ತಾಲೂಕು ಸಮ್ಮೇಳನಕ್ಕೆ ಸಿದ್ದರಾಮ ಬಿರಾದಾರ ಸರ್ವಾಧ್ಯಕ್ಷ

KannadaprabhaNewsNetwork |  
Published : Nov 28, 2024, 12:30 AM IST
ಕಸಾಪ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಾಲೂಕಿನ ಸುಕ್ಷೇತ್ರ ಇವಣಗಿ ಗ್ರಾಮದಲ್ಲಿ ಡಿ.೨ ರಂದು ಹಮ್ಮಿಕೊಂಡಿರುವ ಬಸವನಬಾಗೇವಾಡಿ ತಾಲೂಕಿನ ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮನಗೂಳಿ ಪಟ್ಟಣದ ಸಾಹಿತಿ, ಶಿಕ್ಷಕ ಸಿದ್ದರಾಮ ಈರಗೊಂಡಪ್ಪ ಬಿರಾದಾರ ಅವರನ್ನು ಆಯ್ಕೆ ಮಾಡಲಾಗಿದೆ. ಬುಧವಾರ ಸಂಜೆ ಸ್ಥಳೀಯ ಬಸವೇಶ್ವರ ದೇವಸ್ಥಾನ ಆವರಣದಲ್ಲಿರುವ ತಾಲೂಕು ಕಸಾಪ ಕಾರ್ಯಾಲಯದಲ್ಲಿ ಜರುಗಿದ ಆಯ್ಕೆ ಸಮಿತಿ ಸಭೆಯಲ್ಲಿ ಸಿದ್ದರಾಮ ಬಿರಾದಾರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲೀಕಾರ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ತಾಲೂಕಿನ ಸುಕ್ಷೇತ್ರ ಇವಣಗಿ ಗ್ರಾಮದಲ್ಲಿ ಡಿ.೨ ರಂದು ಹಮ್ಮಿಕೊಂಡಿರುವ ಬಸವನಬಾಗೇವಾಡಿ ತಾಲೂಕಿನ ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮನಗೂಳಿ ಪಟ್ಟಣದ ಸಾಹಿತಿ, ಶಿಕ್ಷಕ ಸಿದ್ದರಾಮ ಈರಗೊಂಡಪ್ಪ ಬಿರಾದಾರ ಅವರನ್ನು ಆಯ್ಕೆ ಮಾಡಲಾಗಿದೆ. ಬುಧವಾರ ಸಂಜೆ ಸ್ಥಳೀಯ ಬಸವೇಶ್ವರ ದೇವಸ್ಥಾನ ಆವರಣದಲ್ಲಿರುವ ತಾಲೂಕು ಕಸಾಪ ಕಾರ್ಯಾಲಯದಲ್ಲಿ ಜರುಗಿದ ಆಯ್ಕೆ ಸಮಿತಿ ಸಭೆಯಲ್ಲಿ ಸಿದ್ದರಾಮ ಬಿರಾದಾರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲೀಕಾರ ತಿಳಿಸಿದರು.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಗಾಗಿ ಎಂಟು ಸಾಹಿತಿಗಳು ಅರ್ಜಿಗಳನ್ನು ಸಲ್ಲಿಸಿದ್ದರು. ಎಂಟು ಅರ್ಜಿಗಳನ್ನು ಆಯ್ಕೆ ಸಮಿತಿ ಪರಿಶೀಲನೆ ಮಾಡಿದಾಗ ಸಿದ್ದರಾಮ ಬಿರಾದಾರ ಉಳಿದ ಸಾಹಿತಿಗಳಿಗಿಂತ ಸಾಹಿತ್ಯಿಕವಾಗಿ, ಶೈಕ್ಷಣಿಕವಾಗಿ ಸೇರಿದಂತೆ ಇತರೇ ವಿಷಯಗಳ ಕುರಿತು ಹೆಚ್ಚು ಪುಸ್ತಕಗಳನ್ನು ರಚಿಸಿದ್ದಾರೆ. ಇದನ್ನು ಪರಿಗಣಿಸಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ತಿಳಿಸಿದ್ದಾರೆ.ಸಮ್ಮೇಳನ ಸರ್ವಾಧ್ಯಕ್ಷತೆಗೆ ಸಿದ್ದರಾಮ ಬಿರಾದಾರ ಅವರ ಹೆಸರನ್ನು ಹಾಸಿಂಪೀರ ವಾಲೀಕಾರ, ಶಿವು ಮಡಿಕೇಶ್ವರ, ಯಮನಪ್ಪ ಮಿಣಜಗಿ ಸೂಚಿಸಿದರು. ತಾಲೂಕು ಕಸಾಪ ಗೌರವಾಧ್ಯಕ್ಷ ಬಸವರಾಜ ಸೋಮಪುರ, ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಡೋಣೂರ, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಆರ್‌.ಜಿ.ಅಳ್ಳಗಿ ಅನುಮೋದಿಸಿದರು. ಎಸ್.ಎಲ್.ಓಂಕಾರ, ಬಸವರಾಜ ಮೇಟಿ ಅಂಗೀಕರಿಸಿದರು. ಸಭೆಯಲ್ಲಿ ಆಯ್ಕೆ ಸಮಿತಿ ಸದಸ್ಯರಾದ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ.ಮಾಧವ ಗುಡಿ, ವಕೀಲರಾದ ವೀರಣ್ಣ ಮರ್ತುರ, ರವಿ ರಾಠೋಡ, ಚಂದ್ರಶೇಖರ ಸುಭಾನಪ್ಪರ, ಜಿಲ್ಲಾ ದತ್ತಿ ಸಂಚಾಲಕ ರಾಜೇಸಾಬ ಶಿವನಗುತ್ತಿ, ಎಂ.ಎನ್.ಅಂಗಡಗೇರಿ, ಶಾಂತಾ ಚೌರಿ, ಬಿ.ವ್ಹಿ.ಚಕ್ರಮನಿ ಇತರರು ಹಾಜರಿದ್ದರು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV

Recommended Stories

ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಟಾಕ್ಸಿಕ್‌ ಮುಂಬೈ ಶೂಟ್‌ ಮುಗಿಸಿ ಲಂಡನ್‌ಗೆ ಹಾರಿದ ಯಶ್‌