ದೇವರಾಜ್ ಅರಸು ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ

KannadaprabhaNewsNetwork |  
Published : Jan 07, 2026, 01:15 AM IST
   ಸಿಕೆಬಿ-1 ದೇವರಾಜ್ ಅರಸು ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ ಪರ ಅಹಿಂದ ಮತ್ತು ಕಾಂಗ್ರೆಸ್ ನಿಂದ ನಗರದ ಬಲಮುರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ, ಜೈಕಾರ ಹಾಕಿ ಸಂಭ್ರಮಿಸಲಾಯಿತು | Kannada Prabha

ಸಾರಾಂಶ

ರಾಜ್ಯದಲ್ಲಿ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಹೊಂದಿದ್ದ ದೇವರಾಜ​ ಅರಸು ಅವರ​ ದಾಖಲೆಯನ್ನು ಸಿದ್ದರಾಮಯ್ಯ ಮಂಗಳವಾರ ಸರಿಗಟ್ಟಿದ್ದು. ಆ ಮೂಲಕ ಅತಿ ಹೆಚ್ಚು ಅವಧಿ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ರಾಜ್ಯದ ಮುಖ್ಯಮಂತ್ರಿಯಾಗಿ ಆಳ್ವಿಕೆಯ ಅತ್ಯಧಿಕ ದಿನಗಳ ದೇವರಾಜ್ ಅರಸರ ದಾಖಲೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸರಿಗಟ್ಟಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಹಿಂದ ಮತ್ತು ಕಾಂಗ್ರೆಸ್ ಪಕ್ಷ ವತಿಯಿಂದ ಮಂಗಳವಾರ ನಗರದ ಬಲಮುರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ, ಜೈಕಾರ ಹಾಕಿ ಸಂಭ್ರಮಿಸಲಾಯಿತು.

ಈ ವೇಳೆ ರಾಷ್ಟ್ರೀಯ ಅಹಿಂದ ಜಲ್ಲಾಧ್ಯಕ್ಷ ಕಳವಾರ ಶ್ರೀಧರ್ ಮಾತನಾಡಿ, ರಾಜ್ಯದಲ್ಲಿ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಹೊಂದಿದ್ದ ದೇವರಾಜ​ ಅರಸು ಅವರ​ ದಾಖಲೆಯನ್ನು ಸಿದ್ದರಾಮಯ್ಯ ಮಂಗಳವಾರ ಸರಿಗಟ್ಟಿದ್ದು. ಆ ಮೂಲಕ ಅತಿ ಹೆಚ್ಚು ಅವಧಿ ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ ಎಂಬ ಗರಿಮೆಗೆ ಅವರು ಪಾತ್ರರಾಗಿದ್ದಾರೆ. ಇದು ಅವರಿಗೆ ವೈಯಕ್ತಿಕವಾಗಿ ಮತ್ತು ರಾಜ್ಯಕ್ಕೆ ಒಂದು ದೊಡ್ಡ ಮೈಲಿಗಲ್ಲಾಗಿದೆ ಎಂದರು.

ಸಿದ್ದರಾಮಯ್ಯ ಮತ್ತು ಅರಸು ಅವರನ್ನು ದಮನಿತ ಸಮುದಾಯಗಳ ಅಭಿವೃದ್ಧಿಗೆ ನೀಡಿದ ಕೊಡುಗೆಯಿಂದಾಗಿ ಪ್ರಮುಖ ನಾಯಕರೆಂದು ಪರಿಗಣಿಸಲಾಗಿದೆ. ಆದರೆ ಭೂಸುಧಾರಣೆಗಳನ್ನು ಜಾರಿಗೆ ತಂದಿದ್ದರಿಂದ ಮತ್ತು ಎಲ್.ಜಿ. ಹಾವನೂರ್ ನೇತೃತ್ವದ ಮೊದಲ ರಾಜ್ಯಮಟ್ಟದ ಹಿಂದುಳಿದ ವರ್ಗಗಳ ಆಯೋಗವನ್ನು ಸ್ಥಾಪಿಸಿದ್ದರಿಂದ ಅವರ ಸಾಧನೆಗಳು ಹೆಚ್ಚು ಗಮನಾರ್ಹವಾಗಿವೆ. ಸಿದ್ದರಾಮಯ್ಯ ಅವರನ್ನು ಅರಸು ಪರಂಪರೆಯ ಪಥದರ್ಶಕ ಎಂದು ಕರೆಯಬಹುದು. ಏಕೆಂದರೆ ಅವರು ಅನ್ನ ಭಾಗ್ಯ ಸೇರಿ ಐದು ಖಾತರಿಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದಿದ್ದಾರೆ. ಎಲ್ಲಾ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ನೀಡಲು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಸಹ ನಿಯೋಜಿಸಿದ್ದಾರೆ. ಇಂತಹ ಜನಾನುರಾಗಿ ಸಿದ್ದರಾಮಯ್ಯ ನೂರ್ಕಾಲ ಬಾಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದ್ದೇವೆ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಲ್ಲಾ ಸಮಿತಿ ಸದಸ್ಯ ಜಾತವರ ರಾಮಕೃಷ್ಣಪ್ಪ ಮಾತನಾಡಿ, ಕರ್ನಾಟಕದ ಸಾಮಾಜಿಕ ನ್ಯಾಯ ಹಾಗೂ ಜನಪರ ಸರ್ವಾಂಗೀಣ ಅಭಿವೃದ್ಧಿ ಪರಂಪರೆಯನ್ನು ಸಮರ್ಥವಾಗಿ ಮುಂದುವರೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರ ದೂರದೃಷ್ಟಿಯ ನಾಯಕತ್ವಕ್ಕೆ ಅಭಿನಂದನೆಗಳು ಎಂದರು.

ಮಹಿಳಾ ಕಾಂಗ್ರೆಸ್‌ನ ಮಂಗಳ ಪ್ರಕಾಶ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯರ ಪ್ರಾಮಾಣಿಕ ಹಾಗೂ ಪಾರದರ್ಶಕ ಆಡಳಿತವು ಸ್ಪಷ್ಟವಾಗಿ ಜನಪರ, ಸಂವಿಧಾನಬದ್ಧ ಮತ್ತು ಸಾಮಾಜಿಕ ನ್ಯಾಯ ಕೇಂದ್ರಿತವಾಗಿದೆ. ರಾಜ್ಯದ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಆರ್ಥಿಕವಾಗಿ ಹಿಂದುಳಿದ ಜನಾಂಗಕ್ಕೆ ಯಾವುದೇ ಧರ್ಮ, ಜಾತಿ ಭೇದವಿಲ್ಲದೆ ಆರ್ಥಿಕ ಭದ್ರತೆ ಮತ್ತು ಸಾಮಾಜಿಕ ಗೌರವವನ್ನು ಒದಗಿಸುವಲ್ಲಿ ನಿಮ್ಮ ನಿಮ್ಮ ಪ್ರಾಮಾಣಿಕ ವಿಚಾರಗಳು ಮಹತ್ವದ ಪಾತ್ರ ವಹಿಸಿದೆ. ಈ ಯೋಜನೆಗಳು ಕರ್ನಾಟಕವನ್ನು ನಿಜಾರ್ಥದಲ್ಲಿ ಕಲ್ಯಾಣರಾಜ್ಯದ ಮಾದರಿಯಾಗಿ ರೂಪಿಸುವ ದಿಟ್ಟ ರಾಜಕೀಯ ಸಂಕಲ್ಪದ ಪ್ರತಿಬಿಂಬಗಳಾಗಿವೆ. ನಿಮ್ಮ

ಈ ವೇಳೆ ಮಾಜಿ ನಗರಸಭಾ ಸದಸ್ಯರಾದ ಸಮಿವುಲ್ಲಾ, ಲಕ್ಷ್ಮಣ್, ಅಣ್ಣಮ್ಮ, ಮುಖಂಡರಾದ ರಾಜಶೇಖರ್ (ಬುಜ್ಜಿ) ಕಾಳೇಗೌಡ, ಉಮೇಶ್, ಪ್ರೆಸ್ ಸೂರಿ, ಸಿ.ವಿ. ಪ್ರಕಾಶ್, ಸಿ.ಎಂ.ಮಂಜುನಾಥ್, ನಾಯನಹಳ್ಳಿ ನಾರಾಯಣಸ್ವಾಮಿ, ನಾರಾಯಣಮ್ಮ, ಸಿ.ಎಂ. ಸೈಯದ್ ಇಬ್ರಾಹಿಂ, ಸೈಯದ್ ಅಮಾನುಲ್ಲಾ, ಕಲಾವತಿ, ಗುಂತಪ್ಪನಹಳ್ಳಿ ಮಂಜುಳಾ, ಸರಸ್ವತಿ , ಸುಮಿತ್ರನಾರಾಯಣಸ್ವಾಮಿ, ಅನುಸೂಯಮ್ಮ, ಮತ್ತಿತರರು ಇದ್ದರು.

ಸಿಕೆಬಿ-1 ದೇವರಾಜ್ ಅರಸು ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ ಪರ ಅಹಿಂದ ಮತ್ತು ಕಾಂಗ್ರೆಸ್‌ನಿಂದ ನಗರದ ಬಲಮುರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ, ಜೈಕಾರ ಹಾಕಿ ಸಂಭ್ರಮಿಸಲಾಯಿತು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ