ಕಾರ್ಕಳ: ಸದನದಲ್ಲಿ ಸಂಪ್ರದಾಯದಂತೆ ರಾಜ್ಯ ಸರ್ಕಾರ ನೀಡಿದ ಭಾಷಣವನ್ನು ಮಾಡದೆ ಸರ್ಕಾರದ ನಡೆಯನ್ನು ವಿರೋಧಿಸುವ ಮೂಲಕ ಸಾಂವಿಧಾನಿಕ ಕರ್ತವ್ಯಗಳನ್ನು ರಾಜ್ಯಪಾಲರು ಉಲ್ಲಂಘಿಸಿದ್ದಾರೆ. ರಾಜ್ಯಪಾಲರ ಈ ನಡೆ ಪ್ರಜಾಪ್ರಭುತ್ವದ ಆಶಯಗಳಿಗೆ ಮಾರಕವಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್
ಕಾರ್ಕಳ: ಸದನದಲ್ಲಿ ಸಂಪ್ರದಾಯದಂತೆ ರಾಜ್ಯ ಸರ್ಕಾರ ನೀಡಿದ ಭಾಷಣವನ್ನು ಮಾಡದೆ ಸರ್ಕಾರದ ನಡೆಯನ್ನು ವಿರೋಧಿಸುವ ಮೂಲಕ ಸಾಂವಿಧಾನಿಕ ಕರ್ತವ್ಯಗಳನ್ನು ರಾಜ್ಯಪಾಲರು ಉಲ್ಲಂಘಿಸಿದ್ದಾರೆ. ರಾಜ್ಯಪಾಲರ ಈ ನಡೆ ಪ್ರಜಾಪ್ರಭುತ್ವದ ಆಶಯಗಳಿಗೆ ಮಾರಕವಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಆರೋಪಿಸಿದ್ದಾರೆ.
ದೇಶದ ನಾಗರಿಕರಿಗೆ ಉದ್ಯೋಗ ಒದಗಿಸುವ ಉದ್ದೇಶದಿಂದ ಜಾರಿಗೊಳಿಸಲಾದ ಉದ್ಯೋಗ ಖಾತರಿ ಯೋಜನೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮರುನಾಮಕರಣ ನೆಪದಲ್ಲಿ ಅದರ ಮೂಲ ಆಶಯಗಳಿಗೆ ತಿಲಾಂಜಲಿ ನೀಡಲು ಹೊರಟಿರುವುದು ಅತ್ಯಂತ ಖಂಡನೀಯವಾಗಿದೆ. ಈ ಕುರಿತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ಸದನದಲ್ಲಿ ತನ್ನ ನಿಲುವು ವ್ಯಕ್ತಪಡಿಸಬೇಕಿತ್ತು. ಆದರೆ ರಾಜ್ಯದ ಜನರ ಹಿತ ಕಾಪಾಡಬೇಕಾದ ರಾಜ್ಯಪಾಲರು ಬಿಜೆಪಿ ಪಕ್ಷದ ಏಜೆಂಟರಂತೆ ವರ್ತಿಸಿ ಸರ್ಕಾರ ನೀಡಿದ ಭಾಷಣವನ್ನು ಮಾಡದೆ ಸದನದಿಂದ ಹೊರ ನಡೆದಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನವಾಗಿದೆ ಎಂದು ಅವರು ಹೇಳಿದ್ದಾರೆ. ರಾಜ್ಯಪಾಲರ ಈ ನಡೆ ವಿವಾದಕ್ಕೆ ಕಾರಣವಾಗಿದ್ದು, ಈ ಸಂದರ್ಭದಲ್ಲಿ ನಡೆದ ಗೊಂದಲದಲ್ಲಿ ಹಿರಿಯ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಬಟ್ಟೆಗೆ ಹಾನಿಯಾಗುವಂತೆ ಬಿಜೆಪಿ ಸದಸ್ಯರು ವರ್ತಿಸಿರುವುದು ಆಘಾತಕಾರಿ ಸಂಗತಿಯಾಗಿದೆ. ಸದನದಲ್ಲಿ ಪ್ರಶ್ನಿಸುವುದು, ಚರ್ಚಿಸುವುದು ಹಾಗೂ ಸಂವಿಧಾನದ ಆಶಯಗಳು ಜಾರಿಯಾಗುವಂತೆ ಆಗ್ರಹಿಸುವುದು ಸದನದ ಸದಸ್ಯರ ಕರ್ತವ್ಯವಾಗಿದೆ. ಬಿ.ಕೆ. ಹರಿಪ್ರಸಾದ್ ಅವರು ತಮ್ಮ ಕರ್ತವ್ಯವನ್ನು ನಿರ್ವಹಿಸಿದ್ದಾರೆ. ಆದರೆ ಅವರ ವಿರುದ್ಧ ನಡೆದ ಘಟನೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆಯಾಗಿದ್ದು ಖಂಡನೀಯವಾಗಿದೆ ಎಂದು ಶುಭದ ರಾವ್ ಹೇಳಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.