಗಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ ಗ್ರಾಮದ ಶಿವನಗರದಲ್ಲಿ 60 ಲಕ್ಷ ರು. ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಸ್ಥಳೀಯ ನಿವಾಸಿಗಳು ಎದುರಿಸುತ್ತಿರುವ ತೊಂದರೆಗಳನ್ನು ನಿವಾರಿಸಲು ಹಾಗೂ ರಾಜಕಾಲುವೆ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಅತ್ತಾವರದ ಶಿವನಗರದ ಯುವಕರ ಸ್ಟೇಜ್‌ಗೆ ಶಾಸಕರ ನಿಧಿಯಿಂದ 5 ಲಕ್ಷ ರು. ಅನುದಾನ ಬಿಡುಗಡೆ ಮಾಡಿದ್ದು, ಈಗಾಗಲೇ ಕಾಮಗಾರಿ ಪ್ರಾರಂಭಿಸಲಾಗಿದೆ. ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಐವನ್ ಡಿಸೋಜಾ ತಿಳಿಸಿದರು.ವಾರ್ಡ್ ಅಧ್ಯಕ್ಷರಾದ ಸದಾಶಿವ ಕುಲಾಲ್, ನರೇಶ್ ಶೆಟ್ಟಿ ಮಂಗಳಾದೇವಿ, ಬೂತ್ ಅಧ್ಯಕ್ಷ ಅಭಿಷೇಕ್, ಮುಖಂಡರಾದ ದಿನೇಶ್ ಪಾಂಡೇಶ್ವರ, ನರೇಶ್, ಮೀನಾ, ಕಮಲ್, ರಾಕೇಶ್ ಶೆಟ್ಟಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಳೆನೀರು ಕಾಲುವೆಗೆ ಸಿಎಂ ಶಂಕುಸ್ಥಾಪನೆ
ಪ್ರೇಯಸಿ ಬಿಟ್ಟು ಹೋಗಿದ್ದಕ್ಕೆಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ