ತುಮಕೂರು : ನಡೆದಾಡುವ ದೇವರು, ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ 118ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವಕ್ಕೆ ಸಿದ್ಧಗಂಗಾ ಮಠ ಸಜ್ಜಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಆಗಮಿಸಲಿದ್ದಾರೆ. ಡಾ.ಶಿವಕುಮಾರಸ್ವಮಿಗಳ 118 ನೇ ಜಯಂತಿ ಹಾಗೂ ಗುರವಂದನ ಮಹೋತ್ಸವ ವನ್ನು ಏಪ್ರಿಲ್ 1 ರಂದು ಬೆಳಿಗ್ಗೆ 11 ಗಂಟೆಗೆ ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಧ್ಯಕ್ಷತೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಹಿಸಲಿದ್ದು, ದಿವ್ಯ ನೇತೃತ್ವವನ್ನು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗಸ್ವಾಮಿಗಳು ವಹಿಸಲಿದ್ದಾರೆ. ಮೈಸೂರು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದು, ಸಿದ್ಧಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಸಿದ್ದೇಶ್ವರಸ್ವಾಮಿಗಳು ಉಪಸ್ಥಿತಿ ಇರಲಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ಭಾಗವಹಿಸುವರು, ವಿಶೇಷ ಆಹ್ವಾನಿತರಾಗಿ ಶಾಸಕರುಗಳಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ ಮತ್ತು ಎನ್.ಶ್ರೀನಿವಾಸಯ್ಯ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಗುರುವಂದನಾ ಮಹೋತ್ಸವದ ಅಂಗವಾಗಿ 5ಕಡೆ ದಾಸೋಹವನ್ನು ಏರ್ಪಡಿಸಲಾಗಿದ್ದು, ಸುಮಾರು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇರುವುದಾಗಿ ತಿಳಿಸಿದರು.
ಕಾರ್ಯಕ್ರಮ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು ಒಬ್ಬರು ಎಸ್ಪಿ, ಒಬ್ಬರು ಎಎಸ್ಪಿ, 7 ಮಂದಿ ಡಿವೈಎಸ್ಪಿ, 13 ಮಂದಿ ಇನ್ಸ್ ಪೆಕ್ಟರ್, 35 ಮಂದಿ ಪಿಎಸ್ಐ, 80 ಮಂದಿ ಎಎಸ್ಐ, 536 ಮಂದಿ ಹೆಚ್ಸಿ/ಪಿಸಿ/ಮ.ಪಿಸಿ, 2 ಕೆಎಸ್ಆರ್ಪಿ ತುಕುಡಿ, 1 ಡಿಎಎಆರ್ ತುಕುಡಿ, 1 ಬಿಡಿಡಿಎಸ್ ಟೀಂ ಹಾಗೂ 5 ಎಎಸ್ಪಿ ಟೀಂ ಇರಲಿದೆ. ಪಟ್ಟಣ ಹಾಗೂ ಜಿಲ್ಲೆಯ ಬಹುತೇಕ ಎಲ್ಲ ತಾಲೂಕು ಕೇಂದ್ರಗಳಲ್ಲಿ ಶ್ರೀಗಳ ಜನ್ಮದಿನೋತ್ಸವ ನಿಮಿತ್ತ ಅನ್ನದಾಸೋಹ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.