ಕುರುಬ ನೌಕರರ ಸಂಘದ ನಿಕಟ ಪೂರ್ವ ಅಧ್ಯಕ್ಷ ಕನ್ನಡಪ್ರಭ ವಾರ್ತೆ ಅರಸೀಕೆರೆ
ತಾಲೂಕಿನ ಗೊಲ್ಲರಹಳ್ಳಿಯ ಬಳಿ ಇರುವ ಗಂಗೆ ಮಡುವಿನಲ್ಲಿ ಕಾಗಿನೆಲೆ ಶಾಖಾಮಠದ ಅಭಿವೃದ್ಧಿಯು ಸೇರಿದಂತೆ ಜಿಲ್ಲೆಯಲ್ಲಿ ಕುರುಬ ಸಮಾಜದ ಸಂಘಟನೆಯ ಹಾಗೂ ಅಭಿವೃದ್ಧಿಗೆ ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯರು ಹಾಗೂ ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷರಾಗಿರುವ ಗೊಲ್ಲರಹಳ್ಳಿ ಪಟೇಲ್ ಶಿವಣ್ಣ ಅವರ ಕೊಡುಗೆ ಅಪಾರವಾಗಿದೆ ಎಂದು ತಾಲೂಕು ಕುರುಬ ನೌಕರರ ಸಂಘದ ನಿಕಟ ಪೂರ್ವ ಅಧ್ಯಕ್ಷ ಗಿರಿ ಗೌಡ ಹೇಳಿದರು.ಜಿಲ್ಲೆಯಲ್ಲಿ ಕುರುಬ ಸಮಾಜದ ಸಂಘಟನೆಯ ಹಾಗೂ ಅಭಿವೃದ್ಧಿಗೆ ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯರು ಹಾಗೂ ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷರಾಗಿರುವ ಗೊಲ್ಲರಹಳ್ಳಿ ಪಟೇಲ್ ಶಿವಣ್ಣ ಅವರ ಕೊಡುಗೆ ಅಪಾರವಾಗಿದೆ ಎಂದು ತಾಲೂಕು ಕುರುಬ ನೌಕರರ ಸಂಘದ ನಿಕಟ ಪೂರ್ವ ಅಧ್ಯಕ್ಷ ಗಿರಿ ಗೌಡ ಹೇಳಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಮಾರು 25 ಎಕರೆ ಪ್ರದೇಶದಲ್ಲಿ ಗಂಗೆ ಮಡುವಿನಲ್ಲಿ ಕಾಗಿನೆಲೆ ಶಾಖಾ ಮಠದ ಸ್ಥಾಪನೆಗೆ ಶಿವಪ್ಪ ಅವರ ಶ್ರಮದಾನಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಅಲ್ಲದೆ ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷರಾಗಿ ಜಿಲ್ಲಾಧ್ಯಂತ ಸಮುದಾಯದ ಸಂಘಟನೆಯ ಜತೆಗೆ ಸಮುದಾಯ ಭವನ ವಿದ್ಯಾರ್ಥಿ ನಿಲಯ ಹೀಗೆ ಹಲವು ಸಮಾಜದ ಕಲ್ಯಾಣ ದೃಷ್ಟಿಯಿಂದ ನಿಸ್ವಾರ್ಥತೆಯಿಂದ ಸೇವೆ ಸಲ್ಲಿಸುತ್ತಿರುವ ಶಿವಪ್ಪನವರ ವಿರುದ್ಧ ಕೆಲವರು ಸಲ್ಲದ ಹೇಳಿಕೆ ನೀಡುತ್ತಿರುವುದು ಖಂಡನೀಯವಾಗಿದೆ. ಇದರಿಂದ ಸಮಾಜದ ಅಭಿವೃದ್ಧಿಗೆ ಕಂಟಕವಾಗಲಿದೆ ಎಂದು ಹೇಳಿದರು.ಪ್ರಸ್ತುತ ದಿನಗಳಲ್ಲಿ ಪ್ರತಿಯೊಂದು ಸಮಾಜದವರು ಸಂಘಟಿತರಾಗುವ ಮೂಲಕ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆದು ಸಮಾಜದ ಹಿಂದುಳಿದ ಜನರಿಗೆ ತಲುಪಿಸುತ್ತಿದ್ದಾರೆ. ಆದರೆ ನಮ್ಮ ಸಮಾಜದ ಕೆಲವರು ಸಮಾಜ ಹಾಗೂ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಿವಪ್ಪನವರ ವಿರುದ್ಧ ನಿರಾಧಾರ ಆರೋಪಗಳನ್ನು ಮಾಡುತ್ತಿರುವುದು ಸಮಾಜದ ಬೆಳವಣಿಗೆಗೆ ಅನ್ಯಾಯ ಮಾಡಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗಂಗೆಮಡು ಅಭಿವೃದ್ಧಿ ಸೇರಿದಂತೆ ಜಿಲ್ಲಾ ಕುರುಬ ಸಮಾಜದ ನಿರ್ವಹಣೆಗೆ ಸಂಬಂಧಿಸಿದಂತೆ ಹಣಕಾಸಿನ ವ್ಯವಹಾರವನ್ನು ಪ್ರಸ್ತುತ ಶಿವಪ್ಪನವರು ನಿರ್ವಹಿಸುತ್ತಿಲ್ಲ ಎಂಬುದನ್ನು ಅವರ ವಿರುದ್ಧ ಟೀಕೆ ಮಾಡುವವರು ಅರ್ಥ ಮಾಡಿಕೊಂಡು ಸಮಾಜದ ಸಂಘಟನೆ ಹಾಗೂ ಬೆಳವಣಿಗೆಗೆ ಶ್ರಮಿಸುತ್ತಿರುವ ಶಿವಪ್ಪನವರ ಜತೆ ಕೈಜೋಡಿಸುವ ಮೂಲಕ ಸಮುದಾಯದ ಅಭಿವೃದ್ಧಿಗೆ ಸ್ಪಂದಿಸುವ ಮನಸ್ಥಿತಿ ಬಳಸಿಕೊಳ್ಳಬೇಕು. ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿದ್ದರೆ ಸ್ವಾಮೀಜಿಯವರ ನೇತೃತ್ವದಲ್ಲಿ ಸಮಾಜದ ಮುಖಂಡರೊಂದಿಗೆ ಚರ್ಚಿಸಿ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳೋಣ ಎಂದು ಕರೆ ನೀಡಿದರು.ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಜಿಲ್ಲಾ ಕಾರ್ಯದರ್ಶಿ ಶಿವರಾಂ. ತಾಲೂಕು ಕುರುಬ ಸಮಾಜದ ಮಾಜಿ ಖಜಾಂಚಿ ಸೋಮಶೇಖರ್ ಮತ್ತು ಇತರರು ಉಪಸ್ಥಿತರಿದ್ದರು.ಕುರುಬ ಸಮಾಜದ ನಿಕಟಪೂರ್ವ ಅಧ್ಯಕ್ಷ ಗಿರಿ ಗೌಡ ಅರಸೀಕೆರೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.