ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ

KannadaprabhaNewsNetwork |  
Published : Aug 01, 2026, 01:45 AM IST
31ಎಚ್ಎಸ್ಎನ್18 :  | Kannada Prabha

ಸಾರಾಂಶ

ರಾಜ್ಯದಲ್ಲಿ ೪೩೦ಕ್ಕೂ ಹೆಚ್ಚು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು, ಅತಿಥಿ ಉಪನ್ಯಾಸಕರ ನೇಮಕಾತಿಯ ವಿಳಂಬ ಹಾಗೂ ಖಾಯಂ ಬೋಧಕರ ಕೊರತೆಯಿಂದ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದರು. ಜೂನ್-ಜುಲೈನಲ್ಲಿ ಕಾಲೇಜುಗಳು ಆರಂಭವಾದರೂ ಬಿಎ, ಬಿಕಾಂ., ಬಿಬಿಎ, ಬಿ.ಸಿ.ಎ. ಸೇರಿದಂತೆ ವಿವಿಧ ಕೋರ್ಸ್‌ಗಳ ಪ್ರಮುಖ ವಿಷಯಗಳಿಗೆ ಬೋಧಕರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಣಾಮ ವಿದ್ಯಾರ್ಥಿಗಳು ತರಗತಿಗಳಿಂದ ವಂಚಿತರಾಗುತ್ತಿದ್ದು, ಸರ್ಕಾರಿ ಕಾಲೇಜುಗಳ ಫಲಿತಾಂಶವೂ ಕುಸಿಯುತ್ತಿದೆ ಎಂದರು. ಸಾವಿರಾರು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಖಾಲಿ ಇದ್ದರೂ ಕಳೆದ ಎರಡು ವರ್ಷಗಳಿಂದ ಖಾಯಂ ನೇಮಕಾತಿ ನಡೆದಿಲ್ಲ. ಪ್ರತಿ ವರ್ಷ ಅತಿಥಿ ಉಪನ್ಯಾಸಕರ ನೇಮಕಾತಿಯೂ ಶೈಕ್ಷಣಿಕ ವರ್ಷ ಆರಂಭವಾದ ಹಲವು ತಿಂಗಳ ಬಳಿಕ ನಡೆಯುತ್ತಿರುವುದು ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಉಪನ್ಯಾಸಕರ ತೀವ್ರ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಸಂಕಷ್ಟಕ್ಕೀಡಾಗಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಸರ್ಕಾರಿ ಕಲಾ ಕಾಲೇಜು ಆವರಣದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಆರ್‌.ಸಿ. ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ತಲುಪಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಕೂಡಲೇ ಖಾಲಿ ಇರುವ ಬೋಧಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಎಬಿವಿಪಿ ಜಿಲ್ಲಾ ಸಂಚಾಲಕ ವರಣ್ ಪುರಾಣಿಕ್, ರಾಜ್ಯದಲ್ಲಿ ೪೩೦ಕ್ಕೂ ಹೆಚ್ಚು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು, ಅತಿಥಿ ಉಪನ್ಯಾಸಕರ ನೇಮಕಾತಿಯ ವಿಳಂಬ ಹಾಗೂ ಖಾಯಂ ಬೋಧಕರ ಕೊರತೆಯಿಂದ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದರು. ಜೂನ್-ಜುಲೈನಲ್ಲಿ ಕಾಲೇಜುಗಳು ಆರಂಭವಾದರೂ ಬಿಎ, ಬಿಕಾಂ., ಬಿಬಿಎ, ಬಿ.ಸಿ.ಎ. ಸೇರಿದಂತೆ ವಿವಿಧ ಕೋರ್ಸ್‌ಗಳ ಪ್ರಮುಖ ವಿಷಯಗಳಿಗೆ ಬೋಧಕರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಣಾಮ ವಿದ್ಯಾರ್ಥಿಗಳು ತರಗತಿಗಳಿಂದ ವಂಚಿತರಾಗುತ್ತಿದ್ದು, ಸರ್ಕಾರಿ ಕಾಲೇಜುಗಳ ಫಲಿತಾಂಶವೂ ಕುಸಿಯುತ್ತಿದೆ ಎಂದರು. ಸಾವಿರಾರು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಖಾಲಿ ಇದ್ದರೂ ಕಳೆದ ಎರಡು ವರ್ಷಗಳಿಂದ ಖಾಯಂ ನೇಮಕಾತಿ ನಡೆದಿಲ್ಲ. ಪ್ರತಿ ವರ್ಷ ಅತಿಥಿ ಉಪನ್ಯಾಸಕರ ನೇಮಕಾತಿಯೂ ಶೈಕ್ಷಣಿಕ ವರ್ಷ ಆರಂಭವಾದ ಹಲವು ತಿಂಗಳ ಬಳಿಕ ನಡೆಯುತ್ತಿರುವುದು ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಗ್ರಾಮೀಣ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಖಾಸಗಿ ಕಾಲೇಜು ಅಥವಾ ಟ್ಯೂಷನ್‌ಗೆ ಹೋಗಲು ಆರ್ಥಿಕ ಸಾಮರ್ಥ್ಯ ಇಲ್ಲ. ಸರ್ಕಾರದ ನಿರ್ಲಕ್ಷ್ಯದಿಂದ ಅವರ ಶೈಕ್ಷಣಿಕ ಹಕ್ಕು ಕಸಿದುಕೊಳ್ಳಲಾಗುತ್ತಿದೆ ಎಂದು ದೂರಿದರು. ಎಬಿವಿಪಿ ಸಂಘಟನೆ ರಾಜ್ಯ ಸರ್ಕಾರದ ಮುಂದೆ ನಾಲ್ಕು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದು, ಆಗಸ್ಟ್ ೧೦ರೊಳಗೆ ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ಪಾರದರ್ಶಕವಾಗಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಬೇಕು, ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ, ಇಎಸ್‌ಐ, ಪಿಎಫ್ ಸೇರಿದಂತೆ ಸೌಲಭ್ಯಗಳನ್ನು ಕಲ್ಪಿಸಿ ಗೌರವಧನವನ್ನು ಹೆಚ್ಚಿಸಬೇಕು, ಆರು ತಿಂಗಳೊಳಗೆ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಕೆಪಿಎಸ್‌ಸಿ/ಸಂಬಂಧಿತ ಪ್ರಾಧಿಕಾರದ ಮೂಲಕ ಭರ್ತಿ ಮಾಡಬೇಕು ಹಾಗೂ ದೂರದ ಊರುಗಳಿಂದ ಬರುವ ಬಡ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಪವನ್, ಜೀವನ್, ಆದಿತ್ಯ, ಮಮತಾ ಚೌದ್ರಿ, ಸ್ಮಿತಾ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾವೇರಿ: ರಾಜ್ಯದ ಮುಂದಿರುವ ಆಯ್ಕೆ ಬಗ್ಗೆ ತೀವ್ರ ಚರ್ಚೆ
ಇಂದೂ ನಡೆಯಲಿದೆ ಸಂಪುಟ ವಿಸ್ತರಣೆ ಸರ್ಕಸ್‌!