ಕನ್ನಡಪ್ರಭ ವಾರ್ತೆ ಬೀರೂರು
ಪಟ್ಟಣದ ಸರಸ್ವತಿಪುರಂ ಬಡಾವಣೆಯಲ್ಲಿ ಬುಧವಾರ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿರುವ ‘ಓಟ್ ಚೋರಿ’ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಭಾರತಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಸೂಕ್ತ ಎಂಬುದನ್ನು ಸ್ವಾತಂತ್ರ‍್ಯ ಹೋರಾಟಗಾರರು ೧೯೪೭ಕ್ಕೂ ಮುನ್ನವೇ ಅರಿತಿದ್ದರು. ನಿಷ್ಪಕ್ಷಪಾತ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ಸ್ವಾಯತ್ತತೆ ನೀಡಿದ್ದರು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರುವವರೆಗೂ ಚುನಾವಣಾ ಆಯೋಗದ ಸಾಂವಿಧಾನಿಕ ಚೌಕಟ್ಟಿಗೆ ಧಕ್ಕೆ ಉಂಟಾಗಿರಲಿಲ್ಲ. ಆದರೆ, ಬಿಜೆಪಿ ಅಧಿಕಾರ ಹಿಡಿದ ಬಳಿಕ ಚುನಾವಣಾ ಆಯೋಗವನ್ನು ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದೆ ಎಂದು ದೂರಿದರು.ಶಾಸಕ ಕೆ.ಎಸ್.ಆನಂದ್ ಮಾತನಾಡಿ, ‘ಮತಗಳ್ಳತನ ಮಾಡುವ ಮೂಲಕ ಬಿಜೆಪಿ ಅಧಿಕಾರ ಹಿಡಿಯುತ್ತಿದೆ. ಮತದಾರರ ಪಟ್ಟಿಯಲ್ಲಿ ಸುಳ್ಳು ಹೆಸರು ಇರುವುದನ್ನು ಕಾಂಗ್ರೆಸ್ ಸಾಕ್ಷ್ಯ ಸಮೇತ ಜನರ ಮುಂದಿಟ್ಟಿದೆ. ಒಬ್ಬ ಮತದಾರ ಹಲವು ಕ್ಷೇತ್ರಗಳಲ್ಲಿ ಮತ ಚಲಾವಣೆ ಮಾಡಿರುವುದು ಪತ್ತೆಯಾಗಿದೆ. ಇದರ ವಿಡಿಯೊ ದಾಖಲೆಗಳನ್ನು ಬಿಡುಗಡೆ ಮಾಡಲು ಚುನಾವಣಾ ಆಯೋಗ ಮೀನ–ಮೇಷ ಎಣಿಸುತ್ತಿದೆ. ಆಯೋಗ ಪಾರ‍್ಶಕ ಹಾಗೂ ಪ್ರಾಮಾಣಿಕ ನಡವಳಿಕೆ ಹೊಂದಿದ್ದರೆ ಈ ಹಿಂಜರಿಕೆ ಏಕೆ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಕಾರ್ಯಕರ್ತರು ಬೂತ್‌ಮಟ್ಟದಿಂದ ಹಿಡಿದು ಕ್ಷೇತ್ರದ ಮತಪಟ್ಟಿಯನ್ನು ಆಗಾಗ ಪರಿಶೀಲನೆ ನಡೆಸಬೇಕು. ಸದ್ಯದಲ್ಲಿಯೇ ಗ್ರಾಮ ಪಂಚಾಯಿತಿ ಮತ್ತು ಪುರಸಭೆ ಚುನಾವಣೆಗಳು ಎದುರಾಗಲಿದ್ದು ಈಗಿನಿಂದಲೇ ಮತಪಟ್ಟಿಯನ್ನು ತರಿಸಿಕೊಂಡು ಅದರಲ್ಲಿ ನಿಮ್ಮವರ ಹೆಸರು ಏನಾದರೂ ಅದಲು ಬದಲಿಯಾಗಿದ್ದರೇ ಸರಿಪಡಿಕೊಳ್ಳಿ ಎಂದು ಎಚ್ಚರಿಸಿದರು.
ಪುರಸಭೆ ಮಾಜಿ ಅಧ್ಯಕ್ಷ ವಿ.ಜಯರಾಂ, ಸದಸ್ಯರಾದ ಗಂಗಾಧರ್, ಮಾನಿಕ್ ಭಾಷ, ಬಿ.ಕೆ.ಶಶಿಧರ್, ಎಲೆರವಿಕುಮಾರ್, ರಾಜು, ಲೋಕೇಶಪ್ಪ, ಯುತ್ ಕಾಂಗ್ರೆಸ್ ಅಧ್ಯಕ್ಷ ಮನೋಹರ್, ಅಲ್ಪಸಂಖ್ಯಾತರ ರಾಜ್ಯ ಕಾರ್ಯದರ್ಶಿ ಆರೀಫ್, ಜಿಯಾವುಲ್ಲಾ, ಮುಖಂಡರಾದ ಬಾವಿಮನೆ ಮಧು, ಗಂಟೆಕುಮಾರ್ ಸೇರಿದಂತೆ ಮತ್ತಿತರ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಸಿದ್ದರು.