ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿನಿಯರು ಎಸ್‌ಜಿಎಫ್ ಈಜು ಸ್ಪರ್ಧೆಗೆ ಆಯ್ಕೆ

KannadaprabhaNewsNetwork |  
Published : Oct 05, 2024, 01:35 AM IST
111 | Kannada Prabha

ಸಾರಾಂಶ

ಅನರ್ಘ್ಯ ಎ.ಆರ್. 17ರ ವರ್ಷದೊಳಗಿನ ಹುಡುಗಿಯರ ಈಜು ಸ್ಪರ್ಧೆಯ 400 ಮೀ. ಇಂಡಿವಿಜುವಲ್ ಮೆಡ್ಲೆಯಲ್ಲಿ ಚಿನ್ನ, 200 ಮೀ ಇಂಡಿವಿಜುವಲ್ ಮೆಡ್ಲೆಯಲ್ಲಿ ಬೆಳ್ಳಿ ಪದಕ ಪಡೆದು ಎಸ್‌ಜಿಎಫ್ ಇಂಡಿಯಾ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಬಂಟ್ವಾಳ

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಆಶ್ರಯದಲ್ಲಿ ಮಧ್ಯಪ್ರದೇಶದ ಮಂಡ್ಸೌರು ಎಂಬಲ್ಲಿ ಜರುಗಿದ ರಾಷ್ಟ್ರಮಟ್ಟದ ಈಜು ಚಾಂಪಿಯನ್ ಶಿಪ್‌ನಲ್ಲಿ ಇಂಡಿವಿಜುವಲ್ ಮೆಡ್ಲೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ 9ನೇ ತರಗತಿಯ ಅನರ್ಘ್ಯ ಎ.ಆರ್. 17ರ ವರ್ಷದೊಳಗಿನ ಹುಡುಗಿಯರ ಈಜು ಸ್ಪರ್ಧೆಯ 400 ಮೀ. ಇಂಡಿವಿಜುವಲ್ ಮೆಡ್ಲೆಯಲ್ಲಿ ಚಿನ್ನ, 200 ಮೀ ಇಂಡಿವಿಜುವಲ್ ಮೆಡ್ಲೆಯಲ್ಲಿ ಬೆಳ್ಳಿ ಪದಕ ಪಡೆದು ಎಸ್‌ಜಿಎಫ್ ಇಂಡಿಯಾ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇದೇ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಅನನ್ಯ ಎ.ಆರ್. 14 ವರ್ಷದೊಳಗಿನ ಹುಡುಗಿಯರ ಈಜು ಸ್ಪರ್ಧೆಯಲ್ಲಿ 200 ಮೀ ಬಟರ್ ಫ್ಲೈಯಲ್ಲಿ ಚಿನ್ನ ಪಡೆದು ಎಸ್‌ಜಿಎಫ್‌ ಇಂಡಿಯಾ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈ ಇಬ್ಬರು ಬಂಟ್ವಾಳ ತಾಲೂಕು ಪಂಚಾಯಿತಿಯ ಸಿಬ್ಬಂದಿ ಅಶೋಕ ಕುಮಾರ್ ಬರಿಮಾರು ಮತ್ತು ದೈಹಿಕ ಶಿಕ್ಷಣ ಶಿಕ್ಷಕಿ ರೋಹಿಣಿ ದಂಪತಿಯ ಪುತ್ರಿಯರು. ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್‌ಪೆಕ್ಟರ್ ಬಿ.ಕೆ. ನಾಯ್ಕ ಎಂಬವರ ಶಿಷ್ಯಯರಾಗಿದ್ದು, ಅಲೋಷಿಯಸ್ ವಿವನ್ ಈಜುಕೊಳದ ಮುಖ್ಯ ತರಬೇತುದಾರರಾದ ಲೋಕರಾಜ್ ವಿಟ್ಲ ಮತ್ತು ಸ್ಯಾಂಜು ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ಕೆಮಿಕಲ್‌ ಫ್ಯಾಕ್ಟರಿಗಳ ಮೇಲೀಗ ಪೊಲೀಸರಿಂದ ಅಲರ್ಟ್‌
2000 ಬೋಧಕ ಹುದ್ದೆ ಭರ್ತಿಗೆ ಅಸ್ತು : ನೇರ ನೇಮಮಾತಿ ಮೂಲಕ ಭರ್ತಿ