ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಪಂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ನಡೆದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್‍ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯುವ ಜನರು ಉನ್ನತ ಶಿಕ್ಷಣ ಪಡೆದು ವಿವಿಧ ಕ್ಷೇತ್ರದಲ್ಲಿ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು. ಆ ನಿಟ್ಟಿನಲ್ಲಿ ಡಾ. ಅಂಬೇಡ್ಕರ್ ಅವರಂತೆ ನಿರಂತರ ಹಾಗೂ ಕಠಿಣ ಪರಿಶ್ರಮ ಅಗತ್ಯ. ಸರ್ಕಾರದ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಮೇಲೆ ಬರಲು ಶ್ರಮ ವಹಿಸಬೇಕು. ಪರಿಶ್ರಮ ಇಲ್ಲದೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಅಸಾಧ್ಯ. ಡಾ. ಅಂಬೇಡ್ಕರ್ ಅವರ ಗುರಿ, ಉದ್ದೇಶ, ಆಶಯ, ಸಾಧನೆಗಳನ್ನು ಅರ್ಥ ಮಾಡಿಕೊಂಡು ಪ್ರತಿಯೊಬ್ಬರೂ ಮುನ್ನಡೆಯಬೇಕು. ಪ್ರತಿ ದಿನವೂ ಅಂಬೇಡ್ಕರ್ ಅವರನ್ನು ಸ್ಮರಿಸಬೇಕು ಎಂದು ಸಲಹೆ ನೀಡಿದರು.ಅಂಬೇಡ್ಕರ್ ಅವರು ಬರೆದ ಸಂವಿಧಾನದ ಪ್ರತಿಫಲವಾಗಿ ನಾವು ವಿದ್ಯೆ, ಉದ್ಯೋಗ ಪಡೆದು, ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದೇವೆ ಎಂದು ಹೇಳಿದರು.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಎಚ್.ಕೆ. ವೀರಣ್ಣ ಗೌಡ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಸಂದೀಪ್ ಎಸ್. ರಾವಣಿಕರ್ ಮಾತನಾಡಿ, ಡಾ. ಅಂಬೇಡ್ಕರ್ ಅವರ ವಿಚಾರಧಾರೆಗಳು ಸಾರ್ವಕಾಲಿಕ ಎಂದರು.
ಮಹಾ ಬೋಧಿ ಸಂಘದ ಅಧ್ಯಕ್ಷ ಮೋಹನ್ ಮೌರ್ಯ ಹಲವು ದಶಕಗಳ ಕನಸು ನನಸಾಗುತ್ತಿದ್ದು, ಆ ದಿಸೆಯಲ್ಲಿ ಶಾಸಕರು ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಜಾಗ ನೀಡಿ, ಪ್ರತಿಮೆ ನಿರ್ಮಾಣ ಕಾರ್‍ಯ ನಡೆಯುತ್ತಿದೆ. ಇದಕ್ಕೆ ಸಹಕರಿಸಿದ ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು.
ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಗ್ಯಾರಂಟಿ ಯೋಜನೆ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಪ್ರಮುಖರಾದ ಟಿ.ಪಿ. ರಮೇಶ್, ಜನಾರ್ದನ, ಎಚ್.ಎಲ್. ದಿವಾಕರ, ಪ್ರೇಮ ಕುಮಾರ್, ನಗರಸಭೆ ಸದಸ್ಯರಾದ ಸತೀಶ್, ಚಂದ್ರಶೇಖರ್, ಮುತ್ತುರಾಜು, ಜುಲೇಕಾಬಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಸೀಲ್ದಾರ್ ಶ್ರೀಧರ, ಪ್ರಮುಖರಾದ ದೀಪಕ್ ಪೊನ್ನಪ್ಪ, ಪ್ರೇಮ ಕೃಷ್ಣ, ಸಿದ್ದೇಶ್, ಯಶೋಧ, ವಿನಯ ಕುಮಾರ್, ದೇವರಾಜು, ಗಣೇಶ್, ಸುದರ್ಶನ, ಕುಮಾರ, ಸುಧೀರ್, ವಾಸು, ಸಂದೀಪ್, ಪಾಲಾಕ್ಷ, ವೀರೇಂದ್ರ, ಕಿರಣ್, ಮುತ್ತಪ್ಪ, ಹರೀಶ್, ಎಸ್. ಹೊನ್ನೆಗೌಡ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಸಭಾ ಕಾರ್‍ಯಕ್ರಮಕ್ಕೂ ಮೊದಲು ನಗರದ ಕಾವೇರಿ ಕಲಾ ಕ್ಷೇತ್ರ ಬಳಿಯಿಂದ ಗಾಂಧಿ ಭವನದವರೆಗೆ ಮೆರವಣಿಗೆ ನಡೆಯಿತು. ಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಜಿಲ್ಲಾಧಿಕಾರಿ ಸೋಮಶೇರ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅವರು ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೆರವಣಿಗೆಗೆ ಚಾಲನೆ ನೀಡಿದರು.
ಅಸ್ಪೃಶ್ಯತೆ ಹಾಗೂ ಅಸಮಾನತೆಯ ನೋವು ಅನುಭವಿಸಿ, ಮೇಲು-ಕೀಳು, ಬಡವ-ಬಲ್ಲಿದ, ಶ್ರೇಷ್ಠ-ಕನಿಷ್ಠ ಹೀಗೆ ಹಲವು ವಿಭಿನ್ನತೆ ಹೊಂದಿರುವ ಸಮಾಜದಲ್ಲಿ ಸಂವಿಧಾನದ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಶ್ರಮಿಸಿದ್ದಾರೆ. ಇಂತಹ ಮಾಹಾನ್ ಚೇತನ ಅಂಬೇಡ್ಕರ್ ಅವರನ್ನು ಎಷ್ಟು ಸ್ಮರಿಸಿದರೂ ಸಾಲದು.
ಕೊಡಗು ಜಿಲ್ಲಾಧಿಕಾರಿ