ಗಂಗಾವತಿ:ವಿವಿಧ ಕ್ಷೇತ್ರದ 32 ಸಾಧಕರನ್ನು ಗುರುತಿಸಿ ಶ್ರೀಕೃಷ್ಣದೇವರಾಯ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಿರುವುದು ಶ್ಲಾಘನೀಯ ಎಂದು ರಾಜವಂಶಸ್ಥೆ ಲಲಿತಾರಾಣಿ ಶ್ರೀರಂಗದೇವರಾಯಲು ಹೇಳಿದರು.
ಪಂಪಾನಗರ ಗೃಹ ನಿರ್ಮಾಣ ಸಹಕಾರ ಸಂಘದ ಮಾಜಿ ಅಧ್ಯಕ್ಷ ಗುರುರಾಜ ಬೆಳ್ಳುಬ್ಬಿಅವರು, ದಿ. ನವಲಿ ವೇದವ್ಯಾಸರಾವ್ ಅವರ 50 ವರ್ಷದ ಪತ್ರಿಕಾ ಕ್ಷೇತ್ರ ಮತ್ತು ಸಮಾಜ ಸೇವೆಯನ್ನು ಸ್ಮರಿಸಿದರು. ಮಾಜಿ ಕಾಡಾ ಅಧ್ಯಕ್ಷ, ರೈತ ಮುಖಂಡ ತಿಪ್ಪೇರುದ್ರಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.ಈ ವೇಳೆ ಪತ್ರಕರ್ತರಾದ ಎಸ್.ಎಂ. ಪಟೇಲ್, ರಾಮಮೂರ್ತಿ ನವಲಿ, ಡಾ. ಸಿ. ಮಹಾಲಕ್ಷ್ಮೀ, ಡಾ. ಶಿವಕುಮಾರ ಮಾಲಿಪಾಟೀಲ್, ಬಿ.ಸಿ. ಐಗೋಳ, ಪಂಚಾಕ್ಷರಕುಮಾರ, ಮಾರುತಿ ಐಲಿ, ಚನ್ನಬಸಪ್ಪ ಬಳಗಾರ ಉಡುಪಿ, ಡಾ. ಪ್ರಭುಸ್ವಾಮಿ ಹಾಲೇವಾಡಿಮಠ ಹಾವೇರಿ, ವಿಷ್ಣುತೀರ್ಥ ಜೋಶಿ, ವಿ.ಎಸ್. ಶಿವಪ್ಪಯ್ಯನಮಠ ಯಲಬುರ್ಗಾ ಸೇರಿದಂತೆ 32 ಸಾಧಕರಿಗೆ ಶ್ರೀಕೃಷ್ಣದೇವರಾಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಆನಂತರ ಪತ್ರಕರ್ತ ದಿ. ವೇದವ್ಯಾಸರಾವ್ ನವಲಿ ಸ್ಮರಣಾರ್ಥ ಕಾವ್ಯಲೋಕದಿಂದ ನಡೆದ 108ನೇ ಕವಿಗೋಷ್ಠಿಯಲ್ಲಿ ಶಾಮೀದ್ ಲಾಠಿ, ಶಶಿಕಲಾ ಕುರುಗೋಡು, ಚಿದಾನಂದ ಕೀರ್ತಿ, ಭೀಮನಗೌಡ ಕೇಸರಹಟ್ಟಿ, ಜಯಶ್ರೀ ಹಕ್ಕಂಡಿ ಮತ್ತಿತರರು ಕವನ ವಾಚಿಸಿದರು. ಕಸಾಪ ತಾಲೂಕು ಅಧ್ಯಕ್ಷ ರುದ್ರೇಶ ಆರ್ಹಾಳ, ಗುರುರಾಜ ಬೆಳ್ಳುಬ್ಬಿ, ಪಿ.ಎಂ. ಸುಬ್ರಮಣ್ಯಂ, ಎಂ. ಪರಶುರಾಮ ಪ್ರಿಯ, ಕೃಷ್ಣ ಆಶೀಶ, ರಗಡಪ್ಪ ಹೊಸಳ್ಳಿ, ಶಿಕ್ಷಕರಾದ ಸುಂಕಪ್ಪ, ಜಯಶ್ರೀ ಹಕ್ಕಂಡಿ ಇದ್ದರು.