ಕನ್ನಡಪ್ರಭ ವಾರ್ತೆ ಸವದತ್ತಿ
ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸೋಮವಾರ 100 ಹಾಸಿಗೆಗಳ ತಾಲೂಕು ಆಸ್ಪತ್ರೆ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಹಲವು ದಶಕಗಳಿಂದ ಹಂತಹಂತವಾಗಿ ನಿರ್ಮಿಸಿದ್ದ ಸವದತ್ತಿ ತಾಲೂಕಾ ಆಸ್ಪತ್ರೆಯ ಹಳೆಯ ಕಟ್ಟಡವನ್ನು ಉನ್ನತೀಕರಿಸಿ ಇಂದು ೧೦೦ ಹಾಸಿಗೆಗಳ ಅತ್ಯಾಧುನಿಕ ಸೌಲಭ್ಯವುಳ್ಳ ಆಸ್ಪತ್ರೆಯನ್ನಾಗಿ ಮಾಡಲಾಗುತ್ತಿದೆ. ಇದಕ್ಕೆ ಶಾಸಕ ವಿಶ್ವಾಸ ವೈದ್ಯರ ಪ್ರಯತ್ನ ಸಾಕಷ್ಟಿದೆ. ವೈಜ್ಞಾನಿಕವಾಗಿ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಎಲ್ಲ ರೀತಿಯ ವ್ಯವಸ್ಥೆಯನ್ನು ಕಲ್ಪಿಸಿ ಸಾರ್ವಜನಿಕರ ಆರೋಗ್ಯಕ್ಕೆ ಸಮರ್ಪಣೆಗೊಳ್ಳಲಿದೆ ಎಂದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ದಿಯಾಗುತ್ತಿಲ್ಲ ಎಂದು ನಮ್ಮ ಸರ್ಕಾರದ ಬಗ್ಗೆ ಸಾಕಷ್ಟು ಟೀಕೆ ಟಿಪ್ಪಣಿಗಳು ಬರುತ್ತಿವೆ. ಆದರೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಮುನ್ನಡೆಸಿಕೊಂಡು ಹೋಗುವ ಜೊತೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಕೇವಲ ಒಂದೇ ಇಲಾಖೆಯಲ್ಲ ಎಲ್ಲ ಇಲಾಖೆಗಳಲ್ಲಿ ಅಭಿವೃದ್ಧಿಗಳು ನಡೆಯುತ್ತಿದ್ದು, ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನಕ್ಕೆ ಪ್ರಾಧಿಕಾರ ರಚನೆ ಮಾಡುವ ಮೂಲಕ ಕೋಟ್ಯಂತರ ರೂಪಾಯಿಗಳಲ್ಲಿ ಈ ಧಾರ್ಮಿಕ ಕ್ಷೇತ್ರವನ್ನು ಅಭಿವೃದ್ದಿಗೊಳಿಸಲಾಗುತ್ತಿದೆ. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಇಂದು ಕಿಮೋಥೆರಪಿ ಕೇಂದ್ರಗಳನ್ನು ತೆರೆಯಲಾಗಿದೆ. ಕಿತ್ತೂರು ಕರ್ನಾಟಕದ ಭಾಗದಲ್ಲಿ ಮುಂಬರುವ ದಿನಗಳಲ್ಲಿ ಹೊಸದಾದ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಎಲ್ಲಿ ಅವಶ್ಯಕತೆಗಳಿವೆ ಎಂಬುದನ್ನು ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿ ಆಸ್ಪತ್ರೆಗಳ ನಿರ್ಮಾಣ ಗುರಿ ಹೊಂದಲಾಗಿದೆ ಭರವಸೆ ನೀಡಿದರು.ಶಾಸಕ ವಿಶ್ವಾಸ ವೈದ್ಯ ಮಾತನಾಡಿ, ಸವದತ್ತಿ ತಾಲೂಕು ಆಸ್ಪತ್ರೆಯ ಉನ್ನತೀಕರಣಕ್ಕೆ ಇಂದು ಶಂಕುಸ್ಥಾಪನೆಯಾಗುತ್ತಿರುವುದು ಹರ್ಷ ತಂದಿದೆ. ನಮ್ಮ ಬಹುವರ್ಷಗಳ ಬೇಡಿಕೆ ಇಂದು ಈಡೇರಿದೆ. ಜಿಲ್ಲೆಯಲ್ಲಿಯೇ ಸವದತ್ತಿ ತಾಲೂಕು ಆಸ್ಪತ್ರೆಗೆ ಹೆಚ್ಚಿನ ರೋಗಿಗಳು ಆಗಮಿಸಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಆ ನಿಟ್ಟಿನಲ್ಲಿ ಈ ಆಸ್ಪತ್ರೆಯಲ್ಲಿ ಹೆಚ್ಚಿನ ಸೌಲಭ್ಯ ನೀಡಲಾಗುತ್ತಿದೆ. ಇದೇ ವೇಳೆ ಮುನವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉನ್ನತೀಕರಣಗೊಳಿಸಬೇಕು ಎಂದು ಸಚಿವರಲ್ಲಿ ವಿನಂತಿಸಿದರು. ಯರಗಟ್ಟಿಯ ಸಮುದಾಯ ಆರೋಗ್ಯ ಕೇಂದ್ರವನ್ನು ಮುಂದಿನ ದಿನಗಳಲ್ಲಿ ತಾಲೂಕು ಆಸ್ಪತ್ರೆಯನ್ನಾಗಿಸುವಲ್ಲಿ ಸಚಿವರು ಸಹಕರಿಸುವಂತೆ ಮನವಿ ಮಾಡಿದರು.
------
ಪ್ರತಿಯೊಂದು ತಾಲೂಕು ಆಸ್ಪತ್ರೆಗಳು ನಿತ್ಯ ೨೪ ಗಂಟೆ ಕಾರ್ಯನಿರ್ವಹಿಸುತ್ತಿರಬೇಕೆಂಬ ಉದ್ದೇಶದಿಂದ ಎಲ್ಲ ಮೂಲ ಸೌಲಭ್ಯತೆಗಳನ್ನು ನೀಡಲಾಗುತ್ತಿದೆ. ಜಿಲ್ಲಾಸ್ಪತ್ರೆಗಳಲ್ಲಿ ಸಿಗುವ ಸೌಲಭ್ಯಗಳನ್ನು ಇನ್ನು ಮುಂದೆ ತಾಲೂಕು ಆಸ್ಪತ್ರೆಗಳಲ್ಲಿಯೂ ನಿಡುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿ ಪಾರದರ್ಶಕತೆಯಿಂದ ಕೆಲಸ ನಡೆಯುವಂತೆ ವ್ಯವಸ್ಥೆ ಮಾಡಲಾಗುವುದು.
ಫೋಟೋ ಶೀರ್ಷಿಕೆ: ೧೬ಎಸ್‌ಡಿಟಿ೩