ವಿಶೇಷವಾಗಿ ಹೂವಿನ ಅಲಂಕಾರದೊಂದಿಗೆ ರಥಗೋಪುರ ನಿರ್ಮಾಣ
ಕಡೂರು ತಾಲೂಕಿನ ಇತಿಹಾಸ ಪ್ರಸಿದ್ಧ ಅಧಿದೇವತೆ ಅಂತರಘಟ್ಟೆ ಶ್ರೀ ದುರ್ಗಾಂಬ ದೇವಿ ಬ್ರಹ್ಮರಥೋತ್ಸವ ಶನಿವಾರ ಬೆಳಿಗ್ಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಕಳೆದ ಒಂದು ವಾರದಿಂದ ಜಾತ್ರಾಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡು, ಶನಿವಾರ ಬೆಳಿಗ್ಗೆ ದೇವಾಲಯದಲ್ಲಿ ಸಂಕಲ್ಪ ಸೇವೆಗಳ ಅಭಿಷೇಕ ಪೂಜಾ ಕಾರ್ಯಕ್ರಮಗಳು ಜರುಗಿದವು. ದೇವಾಲಯದ ಪ್ರಾಂಗಣದಲ್ಲಿ ದೇವಿ ಉತ್ಸವ ನಡೆಸಿದರು. ಈ ಬಾರಿ ವಿಶೇಷವಾಗಿ ಹೂವಿನ ಅಲಂಕಾರದೊಂದಿಗೆ ರಥಗೋಪುರ ನಿರ್ಮಾಣ ಮಾಡಿದ್ದು ಭಕ್ತರ ಕಣ್ಮನ ಸೆಳೆಯಿತು. ದೇವಿ ಉತ್ಸವ ಮೂರ್ತಿಯನ್ನು ಅಲಂಕೃತಗೊಂಡ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಬೆಳಿಗ್ಗೆ 7 ಗಂಟೆಗೆ ನಡೆದ ಬಲಿಪ್ರಧಾನಪೂಜೆ ನೆರವೇರಿಸಿ ನಂತರ ನೆರೆದಿದ್ದ ಸಾವಿರಾರು ಭಕ್ತರು ದೇವಿ ರಥವನ್ನು ಹರ್ಷೋದ್ಘಾಗರದೊಂದಿಗೆ ಎಳೆದು ಸಂಭ್ರಮಿಸಿದರು. ದೇವಿ ಉತ್ಸವ ಮೂರ್ತಿಯನ್ನು ರಥದಿಂದ ತೆರವುಗೊಳಿಸುವ ಮುನ್ನ ಬಾಳೆಹಣ್ಣಿನ ರಾಶಿಪೂಜೆಯೊಂದಿಗೆ ರಥೋತ್ಸವ ಸಂಪನ್ನಗೊಳಿಸಲಾಯಿತು.ರಥವು ಸಾಗುತ್ತಿದ್ದಂತೆ ಹರಕೆ ಹೊತ್ತಿದ್ದ ದೇವಿಯ ಭಕ್ತರು ಕಾಳು ಮೆಣಸು, ಕೊಬ್ಬರಿ, ಕಡ್ಲೆಕಾಯಿ, ಬಾಳೆಹಣ್ಣು ಜೊತೆಗೆ ಕೋಳಿಗಳನ್ನು ರಥಕ್ಕೆ ಎಸೆದು ಭಕ್ತಿಯನ್ನು ಸಮರ್ಪಿಸಿದರು. ಕಡೂರು, ತರೀಕೆರೆ, ಅಜ್ಜಂಪುರ, ಹೊಸದುರ್ಗ ಸೇರಿದಂತೆ ನೆರೆಯ ಜಿಲ್ಲೆಗಳ ಭಾಗಗಳಿಂದ ಸುಮಾರು 8 ಸಾವಿರಕ್ಕೂ ಅಧಿಕ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.
---ಕೋಟ್---
- ಕೆ.ಎಸ್.ಆನಂದ್, ಶಾಸಕ ಕಡೂರು.
(ಕಡೂರು ತಾಲ್ಲೂಕಿನ ಅಂತರಘಟ್ಟೆಯ ಶ್ರೀ ದುರ್ಗಾಂಬ ದೇವಿಯ ಬ್ರಹ್ಮರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.)