ದಾಬಸ್‍ಪೇಟೆ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಡೆಮಠದಲ್ಲಿ ಜನಿಸಿದ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಶ್ರೀಗಳು, ತುಮಕೂರು ಸಿದ್ದಗಂಗಾ ಕ್ಷೇತ್ರದ ಮಠಾಧ್ಯಕ್ಷರಾಗಿ ನಾಡಿಗೆ, ದೇಶಕ್ಕೆ ಮಾರ್ಗದರ್ಶಕರಾಗಿದ್ದಾರೆ ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು. ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಜನ್ಮದಿನದ ಪ್ರಯುಕ್ತ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದು ಮಾತನಾಡಿದ ಅವರು, ಮಠ ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದ್ದು, ಮಠದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿದ ಹೆಗ್ಗಳಿಕೆ ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಗೆ ಸಲ್ಲುತ್ತದೆ. ಅವರ ಹಾದಿಯಲ್ಲೇ ಶ್ರೀ ಸಿದ್ದಲಿಂಗ ಸ್ವಾಮೀಜಿ ನಡೆಯುತ್ತಿದ್ದು, ಅವರ ಆಶೀರ್ವಾದ ಸದಾ ನಾಡು ಮತ್ತು ನಮ್ಮ ಕ್ಷೇತ್ರದ ಜನತೆಯ ಮೇಲಿರಲಿ ಎಂದರು. ಈ ಸಂದರ್ಭದಲ್ಲಿ ಬಸವಣ್ಣ ದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ವನಕಲ್ಲು ಮಠದ ಶ್ರೀ ಬಸವರಮಾನಂದ ಸ್ವಾಮೀಜಿ, ಬಿಬಿಎಂಪಿ ಮಾಜಿ ಉಪಮೇಯರ್ ಪುಟ್ಟರಾಜು, ಮುಖಂಡರಾದ ಮಲ್ಲಿಕಾರ್ಜುನ್, ಅಗಳಕುಪ್ಪೆ ಗೋವಿಂದರಾಜು, ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಅಂಚೆಮನೆ ಪ್ರಕಾಶ್, ಎಂ.ಕೆ.ನಾಗರಾಜು, ಶಿವಕುಮಾರ್, ನಗರಸಭೆ ಸದಸ್ಯ ಪ್ರದೀಪ್ ಕುಮಾರ್, ಮುಖಂಡರಾದ ತಟ್ಟೆಕೆರೆ ನಾಗರುದ್ರಶರ್ಮಾ, ಕೆ.ಕೆ.ಕೃಷ್ಣಪ್ಪ, ಬೀರಗೊಂಡನಹಳ್ಳಿ ಮಲ್ಲೇಶ್, ಚಂದ್ರಣ್ಣ, ಸಿದ್ದರಾಜು, ಯೋಗನಂದೀಶ್, ರಾಜಣ್ಣ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಶಾಂತಕುಮಾರ್ ಇತರರಿದ್ದರು.
ಪೋಟೋ 4 :ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಅವರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಜನ್ಮದಿನದ ಪ್ರಯುಕ್ತ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಬಸವಣ್ಣ ದೇವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ವನಕಲ್ಲು ಮಠದ ಶ್ರೀ ಬಸವರಮಾನಂದ ಸ್ವಾಮೀಜಿ ಇತರರಿದ್ದರು.