ಕ್ರೀಡೆ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆಸಕ್ತಿ ವಹಿಸಿ: ಮಧು ಜಿ.ಮಾದೇಗೌಡ

KannadaprabhaNewsNetwork |  
Published : Aug 31, 2026, 01:45 AM IST
30ಕೆಎಂಎನ್ ಡಿ17 | Kannada Prabha

ಸಾರಾಂಶ

ಪ್ರಸ್ತುತ ಬಹುತೇಕ ವಿದ್ಯಾರ್ಥಿಗಳು ಶಿಕ್ಷಣ ಮತ್ತು ಓದಿನ ಕಡೆಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ಶಿಕ್ಷಣ ಎಷ್ಟು ಮುಖ್ಯವೋ, ವಿದ್ಯಾರ್ಥಿಗಳ ಸರ್ವತೋಮುಖ ವ್ಯಕ್ತಿತ್ವ ವಿಕಾಸಕ್ಕೆ ಕ್ರೀಡೆಯೂ ಅಷ್ಟೆ ಮಹತ್ವದ್ದಾಗಿದೆ. ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಆರೋಗ್ಯವನ್ನು ಉತ್ತಮಗೊಳಿಸುವ ಜೊತೆಗೆ ಮಾನಸಿಕ ಉಲ್ಲಾಸ, ಚೈತನ್ಯ, ಆತ್ಮವಿಶ್ವಾಸ ಹಾಗೂ ಸಕಾರಾತ್ಮಕ ಮನೋಭಾವವನ್ನು ಹೆಚ್ಚಿಸುತ್ತದೆ.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ವಿದ್ಯಾರ್ಥಿಗಳು ಕೇವಲ ಓದಿನ ಕಡೆಗೆ ಮಾತ್ರ ಗಮನಹರಿಸದೆ ಕ್ರೀಡೆ ಸೇರಿದಂತೆ ಇತರೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಭಾರತೀ ವಿದ್ಯಾ ಸಂಸ್ಥೆ ಚೇರ್‍ಮನ್, ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ತಿಳಿಸಿದರು.ಭಾರತೀ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಭಾರತೀ ಎಜುಕೇಷನ್ ಟ್ರಸ್ಟ್‌ನ ಅಂಗ ಸಂಸ್ಥೆಗಳ ವತಿಯಿಂದ ಪುರುಷ ವಿದ್ಯಾರ್ಥಿಗಳಿಗಾಗಿ ಆಯೋಜಿಸದ್ದ ವಾಲಿಬಾಲ್ ಪಂದ್ಯಾವಳಿ ಸಮಾರೋಪ ಸಮಾರಂಭದಲ್ಲಿ ವಿಜೇತ ಹಾಗೂ ರನ್ನರ್-ಅಪ್ ತಂಡಗಳ ಆಟಗಾರರಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಪ್ರಸ್ತುತ ಬಹುತೇಕ ವಿದ್ಯಾರ್ಥಿಗಳು ಶಿಕ್ಷಣ ಮತ್ತು ಓದಿನ ಕಡೆಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ಶಿಕ್ಷಣ ಎಷ್ಟು ಮುಖ್ಯವೋ, ವಿದ್ಯಾರ್ಥಿಗಳ ಸರ್ವತೋಮುಖ ವ್ಯಕ್ತಿತ್ವ ವಿಕಾಸಕ್ಕೆ ಕ್ರೀಡೆಯೂ ಅಷ್ಟೆ ಮಹತ್ವದ್ದಾಗಿದೆ. ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಆರೋಗ್ಯವನ್ನು ಉತ್ತಮಗೊಳಿಸುವ ಜೊತೆಗೆ ಮಾನಸಿಕ ಉಲ್ಲಾಸ, ಚೈತನ್ಯ, ಆತ್ಮವಿಶ್ವಾಸ ಹಾಗೂ ಸಕಾರಾತ್ಮಕ ಮನೋಭಾವವನ್ನು ಹೆಚ್ಚಿಸುತ್ತದೆ ಎಂದರು.

ಕ್ರೀಡಾ ಪ್ರತಿಭೆಯನ್ನು ಉತ್ತೇಜಿಸುವ ಉದ್ದೇಶದಿಂದ ಸಂಸ್ಥೆಯಿಂದ ಶೀಘ್ರ ಒಳಾಂಗಣ ಕ್ರೀಡಾಂಗಣವನ್ನು ಪ್ರಾರಂಭಿಸುವ ಯೋಜನೆ ರೂಪಿಸಲಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಕ್ರೀಡಾ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಬಾಸ್ಕೆಟ್‌ಬಾಲ್, ಬ್ಯಾಡ್ಮಿಂಟನ್ ಹಾಗೂ ಕಬಡ್ಡಿ, ಯೋಗಾ ಹಾಲ್ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಅಗತ್ಯ ಸೌಲಭ್ಯ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇದಕ್ಕೂ ಮುನ್ನ ಪಂದ್ಯಾವಳಿಗೆ ಚಾಲನೆ ನೀಡಿದ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಎಸ್. ನಾಗರಾಜ್ ಮಾತನಾಡಿ, ಕ್ರೀಡೆಯಲ್ಲಿ ಸೋಲು ಮತ್ತು ಗೆಲುವು ಎರಡನ್ನೂ ಸಮಾನ ಮನೋಭಾವದಿಂದ ಸ್ವೀಕರಿಸುವ ಗುಣವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದರು.

ಕಾಲೇಜು ಪ್ರಾಂಶುಪಾಲ ಡಾ.ಎಂ.ಎಸ್.ಮಹದೇವಸ್ವಾಮಿ ಮಾತನಾಡಿ, ಕ್ರೀಡೆಯು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸದೃಢಗೊಳಿಸಲು ಅತ್ಯಗತ್ಯವಾಗಿದೆ ಎಂದರು.

ಪಂದ್ಯಾವಳಿಯಲ್ಲಿ ವಿವಿಧ ಅಂಗ ಸಂಸ್ಥೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆ ಪ್ರದರ್ಶಿಸಿದರು. ತೀವ್ರ ಪೈಪೋಟಿಯಿಂದ ಕೂಡಿದ ಪಂದ್ಯಗಳು ಕ್ರೀಡಾಶಕ್ತರ ಗಮನ ಸೆಳೆದವು. ಈ ವೇಳೆ ಭಾರತೀ ಹೆಲ್ತ್ ಸೈನ್ಸ್ ನಿರ್ದೇಶಕ ಡಾ. ತಮಿಳ್‌ಮಣಿ, ಐಕ್ಯೂಎಸಿ. ಸಂಯೋಜಕ ಎಂ.ಪಿ.ಡಾ.ತೇಜೇಶ್‌ಕುಮಾರ್ , ಡಾ. ಚಂದನ್, ಡಾ. ಎಸ್.ಎಲ್.ಸುರೇಶ್, ಭಾರತೀ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಎಸ್.ಶೋಭಾ, ಸಿ.ರಮ್ಯಾ, ಆಡಳಿತಾಧಿಕಾರಿ ಎಸ್. ಜವರೇಗೌಡ, ಜಿ.ಬಿ.ಪಲ್ಲವಿ, ಸಿ.ವಿ.ಮಲ್ಲಿಕಾರ್ಜುನ, ಬಿ.ಕೆ. ಕೃಷ್ಣ, ದೈಹಿಕ ಶಿಕ್ಷಕ ನಾಗರಾಜು ಸೇರಿದಂತೆ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳಲ್ಲಿ ಉತ್ತಮ ಸಂಸ್ಕಾರ, ಕ್ರೀಡಾಸಕ್ತಿ ಬೆಳೆಸಬೇಕು: ಚಲುವರಾಯಸ್ವಾಮಿ
ಯುವಕರೇ, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಿ: ಶಂಕರಲಿಂಗೇಗೌಡ