ಕನ್ನಡಪ್ರಭ ವಾರ್ತೆ ದೇವಲಾಪುರ
ಜ.14ರಂದು ಸಚಿವರಿಂದ ರೈತರೊಂದಿಗೆ ಸಂಕ್ರಾಂತಿ
ನಾಗಮಂಗಲ:ರಾಜ್ಯ ಮಟ್ಟದ ಸಿರಿಧಾನ್ಯ ಮೇಳದ ಪ್ರಯುಕ್ತ ಜ.14ರ ಮಕರ ಸಂಕ್ರಾಂತಿ ಹಬ್ಬದಂದು ತಾಲೂಕಿನ ದೇವಲಾಪುರದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮೊದಲ ಬಾರಿಗೆ ರೈತರೊಂದಿಗೆ ಸಂಕ್ರಾಂತಿ ಆಚರಿಸಲಿದ್ದಾರೆ.
ದೇವಲಾಪುರದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಂದ ವಸ್ತು ಪ್ರದರ್ಶನ, ಮಹಿಳೆಯರಿಗಾಗಿ ಸಿರಿಧಾನ್ಯ ಪಾಕ ಸ್ಪರ್ಧೆ ಹಾಗೂ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ. ಇದರ ಜೊತೆಗೆ ಗ್ರಾಮೀಣ ಆಟೋಟ ಸ್ಪರ್ಧೆಗಳಾದ ಮಟ್ಟಿ ಕುಸ್ತಿ ಮತ್ತು ಕಬ್ಬಡಿ ಕ್ರೀಡೆಗಳನ್ನೂ ಹಮ್ಮಿಕೊಳ್ಳಲಾಗಿದೆ.ಸಮಾರಂಭಕ್ಕೂ ಮುನ್ನ ನಡೆಯುವ ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳು ಪಾಲ್ಗೊಳ್ಳಲಿವೆ. ಮರದ ಬಂಡಿಗಾಡಿಯೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸುವ ರೈತರಿಗೆ ಗೌರವಧನ ನೀಡಲಾಗುವುದು. ಹಾಗಾಗಿ ಹಿಂದಿನ ಕಾಲದ ಮರದ ಬಂಡಿಗಾಡಿಗಳನ್ನು ಹೊಂದಿರುವ ರೈತರು ಕೃಷಿ ಇಲಾಖೆಯ ಅಧಿಕಾರಿಗಳನ್ನು ಮೊ-9964600725, ಮೊ-8310600627, ಮೊ-8277933687, ಮೊ-8277933688) ಸಂಪರ್ಕಿಸುವಂತೆ ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್ ತಿಳಿಸಿದ್ದಾರೆ.