ಸಿದ್ದಾಪುರ: ₹27.25 ಕೋಟಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ

KannadaprabhaNewsNetwork |  
Published : Nov 19, 2026, 02:45 AM IST
ಭೂಮಿ ಪೂಜೆ ನೆರವೇರಿಸಿದ ಶಾಸಕ ಎ.ಎಸ್. ಪೊನ್ನಣ್ಣ | Kannada Prabha

ಸಾರಾಂಶ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸಿದ್ದಾಪುರ ಭಾಗದಲ್ಲಿ ಒಟ್ಟು ₹27.25 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಸಿದ್ದಾಪುರ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸಿದ್ದಾಪುರ ಭಾಗದಲ್ಲಿ ಒಟ್ಟು ₹27.25 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಪಾಲಿಬೆಟ್ಟ ರಸ್ತೆಯ ಬೀಟಿಕಾಡು ಪ್ರದೇಶದಲ್ಲಿ ₹25 ಕೋಟಿ ವೆಚ್ಚದಲ್ಲಿ 66/11 ಕೆ.ವಿ. ಸಾಮರ್ಥ್ಯದ ನೂತನ ವಿದ್ಯುತ್ ಪ್ರಸರಣ ಘಟಕ ಸ್ಥಾಪನೆ ಹಾಗೂ ಹೊಸ ವಿದ್ಯುತ್ ಮಾರ್ಗ ಅಳವಡಿಕೆ ಕಾಮಗಾರಿಗೆ ಚಾಲನೆ ನೀಡಲಾಯಿತು. ಈ ಘಟಕ ಕಾರ್ಯಾರಂಭಗೊಂಡ ಬಳಿಕ ಸಿದ್ದಾಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದ್ದು, ಕೃಷಿಕರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಶಾಸಕರು ತಿಳಿಸಿದರು.

ಸಿದ್ದಾಪುರದಿಂದ ಪಾಲಿಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ₹2.25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಭಾರೀ ಮಳೆಯಿಂದ ಹದಗೆಟ್ಟಿರುವ ರಸ್ತೆಯನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಸಾರ್ವಜನಿಕರೂ ಕಾಮಗಾರಿಯ ಗುಣಮಟ್ಟದ ಬಗ್ಗೆ ಗಮನಹರಿಸುವಂತೆ ಮನವಿ ಮಾಡಿದರು. ಹಾಗೂ ಸಿದ್ದಾಪುರ ಪಟ್ಟಣದಲ್ಲಿ ಆಟೋ ಚಾಲಕರು ಹಾಗೂ ಮಾಲೀಕರ ಅನುಕೂಲಕ್ಕಾಗಿ ನೂತನ ಆಟೋ ತಂಗುದಾಣ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ದಿನಗೂಲಿ ಕಾರ್ಮಿಕರು ಸೇರಿದಂತೆ ಸಾರ್ವಜನಿಕರಿಗೆ ಆಟೋರಿಕ್ಷಾಗಳೇ ಪ್ರಮುಖ ಸಾರಿಗೆ ವ್ಯವಸ್ಥೆಯಾಗಿದ್ದು, ಚಾಲಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ತಂಗುದಾಣ ನಿರ್ಮಿಸಲಾಗುತ್ತಿದೆ ಎಂದರು.

ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪ್ರತೀಶ್, ಸೂರಜ್ ಹೊಸೂರು, ಅಪ್ರು ರವೀಂದ್ರ, ಹನೀಫ್, ರಫೀಕ್ ಪಳನಿ ಸ್ವಾಮಿ , ಅನಿಲ್, ಜಾಫರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ಆಟೋ ಚಾಲಕರ ಸಂಘದ ಪದಾಧಿಕಾರಿಗಳು ಹಾಗೂ ಸ್ಥಳೀಯ ಪ್ರಮುಖರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಪಿಆರ್ ಸಿದ್ಧಪಡಿಸಲು ತ್ವರಿತ ಅನುಮೋದನೆ ನೀಡಿ
ಆರ್‌ಎಸ್‌ಎಸ್‌ ಆಕರ್ಷಕ ಪಥ ಸಂಚಲನ