ಶ್ರೀ ವಿಷ್ಣು ದೇಗುಲಗಳಲ್ಲಿ ಶ್ರಾವಣ ಸಂಭ್ರಮ, ವಿಶೇಷ ಪೂಜೆ, ಅಲಂಕಾರ, ಅನ್ನಪ್ರಸಾದ

KannadaprabhaNewsNetwork |  
Published : Aug 23, 2026, 01:45 AM IST
೨೨ಕೆಎಂಎನ್‌ಡಿ-೨ಮಂಡ್ಯ ತಾಲೂಕಿನ ಸಾತನೂರು ಬೆಟ್ಟದಲ್ಲಿರುವ ಶ್ರೀ ಕಂಬದ ನರಸಿಂಹಸ್ವಾಮಿ ದೇವರಿಗೆ ವಿಶೇಷ ಅಲಂಕಾರ ಮಾಡಿರುವುದು. | Kannada Prabha

ಸಾರಾಂಶ

ದೇವಾಲಯದ ವತಿಯಿಂದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಜೊತೆಗೆ ಭಕ್ತಾದಿಗಳು ಸಹ ಬೆಟ್ಟದ ಕೆಳಗೆ ಅನ್ನಪ್ರಸಾದವನ್ನು ನೀಡುತ್ತಿದ್ದುದು ಕಂಡುಬಂತು. ಭಕ್ತರು ಜಾತ್ರೆಯ ರೀತಿಯಲ್ಲಿ ದೇವಾಲಯಕ್ಕೆ ಹರಿದುಬರುತ್ತಿದ್ದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಎರಡನೇ ಶ್ರಾವಣ ಶನಿವಾರದ ಅಂಗವಾಗಿ ಜಿಲ್ಲೆಯ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಭಕ್ತರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ತಾಲೂಕಿನ ಕೊಮ್ಮೇರಹಳ್ಳಿಯಲ್ಲಿರುವ ಶ್ರೀ ಕಂಬದ ನರಸಿಂಹಸ್ವಾಮಿ ದೇವಾಲಯದಲ್ಲಿ ಶುಕ್ರವಾರದಿಂದಲೇ ದೇವಾಲಯದ ಆವರಣವನ್ನು ತಳಿರು ತೋರಣ, ಹೂಗಳಿಂದ ಶೃಂಗರಿಸಲಾಗಿತ್ತು. ದೇವರಿಗೆ ವಿವಿಧ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು. ಏಕಶಿಲೆಯ ಶ್ರೀ ಕಂಬದ ನರಸಿಂಹಸ್ವಾಮಿ ದೇವರಿಗೆ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಅಲಂಕಾರ ಮಾಡಿದ್ದು ವಿಶೇಷವಾಗಿತ್ತು.

ದೇವಾಲಯದ ವತಿಯಿಂದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಜೊತೆಗೆ ಭಕ್ತಾದಿಗಳು ಸಹ ಬೆಟ್ಟದ ಕೆಳಗೆ ಅನ್ನಪ್ರಸಾದವನ್ನು ನೀಡುತ್ತಿದ್ದುದು ಕಂಡುಬಂತು. ಭಕ್ತರು ಜಾತ್ರೆಯ ರೀತಿಯಲ್ಲಿ ದೇವಾಲಯಕ್ಕೆ ಹರಿದುಬರುತ್ತಿದ್ದರು.

ನಗರದ ಪ್ರಮುಖ ದೇವಾಲಯಗಳಲ್ಲೊಂದಾದ ಶ್ರೀ ಲಕ್ಷ್ಮಿ ಜನಾರ್ಧನಸ್ವಾಮಿ ದೇವಾಲಯ, ಶ್ರೀ ಶ್ರೀನಿವಾಸ ದೇವಾಲಯ, ಹೊಸಹಳ್ಳಿ ಬಡಾವಣೆಯ ಶ್ರೀ ಶ್ರೀನಿವಾಸ ದೇವಾಲಯ, ಭೋವಿ ಕಾಲೋನಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಾಲಯ, ನಗರದ ಮೈಸೂರು-ಬೆಂಗಳೂರು ಹೆದ್ದಾರಿ ಕಲ್ಲಹಳ್ಳಿಯ ಆಂಜನೇಯ ದೇವಸ್ಥಾನಗಳಿಗೆ ಬೆಳಗ್ಗೆಯಿಂದಲೇ ಭಕ್ತರ ದಂಡು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ, ಪುನೀತರಾದರು.

ಮದ್ದೂರು, ಮಳವಳ್ಳಿ, ಕೆ.ಆರ್. ಪೇಟೆ, ನಾಗಮಂಗಲ, ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ತಾಲೂಕಿನ ವಿಷ್ಣು ದೇವಾಲಯಗಳಲ್ಲಿ ಎರಡನೇ ಶ್ರಾವಣ ಶನಿವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಗಳು ನಡೆದವು. ಮೇಲುಕೋಟೆ, ಶ್ರೀರಂಗಪಟ್ಟಣ, ಕೆ.ಆರ್. ಪೇಟೆಯ ಭೂವರಾಹನಾಥ ಸ್ವಾಮಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ತೆರಳಿ ಪೂಜೆ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಾಲೂಕು ಅಭಿವೃದ್ಧಿಗೆ ತಂದೆಯಕನಸು ಸಾಕಾರವೇ ನನ್ನ ಗುರಿ
ಇಂದು ಬಳಘಟ್ಟ ಗ್ರಾಮಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ: ಸಿ.ಎಸ್.ಪುಟ್ಟರಾಜು