ಕನ್ನಡಪ್ರಭ ವಾರ್ತೆ ಕೋಲಾರಕೋಳಿ ಸಾಕಾಣಿಕೆ ಕೃಷಿಯೆಂದು ಪರಿಗಣಿಸಿ, ಕುಕ್ಕುಟ ಉದ್ಯಮದ ಸಮರ್ಪಕ ನಿರ್ವಹಣೆಗೆ ಭೂ ಕಂದಾಯ ಕಾಯ್ದೆ ೧೯೬೪ರ ಕಾನೂನು ರೂಪಿಸಬೇಕು ಜೊತೆಗೆ ಕೋಳಿ ಸಾಕಾಣಿಕೆ ದರ ಕೆಜಿಗೆ ೧೨ ರು.ಗಳಿಗೆ ನಿಗದಿಪಡಿಸಲು ಅಗತ್ಯ ಕ್ರಮ ವಹಿಸಲು ರಾಜ್ಯ ಸರ್ಕಾರವನ್ನು ರಾಜ್ಯ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದಿಂದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.ಸಂಘಟನೆಯ ರಾಜ್ಯ ಉಪಾಧ್ಯಕ್ಷ ಸುಗಟೂರು ಶ್ರೀಧರ್ ರೆಡ್ಡಿ ಮಾತನಾಡಿ, ಕೋಳಿ ಸಾಕಾಣಿಕೆ ಕೃಷಿಯೆಂದು ಪರಿಗಣಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಹಲವು ಬಾರಿ ದುಂಡು ಮೇಜಿನ ಸಭೆ, ಹೋರಾಟ ನಡೆಸಿದ್ದೇವೆ, ಕೋಳಿ ಸಾಕಾಣಿಕೆದಾರರ ಬೇಡಿಕೆಗಳ ಸಂಬಂಧ ಪಶು ಸಂಗೋಪನಾ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದೇವೆ, ಆದರೂ ಯಾವುದೇ ರೀತಿಯ ಕ್ರಮ ವಹಿಸಿಲ್ಲ ಕೂಡಲೇ ರಾಜ್ಯ ಸರ್ಕಾರವು ಕುಕ್ಕುಟ ಉದ್ಯಮದ ಬಗ್ಗೆ ಕಾಳಜಿ ವಹಿಸಬೇಕು ಎಂದು ಒತ್ತಾಯಿಸಿದರು.ಕೋಳಿ ಸಾಕಣೆ ಪ್ರೋತ್ಸಾಹಿಸಿ
ಈ ಸಂದರ್ಭದಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಅಧ್ಯಕ್ಷ ಜೆ.ಸಿ.ಮಂಜುನಾಥ್, ತಾಲೂಕು ಅಧ್ಯಕ್ಷ ವೆಂಕಟೇಶಪ್ಪ, ರಾಜ್ಯ ರೈತ ಸಂಘದ ಕಾರ್ಯಾದ್ಯಕ್ಷ ಅಬ್ಬಣಿ ಶಿವಪ್ಪ, ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಪದಾಧಿಕಾರಿಗಳಾದ ಗಿರೀಶ್ ಗೌಡ, ಪಿ.ಶ್ರೀನಿವಾಸ್, ನಟರಾಜ್, ಕಿರಣ್, ರಮೇಶ್, ಅಂಬರೀಶ್ ಇದ್ದರು.