ಭದ್ರಾವತಿಗೆ ಎನ್‌ಡಿಎ ಪ್ರಥಮ ರ್‍ಯಾಂಕ್ ವಿಜೇತೆ ಶ್ರೇಯ

KannadaprabhaNewsNetwork |  
Published : Nov 10, 2026, 02:00 AM IST
ಕೇಂದ್ರ ಲೋಕ ಸೇವಾ ಆಯೋಗ ರಾಷ್ಟ್ರೀಯ ರಕ್ಷಣಾ ಅಕಾಡೆಮಿ(ಎನ್‌ಡಿಎ)ಗೆ ನಡೆಸುವ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಪಡೆದುಕೊಂಡಿರುವ ಶ್ರೇಯ ಎನ್. ಗೌಡ ಸೋಮವಾರ ಭದ್ರಾವತಿ ನಗರಕ್ಕೆ ಆಗಮಿಸಿದ್ದು, ಇವರನ್ನು ಕ್ಷೇತ್ರದ ಜನತೆ ಅದ್ದೂರಿಯಾಗಿ ಸ್ವಾಗತಿಸಿದರು. | Kannada Prabha

ಸಾರಾಂಶ

Shreya, NDA First-Rank Holder, from Bhadravathi

-ಅದ್ಧೂರಿ ಸ್ವಾಗತ ಕೋರಿ ಅಭಿನಂದಿಸಿದ ಕ್ಷೇತ್ರದ ಜನತೆ

ಭದ್ರಾವತಿ : ಕೇಂದ್ರ ಲೋಕ ಸೇವಾ ಆಯೋಗ ರಾಷ್ಟ್ರೀಯ ರಕ್ಷಣಾ ಅಕಾಡೆಮಿ(ಎನ್‌ಡಿಎ)ಗೆ ನಡೆಸುವ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಪಡೆದುಕೊಂಡಿರುವ ಶ್ರೇಯ ಎನ್. ಗೌಡ ಸೋಮವಾರ ನಗರಕ್ಕೆ ಆಗಮಿಸಿದ್ದು, ಇವರನ್ನು ಕ್ಷೇತ್ರದ ಜನತೆ ಅದ್ಧೂರಿಯಾಗಿ ಸ್ವಾಗತಿಸಿದರು.

ತಾಲೂಕಿನ ತಿಮ್ಲಾಪುರ ನಿವಾಸಿಗಳಾದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನೌಕರ ಜೆ. ನಾಗೇಂದ್ರ ಹಾಗು ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಬಿ.ಎಂ ಆಶಾ ದಂಪತಿ ಪುತ್ರಿಯಾಗಿರುವ ಶ್ರೇಯ ಎನ್. ಗೌಡ ಎನ್‌ಡಿಎ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಪಡೆಯುವ ಮೂಲಕ ರಾಷ್ಟ್ರಮಟ್ಟದಲ್ಲಿ ಉಕ್ಕಿನ ನಗರದ ಕೀರ್ತಿ ಪತಾಕೆ ಹಾರಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ನಗರಕ್ಕೆ ಆಗಮಿಸಿದ ಇವರನ್ನು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವಿಐಎಸ್‌ಎಲ್ ಕಾರ್ಖಾನೆ ನೌಕರರು, ಸ್ಥಳೀಯ ಮುಖಂಡರು, ಬಂಧು-ಬಳಗದವರು ಅದ್ದೂರಿಯಾಗಿ ಸ್ವಾಗತಿಸಿ ಅಭಿನಂದನೆ ಸಲ್ಲಿಸಿದರು.

ಕಾರ್ಮಿಕರ ಸಂಭ್ರಮ:ವಿಐಎಸ್‌ಎಲ್ ಕಾರ್ಖಾನೆ ನೌಕರನ ಮಗಳು ದೇಶಕ್ಕೆ ಪ್ರಥಮ ರ್‍ಯಾಂಕ್ ಪಡೆದುಕೊಂಡಿರುವುದು ಸಮಸ್ತ ನೌಕರರಿಗೆ ಹೆಮ್ಮೆಯ ಸಂಗತಿಯಾಗಿದ್ದು, ಶ್ರೇಯ ಎನ್. ಗೌಡ ಇತರರಿಗೆ ಮಾದರಿಯಾಗಿದ್ದಾರೆಂದು ಕಾರ್ಖಾನೆ ಮುಖ್ಯದ್ವಾರದ ಮುಂಭಾಗ ಕಾರ್ಮಿಕರು ಅವರನ್ನು ಅಭಿನಂದಿಸಿ ಸಂಭ್ರಮ ವ್ಯಕ್ತಪಡಿಸಿದರು. ಕಾರ್ಮಿಕ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಗುತ್ತಿಗೆ ಹಾಗು ನಿವೃತ್ತ ಕಾರ್ಮಿಕರ ಸಂಘದ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು. ಡಿ೯-ಬಿಡಿವಿಟಿ೨

ಕೇಂದ್ರ ಲೋಕ ಸೇವಾ ಆಯೋಗ ರಾಷ್ಟ್ರೀಯ ರಕ್ಷಣಾ ಅಕಾಡೆಮಿ(ಎನ್‌ಡಿಎ)ಗೆ ನಡೆಸುವ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಪಡೆದುಕೊಂಡಿರುವ ಶ್ರೇಯ ಎನ್. ಗೌಡ ಸೋಮವಾರ ಭದ್ರಾವತಿ ನಗರಕ್ಕೆ ಆಗಮಿಸಿದ್ದು, ಇವರನ್ನು ಕ್ಷೇತ್ರದ ಜನತೆ ಅದ್ಧೂರಿಯಾಗಿ ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

12, 13ರಂದು ಪುಣ್ಯಾರಾಧನೆ, ಸ್ಮರಣೋತ್ಸವ, ಜನಜಾಗೃತಿ ಧರ್ಮ ಸಮ್ಮೇಳನ
ಟನಲ್ ಮಾಡಿದ್ರೂ ಆಗಲ್ಲ, ಎಲಿವೇಟೆಡ್‌ ಮಾಡಿದರೂ ಅಪಾದನೆ: ಡಿಕೆಶಿ ಆಕ್ರೋಶ