)
ಕನ್ನಡಪ್ರಭ ವಾರ್ತೆ ಬೆಂಗಳೂರು
ಗುರುವಾರ ಮೈಸೂರು ರಸ್ತೆಯ ಸಿಎಆರ್ ಮೈದಾನದ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಇನ್‌ಸ್ಪೆಕ್ಟರ್ ಗೋವಿಂದರಾಜು ಅವರನ್ನು ವಶಕ್ಕೆ ಪಡೆದಿದ್ದಾರೆ. ಖಾಕಿ ಸಮವಸ್ತ್ರದಲ್ಲಿದ್ದ ಇನ್‌ಸ್ಪೆಕ್ಟರ್ ಗೋವಿಂದರಾಜು ಕೂಗಾಡಿ ರಂಪಾಟ ಮಾಡಿದ್ದಾರೆ. ಈ ವೇಳೆ 5-6 ಲೋಕಾ ಅಧಿಕಾರಿಗಳ ತಂಡ ಗೋವಿಂದರಾಜು ಅವರನ್ನು ಹಿಡಿದಿಡಲು ಪರದಾಡಿದೆ.
ಕಳ್ಳರಂತೆ 2 ಕೈ ಲಾಕ್:ಲೋಕಾಯುಕ್ತ ಪೊಲೀಸರು ಕಳ್ಳರನ್ನು ಹಿಡಿಯುವ ರೀತಿ ಗೋವಿಂದರಾಜು ಅವರ ಎರಡು ಕೈಗಳನ್ನು ಲಾಕ್ ಮಾಡಿದ್ದಾರೆ. ಈ ವೇಳೆ ಗೋವಿಂದರಾಜು ಜೋರಾಗಿ ಚೀರಾಡಿದ್ದಾರೆ. ಬಳಿಕ ಲೋಕಾಯುಕ್ತ ಪೊಲೀಸರೇ ಸಮಾಧಾನಪಡಿಸಿ, ಸೊಂಟದಲ್ಲಿದ್ದ ಸರ್ವಿಸ್ ಪಿಸ್ತೂಲ್ ವಶಕ್ಕೆ ಪಡೆದು ಬಳಿಕ ಜೀಪಿನಲ್ಲಿ ಕೂರಿಸಿಕೊಂಡು ಹೋಗಿದ್ದಾರೆ.
ನೆಟ್ಟಿಗರು ಆಕ್ರೋಶ:ಬಂಧನದ ವೇಳೆ ಗೋವಿಂದರಾಜು ನಡೆಸಿದ ಹೈಡ್ರಾಮಾವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್‌ಸ್ಪೆಕ್ಟರ್ ಗೋವಿಂದರಾಜು ಲಂಚ ಸ್ವೀಕಾರಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಇಂತಹ ಭ್ರಷ್ಟ ಅಧಿಕಾರಿಗಳಿಗೆ ಕಠಿಣ ಶಿಕ್ಷೆ ಕೊಡಬೇಕೆಂದು ಆಗ್ರಹಿಸಿದ್ದಾರೆ.