ಕಾರ್ಕಳ ತಾಲೂಕು ಅತ್ಯುತ್ತಮ ಶೈಕ್ಷಣಿಕ ಸಾಧನೆಯೊಂದಿಗೆ ಮೊದಲ ಸ್ಥಾನದಲ್ಲಿದೆ. ಕಾರ್ಕಳ ನಗರ ಈಗ ಶೈಕ್ಷಣಿಕ ಹಬ್ ಆಗಿ ಪರಿವರ್ತನೆಯಾಗಿದ್ದು, ನಗರದ ಶಾಲೆ-ಕಾಲೇಜುಗಳಲ್ಲಿ ಪ್ರವೇಶ ಪಡೆಯುತ್ತಿರುವ ಹೊರಜಿಲ್ಲೆಗಳ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಆದರೆ ಈ ವಿದ್ಯಾರ್ಥಿಗಳಿಗೆ ಅವಶ್ಯಕವಾದ ಹಾಸ್ಟೆಲ್‌ಗಳ ಕೊರತೆ ಸಮಸ್ಯೆಯಾಗಿ ಪರಿಣಮಿಸಿದೆ.
ರಾಂ ಅಜೆಕಾರು
ಕನ್ನಡಪ್ರಭ ವಾರ್ತೆ ಕಾರ್ಕಳಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ರಾಜ್ಯದಲ್ಲೇ ಪ್ರಗತಿ ಹೊಂದಿದ್ದು, ಅದರಲ್ಲೂ ಕಾರ್ಕಳ ತಾಲೂಕು ಅತ್ಯುತ್ತಮ ಶೈಕ್ಷಣಿಕ ಸಾಧನೆಯೊಂದಿಗೆ ಮೊದಲ ಸ್ಥಾನದಲ್ಲಿದೆ. ಕಾರ್ಕಳ ನಗರ ಈಗ ಶೈಕ್ಷಣಿಕ ಹಬ್ ಆಗಿ ಪರಿವರ್ತನೆಯಾಗಿದ್ದು, ನಗರದ ಶಾಲೆ-ಕಾಲೇಜುಗಳಲ್ಲಿ ಪ್ರವೇಶ ಪಡೆಯುತ್ತಿರುವ ಹೊರಜಿಲ್ಲೆಗಳ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಆದರೆ ಈ ವಿದ್ಯಾರ್ಥಿಗಳಿಗೆ ಅವಶ್ಯಕವಾದ ಹಾಸ್ಟೆಲ್‌ಗಳ ಕೊರತೆ ಸಮಸ್ಯೆಯಾಗಿ ಪರಿಣಮಿಸಿದೆ.ಕಾರ್ಕಳ ನಗರದಲ್ಲೇ 15ಕ್ಕೂ ಹೆಚ್ಚು ಶಾಲಾ-ಕಾಲೇಜುಗಳಿವೆ. ಇಲ್ಲಿನ ಶೈಕ್ಷಣಿಕ ಗುಣಮಟ್ಟದಿಂದಾಗಿ ರಾಜ್ಯದ ವಿವಿಧ ಭಾಗಗಳಿಂದ ಕಾರ್ಕಳಕ್ಕೆ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಸದ್ಯ ಕಾರ್ಕಳ ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿರ್ವಹಿಸುವ ಒಟ್ಟು 8 ಹಾಸ್ಟೆಲ್‌ಗಳಿವೆ. ಅವುಗಳಲ್ಲಿ 4 ಹಾಸ್ಟೆಲ್‌ಗಳು ಕಾರ್ಕಳ ನಗರ ವ್ಯಾಪ್ತಿಯಲ್ಲೇ ಕಾರ್ಯನಿರ್ವಹಿಸುತ್ತಿವೆ. ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಎರಡು ಬಾಲಕಿಯರ ಹಾಸ್ಟೆಲ್ ತೆಳ್ಳಾರು ರಸ್ತೆ ಬಳಿ ಹಾಗೂ ತಾಲೂಕು ಕಚೇರಿ ಬಳಿ ಮೆಟ್ರಿಕ್ ನಂತರ ಹಾಗೂ ಮೆಟ್ರಿಕ್ ಪೂರ್ವ ಹಾಸ್ಟೆಲ್‌ಗಳಿವೆ.ಹಾಸ್ಟೆಲ್‌ನಲ್ಲಿ ಸೀಟುಗಳು ಸಾಕಾಗುತ್ತಿಲ್ಲ:
ಶಬರಿ ಆಶ್ರಮ ಬಾಲಕಿಯರ ಹಾಸ್ಟೆಲ್ (ತೆಳ್ಳಾರು ರಸ್ತೆ)ನಲ್ಲಿ 187 ಸೀಟ್‌ಗಳು, ತಾಲೂಕು ಕಚೇರಿ ಬಳಿಯ ಬಾಲಕರ ಹಾಸ್ಟೆಲ್‌ನಲ್ಲಿ 163 ಸೀಟ್‌ಗಳಿವೆ. ಆದರೆ ಈ ಹಾಸ್ಟೆಲ್‌ಗಳಿಗೆ ಹೆಚ್ಚಿನ ಸಂಖ್ಯೆಗಳಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದು, ಎಲ್ಲರಿಗೂ ಪ್ರವೇಶಾವಕಾಶ ಲಭಿಸುತ್ತಿಲ್ಲ. 2024-25ರಲ್ಲಿ ಒಟ್ಟು 73 ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತರಾದ್ದಾರೆ. ಈ ಸಂಕ್ಯೆ 2025-26ನೇ ಸಾಲಿನಲ್ಲಿ ಬೇಡಿಕೆ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ.
ಮುಂದಿನ ಶೈಕ್ಷಣಿಕ ವರ್ಷದಲ್ಲಿ ಹಾಸ್ಟೆಲ್ ಅರ್ಜಿದಾರರ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆ ಇರುವುದರಿಂದ, ಹೊಸ ಮತ್ತು ಹೆಚ್ಚಿನ ಸಾಮರ್ಥ್ಯದ ಹಾಸ್ಟೆಲ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕಿದೆ............................
ಕಾರ್ಕಳದ ಮೆಟ್ರಿಕ್ ನಂತರದ ಹಾಸ್ಟೆಲ್‌ನಲ್ಲಿ ನಾನು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದ್ದೆ. ಆದರೆ ನನಗೆ ಸೀಟು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಮೂಲಸೌಕರ್ಯ ಹೆಚ್ಚಿಸಿದರೆ ಒಳ್ಳೆಯದು. ಹೊಸ ಕಟ್ಟಡವನ್ನು ನಿರ್ಮಿಸಿದರೆ ಹೆಚ್ಚಿನ ವಿದ್ಯಾರ್ಥಿಗಳಿಗೆ ಅನುಕೂಲ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.