ಸಿಜೆಐ ಮೇಲೆ ಶೂ ಎಸೆತ: ದೇಶದ್ರೋಹ ದಾಖಲಿಸಿ: ಈಶ್ವರಪ್ಪ

KannadaprabhaNewsNetwork |  
Published : Oct 15, 2025, 02:06 AM IST
ಹೊನ್ನಾಳಿ ಫೋಟೋ 14ಎಚ್.ಎಲ್.ಐ3.ಪ್ರಜಾ ಪರಿವರ್ತನಾ ವೇದಿಕೆ, ಹಾಗೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಎಸ್.ಎಸಿ.ಎಸ್.ಟಿ.ಜನಸೇವಾ ಸಮಿತಿವತಿಯಿಂದ ಸಿಜೆಐ ಬಿ.ಆರ್. ಗವಾಯ್ ಅವರ ಮೇಲೆ ಶೊ ಎಸೆದ ಪ್ರಕರಣ ಖಂಡಿಸಿ ಕೃತ್ಯವೆಸಗಿದವರ ವಿರುದ್ಧ ದೇಶದ್ರೋಹ  ಪ್ರಕರಣ ದಾಖಲಿಸಿವಂತೆ ಅಗ್ರಹಿಸಿ ಪ್ರತಿಭಟನೆ ನೆಡಿಸಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. . | Kannada Prabha

ಸಾರಾಂಶ

ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ವರ ಮೇಲೆ ಶೂ ಎಸೆದ ಪ್ರಕರಣವನ್ನು ಅತ್ಯಂತ ಉಗ್ರವಾಗಿ ಖಂಡಿಸುತ್ತ, ಈ ಕೃತ್ಯವನ್ನು ಎಸಗಿದವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಿ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರಜಾ ಪರಿವರ್ತನಾ ವೇದಿಕೆ ಹಾಗೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಎಸ್.ಸಿ.ಎಸ್.ಟಿ. ಜನಸೇವಾ ಸಮಿತಿ ಅಧ್ಯಕ್ಷ ಎ.ಡಿ.ಈಶ್ವರಪ್ಪ ಒತ್ತಾಯಪಡಿಸಿದರು.

ಕನ್ನಡಪ್ರಭ ವಾರ್ತೆ ಹೊನ್ನಾಳಿ

ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ವರ ಮೇಲೆ ಶೂ ಎಸೆದ ಪ್ರಕರಣವನ್ನು ಅತ್ಯಂತ ಉಗ್ರವಾಗಿ ಖಂಡಿಸುತ್ತ, ಈ ಕೃತ್ಯವನ್ನು ಎಸಗಿದವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಿ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರಜಾ ಪರಿವರ್ತನಾ ವೇದಿಕೆ ಹಾಗೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಎಸ್.ಸಿ.ಎಸ್.ಟಿ. ಜನಸೇವಾ ಸಮಿತಿ ಅಧ್ಯಕ್ಷ ಎ.ಡಿ.ಈಶ್ವರಪ್ಪ ಒತ್ತಾಯಪಡಿಸಿದರು.

ಉಭಯ ಸಂಘಟನೆಗಳ ವತಿಯಿಂದ ಮಂಗಳವಾರ ನೂರಾರು ಕಾರ್ಯಕರ್ತರು ಪಟ್ಡಣದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ಅಗಮಿಸಿ ನಂತರ ತಹಸೀಲ್ದಾರ್ ಸಿ.ರಾಜೇಶ್ ಕುಮಾರ್ ಮೂಲಕ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.

ನ್ಯಾಯಪೀಠದ ಬಳಿ ಬಂದ ಹಿರಿಯ ವಕೀಲರೊಬ್ಬರು ಏಕಾಏಕಿಯಾಗಿ ಮುಖ್ಯ ನಾಯಮೂರ್ತಿಗಳ ಮೇಲೆ ಶೂ ಎಸೆದ ಅಂದರೆ ಇದು ಕೇವಲ ಒಬ್ಬವ್ಯಕ್ತಿಯನ್ನು ಗುರಿಯಾಗಿಸಿ ನಡೆಸಿದ ಕೃತ್ಯವಲ್ಲ,ಇದು ಇಡೀ ನ್ಯಾಯಾಂಗ ವ್ಯವಸ್ಥೆ ಮತ್ತು ದೇಶದ ಸಂವಿಧಾನವನ್ನು ಅವಮಾನಿಸಿದ ಕೃತ್ಯವಾಗಿದ್ದು, ದೇಶದ ಸಂವಿದಾನವನ್ನು ಅವಮಾನಿಸುವುದು ದೇಶದ್ರೋಹದ ಕೆಲಸವಾಗಿದೆ ಎಂದು ಹೇಳಿದರು.

ಈ ಪ್ರಕರಣವನ್ನು ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿ ಕೃತ್ಯ ಎಸಗಿದವನ ವಿರುದ್ಧ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸಿ ಶಿಕ್ಷೆ ವಿಧಿಸಬೇಕು. ಆದರೆ, ದೆಹಲಿ ಪೊಲೀಸರ ಮುಖಾಂತರ ಅತನನ್ನು ಬಿಡುಗಡೆ ಮಾಡಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಹಾಜರಿದ್ದ ರಾಜ್ಯ ಹಿಂದುಳಿದ ವರ್ಗಗಳ ಸಮಿತಿ ಉಪಾಧ್ಯಕ್ಷ ಎಚ್.ಎ.ಉಮಾಪತಿ ಮಾತನಾಡಿ, ಇಂದಿಗೂ ಕೂಡ ಈ ದೇಶದಲ್ಲಿ ಹಿಂದುಳಿದವರು ,ದಲಿತ ವರ್ಗಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆಗಳು, ಅಪಮಾನಗಳು ಕಡಿಮೆಯಾಗಿಲ್ಲ ಎನ್ನುವುದಕ್ಕೆ ಇಂತಹ ಘಟನೆಗಳು ಸಾಕ್ಷಿಯಾಗಿ ನಿಲ್ಲುತ್ತವೆ ಎಂದರು.

ಎಲ್ಲಿಯವರಿಗೆ ಹಿಂದುಳಿದ ವರ್ಗಗಳು ಹಾಗೂ ದಲಿತ ಜನ ಸಮುದಾಯಗಳು ಶೈಕ್ಷಣಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ಸದೃಢರಾಗಿ ನಿಲ್ಲುವುದಿಲ್ಲವೋ ಅಲ್ಲಿಯವರೆಗೆ ಇಂತಹ ಕೆಟ್ಟ ಘಟನೆಗಳು ನಡೆಯುತ್ತಿರುತ್ತವೆ. ಅದ್ದರಿಂದ ಇಂತಹ ಘಟನೆಗಳನ್ನು ಸಮರ್ಥವಾಗಿ ಎದುರಿಸುವ ಶಕ್ತಿ, ಸಾಮರ್ಥ್ಯಗಳನ್ನು ಹಿಂದುಳಿದ ಹಾಗೂ ದಲಿತ ಸಮುದಾಯಗಳು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಕಾರ್ಯದರ್ಶಿ ಎಚ್.ಕೆ.ಕೃಷ್ಣಆರಕೆರೆ, ಕೆ.ಓ. ಹನುಮಂತಪ್ಪ, ಧನ್ಯಕುಮಾರ್, ನಾಗರಾಜ್ ಕಲ್ಕೇರಿ, ಸಿಂಗಟಗೆರೆ ಸಿದ್ದಪ್ಪ, ಕುರುವ ಮಂಜು, ಮಹಿಳಾ ಯುವಘಟಕದ ಅಧ್ಯತ್ರೆಶೈಲಜಾ, ಗೌರಮ್ಮ, ಲಕ್ಷ್ಮಿ, ಕರಿಯಮ್ಮ, ನೂರಾರು ಜನ ಪದಾಧಿಕಾರಿಗಳು ಇದ್ದರು.

PREV

Recommended Stories

ಮರಳು ದಂಧೆ ತಡೆದ ಎಎಸ್‌ಐಗೆ ಹಲ್ಲೆ: ರಾಜೂಗೌಡ
ನಟ ದರ್ಶನ್‌ ಸೆಲ್‌ ಪರಿಶೀಲನೆ ನಡೆಸಿದ ಕಾನೂನು ಪ್ರಾಧಿಕಾರ