ಶಿವಶಂಕರಪ್ಪನವರ ಕಾರ್ಯಗಳು ಜನಮಾನಸದಲ್ಲಿ ಚಿರಸ್ಥಾಯಿ:ಶಿವಾನಂದ ಉದಪುಡಿ

KannadaprabhaNewsNetwork |  
Published : Dec 16, 2025, 03:00 AM IST
ಲೋಕಾಪುರ ಬಸವೇಶ್ವರ ವೃತ್ತದಲ್ಲಿ ಕಾಂಗ್ರೇಸ್ ಹಿರಿಯ ಮುಖಂಡ ಶ್ಯಾಮನೂರ ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ಶ್ರದ್ದಾಂಜಲಿ ಕಾರ್ಯಕ್ರಮ ಜರುಗಿತು. ಈ ವೇಳೆ ಶಿವಾನಂದ ಉದಪುಡಿ, ಆನಂದ ಹಿರೇಮಠ, ಗುರುರಾಜ ಉದಪುಡಿ, ಸುಭಾಸ ಗಸ್ತಿ ಇನ್ನಿತರರು ಇದ್ದರು. | Kannada Prabha

ಸಾರಾಂಶ

ಲೋಕಾಪುರ: ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರೂ ಆದ ಶಾಮನೂರ ಶಿವಶಂಕರಪ್ಪ ಅವರ ನಿಧನ ನೋವುಂಟುಮಾಡಿದೆ ಎಂದು ಬಿಡಿಸಿಸಿ ಬ್ಯಾಂಕ ಮಾಜಿ ಉಪಾಧ್ಯಕ್ಷ ಶಿವಾನಂದ ಉದಪುಡಿ ಹೇಳಿದರು.

ಕನ್ನಡಪ್ರಭ ವಾರ್ತೆ ಲೋಕಾಪುರ

ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರೂ ಆದ ಶಾಮನೂರ ಶಿವಶಂಕರಪ್ಪ ಅವರ ನಿಧನ ನೋವುಂಟುಮಾಡಿದೆ ಎಂದು ಬಿಡಿಸಿಸಿ ಬ್ಯಾಂಕ ಮಾಜಿ ಉಪಾಧ್ಯಕ್ಷ ಶಿವಾನಂದ ಉದಪುಡಿ ಹೇಳಿದರು.

ಸೋಮವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಹಮ್ಮಿಕೊಂಡ ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಸುಧೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿ ಮುಡುಪಿಟ್ಟಿದ್ದ ಮುತ್ಸದ್ಧಿ ನಾಯಕನ ಅಗಲಿಕೆಯಿಂದ ಸಮಾಜ ಬಡವಾಗಿದೆ. ದಾವಣಗೆರೆ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಿ ಶಿವಶಂಕರಪ್ಪನವರ ಕಾರ್ಯಗಳು ಅವರನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿಸಿವೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ಮತ್ತವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿ ದೇವರು ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಪಿಕೆಪಿಎಸ್ ಮಾಜಿ ಅಧ್ಯಕ್ಷ ಆನಂದ ಹಿರೇಮಠ ಮಾತನಾಡಿ, ಶಾಮನೂರ ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡದ್ದಾರೆ. ಅವರ ಅಗಲಿಕೆ ನಾಡಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಬೆಂಬಲಿಗರಿಗೆ ಈ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇವೆ ಎಂದು ಹೇಳಿದರು.

ಯುವ ಮುಖಂಡ ಗುರುರಾಜ ಉದಪುಡಿ ಮಾತನಾಡಿ, ನಾಡಿನ ಹಿರಿಯ ರಾಜಕಾರಣಿಗಳು, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾದ ಶ್ಯಾಮನೂರ ಶಿವಶಂಕರಪ್ಪನವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ವೈಯಕ್ತಿಕವಾಗಿ ನಾನು ಬಹಳ ಗೌರವಿಸುತ್ತಿದ್ದ ನಾಯಕರು ಅವರಾಗಿದ್ದರು. ರಾಜಕಾರಣ ಮಾತ್ರವಲ್ಲದೇ ಶಿಕ್ಷಣ, ಉದ್ಯಮ, ಸಮಾಜ ಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸುಗಳಿಸಿ ಮಾದರಿ ವ್ಯಕ್ತಿತ್ವದ ಸಾಧಕರಾಗಿದ್ದರು. ನೇರ ನುಡೆನುಡಿಯ ಅವರು ಸಚಿವರಾಗಿಯೂ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಸಂತಾಪ ವ್ಯಕ್ತಪಡಿಸಿದರು.

ಒಂದು ನಿಮಿಷ ಮೌನ ಆಚರಿಸಿ ಅಗಲಿದ ಗಣ್ಯರಿಗೆ ಶ್ರದ್ಧಾಂಜಂಲಿ ಸಲ್ಲಿಸಲಾಯಿತು. ಈ ವೇಳೆ ಪ್ರಕಾಶ ಚುಳಕಿ, ಅಯ್ಯಪ್ಪಗೌಡ ಪಾಟೀಲ, ಸುಭಾಸ ಗಸ್ತಿ, ಹೊಳಬಸು ದಂಡಿನ, ಗುಲಾಬಸಾಬ ಅತ್ತಾರ, ರವಿ ರೊಡ್ಡಪ್ಪನವರ, ಕಾಶಿನಾಥ ಬೋಳಿಶೆಟ್ಟಿ, ಲೋಕಣ್ಣಾ ಉಳ್ಳಾಗಡ್ಡಿ, ರವಿ ರೊಡ್ಡಪ್ಪನವರ, ಸುಲ್ತಾನ ಕಲಾದಗಿ, ಸಂಜು ಹೊಸಮನಿ, ಕುಮಾರ ಸಿರಗುಂಪಿ, ಲೋಕಣ್ಣಾ ಭಜಂತ್ರಿ, ಕುಮಾರ ಕಾಳಮ್ಮನವರ, ಮಹಾಂತೇಶ ಕಡಕೋಳಮಠ, ಶ್ರೀಶೈಲಗೌಡ ಪಾಟೀಲ, ಫಯಾಜ ಮನಿಯಾರ, ಸಂತೋಷ ಹೂಗಾರ, ಶಿವಯೋಗಿ ಗಂಗಣ್ಣವರ, ಲೋಕಣ್ಣಾ ಸುರಪುರ ಇನ್ನಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!