ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರು ಭಾಗದ ಸಾಂಪ್ರದಾಯಿಕ ಕೃಷಿ ಉತ್ಪನ್ನಗಳಾದ ಈ ಐತಿಹಾಸಿಕ ಕ್ಷಣವು ಮೈಸೂರಿನ ಪರಂಪರೆಯ ಕೃಷಿ ಉತ್ಪನ್ನಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೊಸ ಆಯಾಮವನ್ನು ನೀಡುವ ಮಹತ್ವದ ಹೆಜ್ಜೆಯಾಗಿ ಪರಿಣಮಿಸಿದೆ. ಇಂದು ದೂರದ ಮಾಲ್ಡಿವ್ಸ್‌ಗೆ ರಫ್ತು ಆಗುತ್ತಿರುವುದು ಅತ್ಯಂತ ಸಂತಸದ ಸಂಗತಿಯಾಗಿದೆ. ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಯ ಮುಂದಿನ ದಿನಗಳಲ್ಲಿ ಬೇರೆ ದೇಶಗಳಿಗೂ ರಫ್ತು ಆಗಲಿ ಎಂದು ಹಾರೈಸಿದರು.
ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದ ಬೆಳೆಗಳು ಹೊರದೇಶಗಳಲ್ಲಿನ ಬೇಡಿಕೆಯನ್ನು ಮನಗಂಡು ರೈತ ಬಾಂಧವರು ಸಾವಯವ ಕೃಷಿ ಹೆಚ್ಚು ಒತ್ತು ನೀಡಿ ತಮ್ಮ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಕಂಡುಕೊಳ್ಳಬೇಕೆಂದು ರೈತರಿಗೆ ಕರೆ ನೀಡಿದರು.ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಬಿ.ಎನ್. ಜ್ಞಾನೇಶ್ ಮಾತನಾಡಿ, ಭೌಗೋಳಿಕ ಬೆಳೆಗಳಾದ ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಯು ಈ ಭಾಗದಲ್ಲಿ ಹೆಚ್ಚು ಜನಪ್ರಿಯವಾಗಿದೆ, ಕಾರಣ ಇವುಗಳಲ್ಲಿನ ಹೇರಳ ಪೋಷಕಾಂಶಗಳೇ ಕಾರಣವಾಗಿದೆ. ಬೆಂಗಳೂರಿನ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ, ಮೈಸೂರಿನ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಯನ್ನು ಹೊರದೇಶದ ಮಾಲ್ಡಿವ್ಸ್‌ಗೆ ರಪ್ತು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿಯೂ ಸಹ ಬೇರೆ ದೇಶಗಳಿಗೆ ರಫ್ತು ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಮೈಸೂರಿನ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂಗಡಿ ಮಾತನಾಡಿ, ಮೈಸೂರಿನ ಜಿಐ ಟ್ಯಾಗ್ ನ ಬೆಳೆಗಳಾದ ನಂಜನಗೂಡು ರಸಬಾಳೆ ಹಾಗೂ ಮೈಸೂರು ಮಲ್ಲಿಗೆ ಬೆಳೆಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೊಸ ಆಯಾಮವನ್ನು ನೀಡುವ ಮಹತ್ವದ ಹೆಜ್ಜೆಯಾಗಿ ಪರಿಣಮಿಸಿದೆ. ರೈತರು ಸಾವಯವ ಕೃಷಿಗೆ ಹೆಚ್ಚು ಒತ್ತು ಕೊಟ್ಟು ಸದರಿ ಬೆಳೆಗಳನ್ನು ಬೆಳೆದರೆ ಉತ್ತಮ ಆದಾಯಗಳಿಸಬಹುದಾಗಿದೆ ಎಂದರು.ಬೆಂಗಳೂರಿನ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರದವರು ದೇಶಾದ್ಯಂತ ಹಸಿರು ನಿಶಾನೆ ಕಾರ್ಯಕ್ರಮವನ್ನು ನೇರ ಪ್ರಸಾರ ಆಯೋಜನೆ ಮಾಡಿದ್ದರು. ಕುರಹಟ್ಟಿಯ ನಂಜುಂಡಸ್ವಾಮಿ ಅವರಿಂದ ನಂಜನಗೂಡು ರಸಬಾಳೆ ಹಾಗೂ ಮಾರ್ಬಳ್ಳಿಯ ಚಿಕ್ಕಸ್ವಾಮಿ ಅವರಿಂದ ಮೈಸೂರು ವೀಳೈದೆಲೆಯ ಕೃಷಿ ಉತ್ಪನ್ನಗಳನ್ನು ರಫ್ತು ಮಾಡಲು ಕ್ರಮವಹಿಸಲಾಯಿತು. ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಷಯ ತಜ್ಞ ಡಾ.ಜಿ.ಎಂ. ವಿನಯ್ ಹಾಗೂ ಕೆವಿಕೆಯ ಸಿಬ್ಬಂದಿ ವರ್ಗದವರು ಇದ್ದರು.