ಇಂದು ಶಿವಪ್ರಿಯಾನಂದ ಸ್ವಾಮೀಜಿ ಪುರಪ್ರವೇಶ ಸಮಾರಂಭ

KannadaprabhaNewsNetwork |  
Published : May 27, 2025, 01:37 AM IST
26ಜಿಡಿಜಿ9 | Kannada Prabha

ಸಾರಾಂಶ

ಗದಗ ನಗರದ ಕೆ.ಎಚ್.ಪಾಟೀಲ ಸಭಾಭವನದಲ್ಲಿ ಶ್ರೀರಾಮಕೃಷ್ಣ ವಿವೇಕಾನಂದಾಶ್ರಮದ ಶಿವಪ್ರಿಯಾನಂದ ಸ್ವಾಮೀಜಿ (ಪುನೀತ ಮಹಾರಾಜ) ಸನ್ಯಾಸ ಸ್ವೀಕರಿಸಿದ ನಂತರ ಪುರಪ್ರವೇಶ ಸಮಾರಂಭ ಮೇ 27ರಂದು ಬೆಳಗ್ಗೆ 11ಕ್ಕೆ ಜರುಗಲಿದೆ.

ಗದಗ:ನಗರದ ಕೆ.ಎಚ್.ಪಾಟೀಲ ಸಭಾಭವನದಲ್ಲಿ ಶ್ರೀರಾಮಕೃಷ್ಣ ವಿವೇಕಾನಂದಾಶ್ರಮದ ಶಿವಪ್ರಿಯಾನಂದ ಸ್ವಾಮೀಜಿ (ಪುನೀತ ಮಹಾರಾಜ) ಸನ್ಯಾಸ ಸ್ವೀಕರಿಸಿದ ನಂತರ ಪುರಪ್ರವೇಶ ಸಮಾರಂಭ ಮೇ 27ರಂದು ಬೆಳಗ್ಗೆ 11ಕ್ಕೆ ಜರುಗಲಿದೆ.ಪುರಪ್ರವೇಶ ಸಮಾರಂಭದಲ್ಲಿ ಜ.ತೋಂಟದಾರ್ಯ ಸಂಸ್ಥಾನಮಠದ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ, ಶಿವಾನಂದ ಬೃಹನ್ಮಠದ ಅಭಿನವ ಶಿವಾನಂದ ಸ್ವಾಮೀಜಿ, ಗದಗ-ವಿಜಯಪುರ ಶ್ರೀ ರಾಮಕೃಷ್ಣ ವಿವೇಕಾನಂದಾಶ್ರಮದ ಅಧ್ಯಕ್ಷ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಉದ್ಘಾಟಿಸುವರು. ರೋಣ ಶಾಸಕ ಜಿ.ಎಸ್. ಪಾಟೀಲ ಅಧ್ಯಕ್ಷತೆ ವಹಿಸುವರು. ಶಾಸಕರಾದ ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ, ವಿಪ ಸದಸ್ಯ ಎಸ್.ವಿ. ಸಂಕನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಗದಗ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ಜಿಪಂ ಮಾಜಿ ಅಧ್ಯಕ್ಷರಾದ ಸುಜಾತಾ ದೊಡ್ಡಮನಿ, ಪ್ರಭಣ್ಣ ಹುಣಸಿಕಟ್ಟಿ, ವಾಸಣ್ಣ ಕುರಡಗಿ, ಸಿದ್ಧಲಿಂಗೇಶ್ವರ ಪಾಟೀಲ, ಜಿಪಂ ಮಾಜಿ ಸದಸ್ಯರಾದ ಹನಮಂತಪ್ಪ ಪೂಜಾರ, ಶಕುಂತಲಾ ಮೂಲಿಮನಿ, ನಗರಸಭೆ ಅಧ್ಯಕ್ಷ ಕೃಷ್ಣ ಪರಾಪೂರ, ಉಪಾಧ್ಯಕ್ಷೆ ಶಕುಂತಲಾ ಅಕ್ಕಿ ಸೇರಿ ಜಿಲ್ಲೆಯ ಪ್ರಮುಖರು ಪಾಲ್ಗೊಳ್ಳುವರು ಎಂದು ಮಾಜಿ ಶಾಸಕ ಡಿ.ಆರ್.ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸುದ್ದಿ
ಜನಪ್ರತಿನಿಧಿಗಳಿಗೆ ಗೌರ್‍ನರ್‌ ಅಪಮಾನ : ಸಿದ್ದರಾಮಯ್ಯಆಕ್ರೋಶ