ಶ್ರೀಅಜ್ಜಪ್ಪಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದ ಅಂಗವಾಗಿ ತೊಣ್ಣೂರು ಕೆರೆಯಿಂದ ಪೂಜೆ ಸಲ್ಲಿಸಿ ಕನ್ಯೆಯರಿಂದ ಗಂಗೆ ತಂದು ದೇವರಿಗೆ ಅರ್ಪಿಸಿದರು. ಬಳಿಕ ದೇವಸ್ಥಾನದ ಆವರಣದಲ್ಲಿ ಗಣಪತಿ ಹೋಮ ಸೇರಿದಂತೆ ಹಲವು ಪೂಜೆ-ಪುನಸ್ಕಾರ, ಹೋಮ-ಹವನಗಳು ನಡೆದವು.
ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಶಿಂಢಬೋಗನಹಳ್ಳಿ ಗ್ರಾಮದಲ್ಲಿ ಶ್ರೀಅಜ್ಜಪ್ಪಸ್ವಾಮಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಜೀರ್ಣೋದ್ಧಾರ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.
ಶ್ರೀಅಜ್ಜಪ್ಪಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದ ಅಂಗವಾಗಿ ತೊಣ್ಣೂರು ಕೆರೆಯಿಂದ ಪೂಜೆ ಸಲ್ಲಿಸಿ ಕನ್ಯೆಯರಿಂದ ಗಂಗೆ ತಂದು ದೇವರಿಗೆ ಅರ್ಪಿಸಿದರು. ಬಳಿಕ ದೇವಸ್ಥಾನದ ಆವರಣದಲ್ಲಿ ಗಣಪತಿ ಹೋಮ ಸೇರಿದಂತೆ ಹಲವು ಪೂಜೆ-ಪುನಸ್ಕಾರ, ಹೋಮ-ಹವನಗಳು ನಡೆದವು.
ಮರುದಿನ ದೇವಸ್ಥಾನದ ಆವರಣದಲ್ಲಿ ಗೋಪೂಜೆ, ದ್ವಾರಪ್ರವೇಶ, ಅಜ್ಜಪ್ಪಸ್ವಾಮಿ ಪ್ರಾಣಪ್ರತಿಷ್ಠಾಪನೆ, ಕಳಸಸ್ಥಾಪನೆ, ಮೃತ್ಯುಂಜಯ ಹೋಮ, ನವಗ್ರಹಪೂಜೆ, ಶಕ್ತಿಪೂಜೆ, ಮಹಾಮಂಗಳಾರತಿ ಸೇರಿದಂತೆ ಹಲವಾರು ಪೂಜೆಗಳು ನಡೆದವು. ಬಳಿಕ ಗ್ರಾಮಸ್ಥರು, ಯಜಮಾನರ ನೇತೃತ್ವದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ನಡೆಸಲಾಯಿತು. ಬಳಿಕ ದೇವಸ್ಥಾನದ ಆವರಣದಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಸಲಾಯಿತು.
ದೇವಸ್ಥಾನದ ವ್ಯವಸ್ಥಾಪಕ ರಘು ಮಾತನಾಡಿ, ಗ್ರಾಮಸ್ಥರು, ಮುಖಂಡರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಸಹಕಾರದಿಂದ ದೇಗುಲವನ್ನು ಜೀರ್ಣೋದ್ಧಾರ ಮಾಡಲಾಗಿದೆ. ಎಲ್ಲರು ಸಹಕಾರ ಹೀಗೆ ಇರಲಿ ಎಂದು ಮನವಿ ಮಾಡಿದರು.
ಶಿಂಢಬೋಗನಹಳ್ಳಿ ಗ್ರಾಮಸ್ಥರು, ಯಜಮಾನರು, ಮುಖಂಡರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು, ಮುಖಂಡರು ಭಾಗವಹಿಸಿದ್ದರು.ಇಂದು ಶ್ರಮಶ್ರೀ ಪುರಸ್ಕಾರ ಸಮಾರಂಭ
ಕನ್ನಡಪ್ರಭ ವಾರ್ತೆ ಮಂಡ್ಯ
ಮಿಮ್ಸ್‌ನ ರಾಜ್ಯ ಸರ್ಕಾರಿ ಆಸ್ಪತ್ರೆ ಮೆಡಿಕಲ್ ಕಾಲೇಜು ಹೊರಗುತ್ತಿಗೆ ನೌಕರರ ಸಂಘದಿಂದ ಶುಕ್ರವಾರ (ಫೆ.೧೩) ರಂದು ಶ್ರಮಶ್ರೀ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಹೊರಗುತ್ತಿಗೆ ನೌಕರರ ಸಂಘ ಸ್ಥಾಪನೆಯ ಹದಿನೈದನೇ ವರ್ಷದ ಅಂಗವಾಗಿ ಈ ಸಮಾರಂಭ ಆಯೋಜಿಸಲಾಗಿದ್ದು, ಮಂಡ್ಯ ಮೆಡಿಕಲ್ ಕಾಲೇಜು, ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಐವರಿಗೆ ಪುರಸ್ಕಾರ ನೀಡಿ ಗೌರವಿಸಲಾಗುವುದು. ಬೆಳಗ್ಗೆ ೧೧ಕ್ಕೆ ಸಮಾರಂಭ ಆರಂಭವಾಗಲಿದ್ದು. ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆ ವಹಿಸಲಿದ್ದು. ಎಂ.ಬಿ.ನಾಗಣ್ಣಗೌಡ ಪ್ರಾಸ್ತವಿಕ ಮಾತನಾಡುವರು. ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ ಎಂ.ವಿನಯ್‌ಕುಮಾರ್, ಕನ್ನಡ ಪರಿಚಾರಕ ಕೆ.ಟಿ.ಹನುಮಂತು ಪ್ರಶಸ್ತಿ ಪ್ರದಾನ ಮಾಡುವರು.
ಮುಖ್ಯ ಅತಿಥಿಗಳಾಗಿ ಮಿಮ್ಸ್ ನಿರ್ದೇಶಕ ಡಾ.ಪಿ.ನರಸಿಂಹಸ್ವಾಮಿ.ಆಡಳಿತಾಧಿಕಾರಿ ಎಂ.ಪಿ ಕೃಷ್ಣಕುಮಾರ್. ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಶಿವಕುಮಾರ್. ನಗರಸಭೆ ಆಯುಕ್ತೆ ಯು.ಪಿ ಪಂಪಾಶ್ರೀ. ಜಿಲ್ಲಾ ಕಾರ್ಮಿಕ ಅಧಿಕಾರಿ ಸವಿತಾ ಪಾಲ್ಗೊಳ್ಳುವರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.