- ಸಿಜೆಐಗೆ ಕೇಂದ್ರ ಸರ್ಕಾರ ಸೂಕ್ತ ರಕ್ಷಣೆ ನೀಡಲು ಒತ್ತಾಯ
- - -ದಾವಣಗೆರೆ: ಸರ್ವೋಚ್ಚ ನ್ಯಾಯಾಲಯ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ತೆರೆದ ನ್ಯಾಯಾಲಯ ಕೋಣೆಯಲ್ಲಿ ಶೂ ಎಸೆಯಲಾಗಿದೆ. ಸನಾತನ ಧರ್ಮ ಬೆಂಬಲಿಸುವ ಘೋಷಣೆಗಳನ್ನು ಕೂಗಲಾಗಿದೆ. ಸಿಜೆಐ ಮೇಲೆ ಶೂ ಎಸೆದ ಕೃತ್ಯವನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ರಾಜ್ಯ ಸಮಿತಿ ಖಂಡಿಸುತ್ತದೆ ಎಂದು ಫೆಡರೇಷನ್ ವತಿಯಿಂದ ಮಂಗಳವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಸಂಘಟನೆ ಜಿಲ್ಲಾ ಸಂಚಾಲಕ ಅನಂತ ರಾಜ್ ಮಾತನಾಡಿ, ಅತ್ಯಂತ ಆಘಾತಕಾರಿ ಮತ್ತು ಶೋಚನೀಯ. ಜಾತಿವಾದಿ, ಮನುವಾದಿ ಮತ್ತು ಕೋಮುವಾದಿ ವಿಚಾರಗಳನ್ನು ಉತ್ತೇಜಿಸುವ ಬಿಜೆಪಿ ಮುಖ್ಯಮಂತ್ರಿ, ಸಚಿವರು ಮತ್ತು ನಾಯಕರ ಇತ್ತೀಚಿನ ಹೇಳಿಕೆಗಳು ಅಂತಹ ಕೃತ್ಯಗಳಿಗೆ ಧೈರ್ಯ ತುಂಬಿವೆ. ಈ ಘಟನೆ ಹಿಂದುತ್ವ ಕೋಮುವಾದಿ ಶಕ್ತಿಗಳು ಸಮಾಜದೊಳಕ್ಕೆ ಮನುವಾದಿ ಮತ್ತು ಕೋಮು ವಿಷವನ್ನು ಚುಚ್ಚುತ್ತಿರುವುದಕ್ಕೆ ಮತ್ತೊಂದು ಉದಾಹರಣೆ. ನ್ಯಾಯಾಂಗಕ್ಕೆ ಮಾಡುವ ಅಪಮಾನವಾಗಿದೆ ಎಂದರು ಖಂಡಿಸಿದರು.ಮುಖ್ಯ ನ್ಯಾಯಮೂರ್ತಿ ಸಿಜೆಐ ಗವಾಯಿ ಅವರಿಗೆ ಕೇಂದ್ರ ಸರ್ಕಾರ ಸಾಕಷ್ಟು ರಕ್ಷಣೆ ನೀಡಬೇಕು. ಸರ್ಕಾರ ಅಸಹಿಷ್ಣುತೆ ಹರಡುವ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ದೃಢ ಕ್ರಮಗಳನ್ನು ಕೈಗೊಳ್ಳಬೇಕು, ಅದೇ ಸಮಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ‍್ಯ ಮತ್ತು ಭಿನ್ನಮತ ವ್ಯಕ್ತಪಡಿಸುವ ಹಕ್ಕನ್ನು ರಕ್ಷಿಸಬೇಕು ಎಸ್‌ಎಫ್‌ಐ ಆಗ್ರಹಿಸುತ್ತದೆ ಎಂದು ಹೇಳಿದರು.
ಈ ಸಂದರ್ಭ ಸಂಘಟನೆ ರಾಜ್ಯ ಉಪಾಧ್ಯಕ್ಷ ಬಸವರಾಜ ಬೋವಿ, ಜಿಲ್ಲಾ ಮುಖಂಡ ಸಂಜು ನಾಯ್ಕ, ಅಭಿಷೇಕ್ ಹಾಜರಿದ್ದರು.- - - (** ಈ ಫೋಟೋ ಕ್ಯಾಪ್ಷನ್ ಪ್ಯಾನೆಲ್‌ಗೆ ಬಳಸಿ)
-8ಕೆಡಿವಿಜಿ37:ನ್ಯಾಯಮೂರ್ತಿಗಳ ಮೇಲೆ ಶೂ ಎಸೆದ ಕ್ರಮ ಖಂಡಿಸಿ ಎಸ್‌ಎಫ್‌ಐ ವತಿಯಿಂದ ದಾವಣಗೆರೆ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಅನಂತ ರಾಜ್, ಬಸವರಾಜ ಬೋವಿ, ಸಂಜು ನಾಯ್ಕ, ಅಭಿಷೇಕ್ ಪಾಲ್ಗೊಂಡಿದ್ದರು.