ಕನ್ನಡಪ್ರಭ ವಾರ್ತೆ ಮಡಿಕೇರಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ರೀತಿಯ ಸಮಸ್ಯೆಯಾಗಬಾರದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.
ಜಲ ಜೀವನ್ ಮೀಷನ್ ಯೋಜನೆಯಡಿ ಬಾಕಿ ಇರುವ ಎಲ್ಲ ಕಾಮಗಾರಿಗಳು ತುರ್ತಾಗಿ ಪೂರ್ಣಗೊಳ್ಳಬೇಕು. ಯಾವುದೇ ಸಾರ್ವಜನಿಕ ದೂರುಗಳು ಬಾರದ ರೀತಿಯಲ್ಲಿ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ವಿದ್ಯುತ್ ಇಲಾಖೆಯಿಂದ ಸಮರ್ಪವಾಗಿ ವಿದ್ಯುತ್ ಪೂರೈಸಿ ಎಎಒ ನೀರಿನ ಟ್ಯಾಂಕರ್‌ಗಳಿಂದ ನೀರನ್ನು ಪಂಪ್ ಮಾಡಲು ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಕ್ರಮವಹಿಸಲು ಸೆಸ್ಕ್ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಇದ್ದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪಟ್ಟಿ ಮಾಡಿ ನೀಡುವಂತೆ ತಿಳಿಸಿದರು. ಬೋರ್‌ವೆಲ್, ಮೋಟಾರ್ ಪಂಪ್, ವಿದ್ಯುತ್, ನೀರಿನ ಟ್ಯಾಂಕರ್ ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.