ಅರಕಲಗೂಡಿನಲ್ಲಿ ಸಿದ್ದರಾಮಯ್ಯ ಅಭಿಮಾನಿಗಳಿಂದ ಸಂಭ್ರಮಾಚರಣೆ

KannadaprabhaNewsNetwork |  
Published : Jan 10, 2026, 02:00 AM IST
8ಎಚ್ಎಸ್ಎನ್11 :  | Kannada Prabha

ಸಾರಾಂಶ

ರಾಜ್ಯದಲ್ಲಿ ಅತಿ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಹೊಸ ದಾಖಲೆ ನಿರ್ಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಧನೆಯನ್ನು ಅಭಿನಂದಿಸಿ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಪಟ್ಟಣದಲ್ಲಿ ಸಂಭ್ರಮಾಚರಣೆ ನಡೆಸಿದರು. ಗ್ರಾಮದೇವತೆ ದೊಡ್ಡಮ್ಮ ದೇವಾಲಯದ ಬಳಿ ಜಮಾಯಿಸಿದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಪಟಾಕಿ ಸಿಡಿಸಿ ಸಹಿ ವಿತರಿಸಿ ಸಂಭ್ರಮಿಸಿದರು. ವಾದ್ಯವೃಂದೊಂದಿಗೆ ಜಯಘೋಷಗಳೊಂದಿಗೆ ಅನಕೃ ವೃತ್ತಕ್ಕೆ ದಾಖಲೆಯ ದಾಪುಗಾಲು ಮೆರವಣಿಗೆ ನಡೆಸಿ ಅನಕೃ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಕನ್ನಡಪ್ರಭ ವಾರ್ತೆ ಅರಕಲಗೂಡು

ರಾಜ್ಯದಲ್ಲಿ ಅತಿ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಹೊಸ ದಾಖಲೆ ನಿರ್ಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಧನೆಯನ್ನು ಅಭಿನಂದಿಸಿ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಪಟ್ಟಣದಲ್ಲಿ ಸಂಭ್ರಮಾಚರಣೆ ನಡೆಸಿದರು.

ಗ್ರಾಮದೇವತೆ ದೊಡ್ಡಮ್ಮ ದೇವಾಲಯದ ಬಳಿ ಜಮಾಯಿಸಿದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಪಟಾಕಿ ಸಿಡಿಸಿ ಸಹಿ ವಿತರಿಸಿ ಸಂಭ್ರಮಿಸಿದರು. ವಾದ್ಯವೃಂದೊಂದಿಗೆ ಜಯಘೋಷಗಳೊಂದಿಗೆ ಅನಕೃ ವೃತ್ತಕ್ಕೆ ದಾಖಲೆಯ ದಾಪುಗಾಲು ಮೆರವಣಿಗೆ ನಡೆಸಿ ಅನಕೃ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಈ ವೇಳೆ ಕಾಂಗ್ರೆಸ್ ಮುಖಂಡ ಎಸ್.ಎಸ್. ಪ್ರಸನ್ನ ಕುಮಾರ್ ಮಾತನಾಡಿ, ಸಿದ್ದರಾಮಯ್ಯನವರು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ದಾಖಲೆಯನ್ನು ಮೀರಿ ಅತೀ ದೀರ್ಘಕಾಲ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ ದಾಖಲೆ ನಿರ್ಮಿಸಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ದೀನ ದಲಿತರು, ಬಡವರು, ಮಹಿಳೆಯರು, ನಿರುದ್ಯೋಗಿಗಳ ಸಂಕಷ್ಟಕ್ಕೆ ನೆರವಾಗಿದ್ದಾರೆ. ದೇವರಾಜ ಅರಸು ಅವರು ಜಾರಿಗೆ ತಂದ ಉಳುವವನೆ ಭೂ ಒಡೆಯ ಕಾನೂನನ್ನು ಸಮರ್ಪಕವಾಗಿ ಜಾರಿಗೆ ತರಲು ಪ್ರತಿ ರೈತರಿಗೂ ಭೂಮಿಯ ಹಕ್ಕಿನ ದಾಖಲೆಗಳನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡರು ರೈತರಿಗೆ ದೊರಕಿಸಿವ ಮೂಲಕ ಕಂದಾಯ ಕ್ರಾಂತಿಯನ್ನೆ ನಡೆಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದು ಇಲ್ಲಿ ಜೆಡಿಎಸ್ ಶಾಸಕರು ಇರುವ ಕಾರಣ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರನ್ನು ಸದ್ಯದಲ್ಲೇ ಭೇಟಿಯಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ತಂದು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಮುಖಂಡ ಎಂ.ಟಿ. ಕೃಷ್ಣೇಗೌಡ ಮಾತನಾಡಿ, ಸಿದ್ದರಾಮಯ್ಯ ಅವರ ಸಾಧನೆ ರಾಜ್ಯದ ಇತಿಹಾಸದಲ್ಲಿ ದಾಖಲಾಗಲಿದೆ. ಮುಂದಿನ ಚುನಾವಣೆಯಲ್ಲಿ ಇವರ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವುದು ಖಚಿತ, ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ನೀಡಲಿದೆ ಎಂದರು. ಮುಖಂಡರಾದ ಎಸ್.ಎಸ್.ಪ್ರದೀಪ್ ಕುಮಾರ್, ಎ.ಸಿ. ದೇವರಾಜೇಗೌಡ, ಎಸ್.ಪಿ. ರೇವಣ್ಣ, ಬೊಮ್ಮನಹಳ್ಳಿ ಕೃಷ್ಣ, ಬಿಳಗುಲಿ ರಾಮೇಗೌಡ, ಕಳ್ಳಿಮುದ್ದನಹಳ್ಳಿ ಲೋಕೇಶ್, ಜಮೀರ್ ಅಹಮದ್, ರಾಜು, ಕಾಂತರಾಜ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ