ವನಜ ರಂಗಮನೆ ಪ್ರಶಸ್ತಿಗೆ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಆಯ್ಕೆ

KannadaprabhaNewsNetwork |  
Published : Sep 29, 2024, 01:46 AM IST
ಸುಳ್ಯ: ವನಜ ರಂಗಮನೆ ಪ್ರಶಸ್ತಿಗೆ ಬಣ್ಣದ ಮಾಂತ್ರಿಕಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಆಯ್ಕೆ | Kannada Prabha

ಸಾರಾಂಶ

ಅಕ್ಟೋಬರ್‌ 6ರಂದು ಸುಳ್ಯದ ರಂಗಮನೆಯಲ್ಲಿ ನಡೆಯುವ ಯಕ್ಷ ಸಂಭ್ರಮದ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ರಂಗಮನೆಯ ಅಧ್ಯಕ್ಷರಾದ ಡಾ. ಜೀವನರಾಂ ಸುಳ್ಯ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಸುಳ್ಯ

ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ಕೊಡಮಾಡುವ ರಂಗಕರ್ಮಿ ಡಾ. ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ. ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 2024ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಬಣ್ಣದ ವೇಷದಾರಿ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಸದಾಶಿವ ಶೆಟ್ಟಿಗಾರರು ಯಕ್ಷದ್ರೋಣ ಬಣ್ಣದ ಮಾಲಿಂಗರಿಂದ ಬಣ್ಣಗಾರಿಕೆ ಹಾಗೂ ರೆಂಜಾಳ ರಾಮಕೃಷ್ಣ ರಾವ್ ಅವರಿಂದ ಹೆಜ್ಜೆಗಾರಿಕೆಯನ್ನು ಕಲಿತವರು. ತಮ್ಮ ಹದಿನಾರನೇ ವಯಸ್ಸಿಗೆ ಚೌಕಿಯ ನೇಪಥ್ಯ ಕಲಾವಿದರಾಗಿ ಸೇರಿಕೊಂಡ ಇವರು ಎರಡು ವರ್ಷದ ಬಳಿಕ ಬಣ್ಣದ ವೇಷಧಾರಿಯಾಗಿ ಕರಾವಳಿಯ ಪ್ರಸಿದ್ಧ ಯಕ್ಷಗಾನ ಮೇಳಗಳಾದ ಕಟೀಲು, ಎಡನೀರು, ಧರ್ಮಸ್ಥಳ ಮೇಳ, ಹೊಸನಗರ ಹಾಗೂ ಹನುಮಗಿರಿ ಮೇಳಗಳಲ್ಲಿ ಒಂದನೇ ವೇಷಧಾರಿಯಾಗಿ ಒಟ್ಟು ನಲವತ್ತೊಂದು ವರ್ಷಗಳ ಸುದೀರ್ಘ ಕಲಾ ಸೇವೆಗೈದವರು. ಸಾಂಪ್ರದಾಯಿಕ ಚೌಕಟ್ಟನ್ನು ಎಂದೂ ಮೀರದೆ ತನ್ನ ವಿಶಿಷ್ಠ ಬಣ್ಣಗಾರಿಕೆಯಿಂದಲೇ ಪ್ರಸಿದ್ಧರಾದ ಇವರು ದೇಶ ವಿದೇಶಗಳಲ್ಲಿ ಲಕ್ಷಾಂತರ ಅಭಿಮಾನಿ ಬಳಗವನ್ನು ಹೊಂದಿದ ಯಕ್ಷಗಾನದ ಅಗ್ರಮಾನ್ಯ ಬಣ್ಣದ ವೇಷಧಾರಿ ಎನಿಸಿದ್ದಾರೆ.

ಪ್ರಶಸ್ತಿಯು ರೇಶ್ಮೆ ಶಾಲು, ಪ್ರಶಸ್ತಿ ಫಲಕ, ಸ್ಮರಣಿಕೆ, ಫಲಪುಷ್ಪ ಹಾಗೂ ಹತ್ತು ಸಾವಿರ ರು. ನಗದು ಒಳಗೊಂಡಿರುತ್ತದೆ. ಅಕ್ಟೋಬರ್‌ 6ರಂದು ಸುಳ್ಯದ ರಂಗಮನೆಯಲ್ಲಿ ನಡೆಯುವ ಯಕ್ಷ ಸಂಭ್ರಮದ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ರಂಗಮನೆಯ ಅಧ್ಯಕ್ಷರಾದ ಡಾ. ಜೀವನರಾಂ ಸುಳ್ಯ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ