- ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ ಹಾಗೂ ಅಭಿನಂದನಾ ಸಮಾರಂಭ
ಮಕ್ಕಳು ದೇವರಿಗೆ ಸಮಾನ. ಅವರಿಗೆ ಶಕ್ತಿ ತುಂಬಲು ಒಳ್ಳೆಯ ಶಿಕ್ಷಣ ಮತ್ತು ಸಂಸ್ಕಾರ ಕೊಡಬೇಕು ಎಂದು ಬೆಂಗಳೂರು
ಗವಿಪುರಂ ಶ್ರೀ ಗೋಸಾಯಿ ಮಹಾ ಸಂಸ್ಥಾನ ಶ್ರೀ ಭವಾನಿ ಮಹಾಪೀಠದ ಶ್ರೀ ಮಂಜುನಾಥ ಭಾರತೀ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ.ಭಾನುವಾರ ಸಮೀಪದ ರಂಗೇನಹಳ್ಳಿ ಶ್ರೀ ಅಂಬಾ ಭವಾನಿ ಸಮುದಾಯ ಭವನದಲ್ಲಿ ನಡೆದ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಚಿಕ್ಕಮಗಳೂರು ಜಿಲ್ಲಾ ಘಟಕದ ಸುವರ್ಣ ಮಹೋತ್ಸವ ಛತ್ರಪತಿ ಶಿವಾಜಿ ಮಹಾರಾಜರ 399ನೇ ಜಯಂತ್ಯುತ್ಸವ ಹಾಗೂ ಅಭಿನಂದನಾ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಸುಖ ಶಾಂತಿ ನೆಮ್ಮದಿ ಬೇಕು ಎಂದು ಎಲ್ಲರೂ ಕೇಳುತ್ತಾರೆ. ಗೀತೆಯ ಸಾರವೇ ತ್ಯಾಗ. ತ್ಯಾಗ ಮಾಡಿದರೆ ಸುಖ ಎಂದು ಅನೇಕ ದಾರ್ಶನಿಕರು ವಿವರಿಸಿದ್ದಾರೆ ಎಂದು ಹೇಳಿದರು.
ರಾಜ್ಯಾಧ್ಯಕ್ಷ ಸುರೇಶ್ ರಾವ್ ಸಾಠೆ ಅಧ್ಯಕ್ಷತೆ ವಹಿಸಿ ಮಾತನಾಡಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಬೇಕು, ಆ ನಿಟ್ಟಿನಲ್ಲಿಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತು ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತು ನೀಡಿದೆ. ಬೆಂಗಳೂರಿನಲ್ಲಿ ಮರಾಠ ವಿದ್ಯಾರ್ಥಿ ನಿಲಯದಲ್ಲಿ ಪ್ರತಿವರ್ಷ 150 ಎಂಜಿನಿಯರಿಂಗ್ ಮತ್ತು ಉನ್ನತ ವಿದ್ಯಾಭ್ಯಾಸ ಮಾಡುವವರಿಗೆ ಉಚಿತ ವಸತಿ ಸೌಲಭ್ಯ, ಉನ್ನತ ವ್ಯಾಸಂಗಕ್ಕೆ ನೆರವು ನೀಡುತ್ತಿದೆ ಎಂದು ತಿಳಿಸಿದರು.
ಕೆಕೆಎಂಪಿ ತರೀಕೆರೆ ತಾಲೂಕು ಅಧ್ಯಕ್ಷ ಎ.ಎಸ್.ಗಿರೀಶ್ ಚವ್ಹಾಣ್, ಕೆಕೆಎಂಪಿ ಅಜ್ಜಂಪುರ ತಾಲೂಕು ಅಧ್ಯಕ್ಷ ಗಿರೀಶ್ ಚವ್ಹಾಣ್, ಎನ್.ಆರ್.ಪುರ ಮರಾಠ ಮುಖಂಡರಾದ ಎಚ್.ಟಿ.ರಘುವೀರ್ ಭಾಗವಹಿಸಿದ್ದರು.
24ಕೆಟಿಆರ್.ಕೆ.15ಃ ತರೀಕೆರೆ ಸಮೀಪದ ರಂಗೇನಹಳ್ಳಿಯಲ್ಲಿ ಚಿಕ್ಕಮಗಳೂರು ಕ್ಷತ್ರಿಯ ಮರಾಠ ಪರಿಷತ್ ಜಿಲ್ಲಾ ಘಟಕ ದಿಂದ ನಡೆದ ಛತ್ರಪತಿ ಶಿವಾಜಿ ಮಹಾರಾಜರ 399ನೇ ಜಯಂತ್ಯುತ್ಸವ ಹಾಗೂ ಅಭಿನಂದನಾ ಸಮಾರಂಭದ ದಿವ್ಯ ಸಾನಿಧ್ಯವನ್ನು ಬೆಂಗಳೂರು ಗವಿಪುರಂ ಗೋಸಾಯಿ ಮಹಾ ಸಂಸ್ಥಾನದ ಶ್ರೀ ಮಂಜುನಾಥ ಭಾರತೀ ಸ್ವಾಮೀಜಿ ವಹಿಸಿದ್ದರು. ಸುರೇಶ್ ರಾವ್ ಸಾಠೆ, ಶ್ರೀನಿವಾಸರಾವ್ ಮದನೆ,ಎಚ್.ವಿಶ್ವನಾಥ್ ಲಾಡ್ ಭಾಗವಹಿಸಿದ್ದರು.