ಶಿವಯೋಗಿ ಸಿದ್ದರಾಮೇಶ್ವರ ಕೊಡುಗೆ ಅನನ್ಯ

KannadaprabhaNewsNetwork |  
Published : Jan 15, 2026, 02:15 AM IST
ಫೋಟೋ೧೪ಕೆಆರ್‌ಟಿ೧-ಕಾರಟಗಿಯ ಪುರಸಭೆಯಲ್ಲಿ ಬುಧವಾರ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯನ್ನು ಆಚರಿಸಲಾಯಿತು. ಮುಖ್ಯಾಧಿಕಾರಿ ಡಾ.ಸಾಬಣ್ಣ ಕಟ್ಟೇಕಾರ ಸೇರಿದಂತೆ ಇನ್ನಿತರರು ಇದ್ದರು. | Kannada Prabha

ಸಾರಾಂಶ

ಸಿದ್ದರಾಮೇಶ್ವರರಿಗೆ ೮೦೦ವರ್ಷಗಳ ಇತಿಹಾಸವಿದೆ. ೧೨ನೇ ಶತಮಾನಕ್ಕೆ ಸೇರಿದ ಸಿದ್ದರಾಮೇಶ್ವರ ಸ್ವಾಮಿಗಳು ಎಲ್ಲ ಸಮುದಾಯದವರನ್ನು ಸಮಾನವಾಗಿ ಕಾಣುತ್ತಿದ್ದರು

ಕಾರಟಗಿ: ೧೨ನೇ ಶತಮಾನದಲ್ಲಿ ಎಲ್ಲ ಸಮಾಜಗಳನ್ನು ಸಮಾನವಾಗಿ ಕಾಣುವ ಮೂಲಕ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಗಮನಾರ್ಹವಾಗಿದ್ದು, ಕೆರೆ ಕಟ್ಟೆ, ಕಲ್ಲು ಕುಟ್ಟುವ ಕೆಲಸ ಮಾಡಿಕೊಂಡಿದ್ದ ಒಂದು ಸಮುದಾಯಕ್ಕೆ ಜೀವನದ ಭದ್ರ ಬುನಾದಿ ಒದಗಿಸಿಕೊಟ್ಟ ಆದಿಪುರುಷ ಶಿವಯೋಗಿ ಸಿದ್ದರಾಮೇಶ್ವರರು ಎಂದು ಪುರಸಭೆ ಮುಖ್ಯಾಧಿಕಾರಿ ಡಾ. ಸಾಬಣ್ಣ ಕಟ್ಟೇಕಾರ್ ಹೇಳಿದರು.

ಪಟ್ಟಣದ ಪುರಸಭೆ ಕಚೇರಿಯಲ್ಲಿ ಬುಧವಾರ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ನಿಮಿತ್ತ ಶಿವಯೋಗಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.

ಸಿದ್ದರಾಮೇಶ್ವರರಿಗೆ ೮೦೦ವರ್ಷಗಳ ಇತಿಹಾಸವಿದೆ. ೧೨ನೇ ಶತಮಾನಕ್ಕೆ ಸೇರಿದ ಸಿದ್ದರಾಮೇಶ್ವರ ಸ್ವಾಮಿಗಳು ಎಲ್ಲ ಸಮುದಾಯದವರನ್ನು ಸಮಾನವಾಗಿ ಕಾಣುತ್ತಿದ್ದರು. ಬಸವಣ್ಣನವರ ಅನುಭವ ಮಂಟಪದ ಮೂರನೇ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಅಸಮಾನತೆ, ವರ್ಣ, ಜಾತಿ ಲಿಂಗಬೇಧ ತೊಡೆದು ಹಾಕುವ ಕೆಲಸ ವಚನಗಳ ಮೂಲಕ ಮಾಡಿದವರು. ಮೂಲತಃ ಮಹಾರಾಷ್ಟ್ರದವರಾದ ಇವರು ಕರ್ನಾಟದಲ್ಲಿ ತಮ್ಮ ಜನಾಂಗದ ಏಳ್ಗೆಗಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಠಮಾನ್ಯ ಸ್ಥಾಪಿಸಿ ಜನಸೇವೆ ಮಾಡಿದ ಮಹಾನ್ ಪುರುಷ. ಆದರ್ಶ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಮಹನೀಯರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯಬೇಕಿದೆ. ಶಿವಯೋಗಿಗಳ ವಿಚಾರಧಾರೆ ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕು ಎಂದರು.

ಸಿಬ್ಬಂದಿ ಚನ್ನಬಸವಸ್ವಾಮಿ ಹಿರೇಮಠ ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಪುರಸಭೆ ಮುಖ್ಯಾಧಿಕಾರಿ ಸೇರಿದಂತೆ ಕಚೇರಿಯ ಅಧಿಕಾರಿಗಳು, ಭೊವಿ ಸಮಾಜದ ಗಣ್ಯರು, ಸಿಬ್ಬಂದಿ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಕಚೇರಿ ಅಧಿಕಾರಿಗಳು, ಸಿಬ್ಬಂದಿ, ಪೌರ ಕಾರ್ಮಿಕರು ಇತರರು ಇದ್ದರು.

ತಹಸೀಲ್ದಾರ್ ಕಚೇರಿ:ಇಲ್ಲಿನ ತಹಸೀಲ್ದಾರ ಕಚೇರಿಯಲ್ಲಿ ಬುಧವಾರ ಕಚೇರಿಯ ಸಿಬ್ಬಂದಿ ಶಿವಯೋಗಿಗಳ ಭಾವಚಿತ್ರಕ್ಕೆ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿ ಜಯಂತಿ ಆಚರಿಸಲಾಯಿತು.

ನಂತರ ತಹಸೀಲ್ದಾರ ಸೇರಿದಂತೆ ಕಚೇರಿಯ ಸಿಬ್ಬಂದಿ, ಭೋವಿ ಸಮಾಜದ ಗಣ್ಯರು ಶಿವಯೋಗಿ ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಭಕ್ತಿಯಿಂದ ಪುಷ್ಪಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಬಳಿಕ ತಹಸೀಲ್ದಾರ ಎಂ. ಕುಮಾರಸ್ವಾಮಿ ಮಾತನಾಡಿ, ಕರ್ಮಯೋಗಿ ಕಾಯಕಯೋಗಿ, ಶಿವಯೋಗಿಯಾಗಿದ್ದ ಸಿದ್ದರಾಮೇಶ್ವರರು ಕಾಯಕದ ಮೂಲಕ ಸಮಾಜ ಸೇವೆ ಮಾಡಿದ್ದಾರೆ. ಸಕಲ ಜೀವರಾಶಿಗಳಿಗೂ ಒಳಿತನ್ನು ಸಮಾಜದ ಏಳಿಗೆಗಾಗಿ ಶ್ರಮಿಸಿದರು. ೧೨ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಗಮನಾರ್ಹವಾದದ್ದು.ಸಿದ್ದರಾಮೇಶ್ವರರಿಗೆ ೮೦೦ವರ್ಷಗಳ ಇತಿಹಾಸವಿದೆ. ೧೨ನೇ ಶತಮಾನಕ್ಕೆ ಸೇರಿದ ಸಿದ್ದರಾಮೇಶ್ವರ ಸ್ವಾಮಿಗಳು ಎಲ್ಲ ಸಮುದಾಯದವರನ್ನು ಸಮಾನವಾಗಿ ಕಾಣುತ್ತಿದ್ದರು. ಸಿದ್ಧರಾಮೇಶ್ವರರ ಹಲವಾರು ಸಮಾಜ ಸುಧಾರಣೆ ತಂದ ಬಗ್ಗೆ ವಿವರಿಸಿ ಸಮಾಜದ ಸುಧಾರಣೆಗೆ ಜ್ಞಾನಿಗಳ ಆದರ್ಶಗಳು ಕೂಡ ಅತ್ಯವಶ್ಯ. ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯಬೇಕಾದ್ದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದರು.

ಕಂದಾಯ ಇಲಾಖೆ ಸಿಬ್ಬಂದಿ ಮತ್ತು ಭೋವಿ ಸಮಾಜದ ಮುಖಂಡರು ವಿವಿಧ ಘಟಕಗಳ ಪದಾಧಿಕಾರಿಗಳು ಇದ್ದರು.

ಪ್ರಾಥಮಿಕ ಶಾಲೆ:ಇಲ್ಲಿನ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಿಸಲಾಯಿತು. ತಾಲೂಕು ನೌಕರರ ಸಂಘದ ನಿರ್ದೇಶಕ, ಶಿಕ್ಷಕ ಅಮರೇಶ ಮೈಲಾಪುರ ಮಾತನಾಡಿ, ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಶಿವಯೋಗಿ ಸಿದ್ದರಾಮೇಶ್ವರರು ಸಮಸಮಾಜ ನಿರ್ಮಾಣ ಮಾಡುವಲ್ಲಿ ತಮ್ಮನ್ನೇ ಅರ್ಪಿಸಿಕೊಂಡರು. ಇವರ ಸಮಾಜಕ್ಕೆ ನೀಡಿದ ಕೊಡುಗೆ ಅಪಾರ ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಕರಾದ ರಾಮಣ್ಣ ಹಳ್ಳಿಕೇರಿ, ಪ್ರಮೀಳಾದೇವಿ, ಯಶೋಧ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯಾರ್ಥಿಗಳು ಬಾಲ್ಯದಲ್ಲೇ ಓದುವ ಹವ್ಯಾಸ ಬೆಳೆಸಿಕೊಳ್ಳಲಿ: ವಿವೇಕಾನಂದಗೌಡ ಪಾಟೀಲ
ಕವಿವಿ ಪದವಿ ಪರೀಕ್ಷೆ ಎಡವಟ್ಟು: ವಿದ್ಯಾರ್ಥಿಗಳಿಗೆ ಶಾಕ್‌