ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ವಿತರಿಸಿದ ಡಾ. ಯತೀಂದ್ರ

KannadaprabhaNewsNetwork |  
Published : Aug 02, 2025, 01:45 AM IST
53 | Kannada Prabha

ಸಾರಾಂಶ

ವರುಣ ಕ್ಷೇತ್ರ ವ್ಯಾಪ್ತಿಯ ಸರಗೂರು ಗ್ರಾಮ

ಕನ್ನಡಪ್ರಭ ವಾರ್ತೆ ನಂಜನಗೂಡು

ತಾಲೂಕಿನ ವರುಣ ಕ್ಷೇತ್ರ ವ್ಯಾಪ್ತಿಯ ಸರಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶುಕ್ರವಾರ ಆಶ್ರಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಶಾಲಾ ಸಮವಸ್ತ್ರ, ಬ್ಯಾಗ್, ಬ್ಯಾಂಡ್‌ಸೆಟ್, ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.

ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಆಶ್ರಯ ಚಾರಿಟಬಲ್ ಟ್ರಸ್ಟ್ ಕಳೆದ ಎರಡು ವರ್ಷಗಳಿಂದ ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯವಾದ ಸಮವಸ್ತ್ರ, ಲೇಖನ ಸಾಮಗ್ರಿಗಳನ್ನು ನೀಡುವ ಮೂಲಕ ಸಮಾಜ ಮುಖಿ ಸೇವೆ ಮಾಡುತ್ತಿದ್ದಾರೆ, ಟ್ರಸ್ಟ್ ತಗಡೂರಿನಲ್ಲಿ ಅಂಗವಿಕಲರಿಗೆ ಸಲಕರಣೆಗಳನ್ನು ವಿತರಿಸುವ ಮೂಲಕ ಸಹಾಯ ಹಸ್ತ ಚಾಚಿತ್ತು, ಇದೇ ರೀತಿ ಮುಂದೆಯೂ ಸಹ ಸಮಾಜ ಸೇವೆಯನ್ನು ಮಾಡುವ ಶಕ್ತಿಯನ್ನು ಟ್ರಸ್ಟ್‌ನ ಸಂಜಯ್ ಪಾಲ್ ಅವರಿಗೆ ಭಗವಂತ ನೀಡಲಿ ಎಂದು ಹೇಳಿದರು.

ಆಶ್ರಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂಜಯ್ ಪಾಲ್ ಮಾತನಾಡಿ, ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜ್ ಅವರ ಹುಟ್ಟೂರಿನಲ್ಲಿ ಅವರ ಆಶಯದಂತೆ ವಿದ್ಯಾರ್ಥಿಗಳಿಗೆ ನೆರವು ನೀಡಲಾಗಿದೆ, ಪ್ರತಿವರ್ಷ ಕ್ಷೇತ್ರದ 50 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವಾಗಿ ನಗದು ಪುರಸ್ಕಾರ ನೀಡಲು ಟ್ರಸ್ಟ್ ಬದ್ದವಾಗಿದೆ ಎಂದು ಹೇಳಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ವರುಣ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ರಾಜ್ಯ ವಾಲ್ಮೀಕಿ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜು, ಕಾಡಾ ಅಧ್ಯಕ್ಷ ಮರಿಸ್ವಾಮಿ, ತಾಪಂ ಮಾಜಿ ಸದಸ್ಯ ಪದ್ಮನಾಭ, ಗ್ರಾಪಂ ಅಧ್ಯಕ್ಷೆ ಮಹದೇವಮ್ಮ, ಉಪಾದ್ಯಕ್ಷೆ ಸುಧಾ, ನಗರ್ಲೆ ಸರ್ವೇಶ, ನಾರಾಯಣ ನಾಯಕ, ಭದ್ರನಾಯಕ, ಮುಖಂಡರಾದ ನಾಗರಾಜು, ಗಿರಿಧರ್, ಗುರುಪಾದು, ಮಹದೇವಸ್ವಾಮಿ, ಮೋಹನ್, ಟಿ.ಎನ್. ನರಸಿಂಹಮೂರ್ತಿ, ಮನು, ವೀರೇಶ್, ಪ್ರಕಾಶ್, ಪ್ರಮೋದ್ ಕುಮಾರ್, ಗ್ರಾಪಂ ಸದಸ್ಯರಾದ ಧರ್ಮೇಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಇದ್ದರು.

---------------

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ