ಉತ್ತಮ ಆಡಳಿತಕ್ಕೆ ಸಿದ್ದರಾಮಯ್ಯ ಸರ್ಕಾರ ಸಾಕ್ಷಿ: ಶಾಸಕ ಅಪ್ಪಾಜಿ

KannadaprabhaNewsNetwork |  
Published : Oct 05, 2025, 01:02 AM IST
ಸಾರಥಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಸ್ವಾವಲಂಭಿ ಸಾರಥಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಶನಿವಾರ ವಾಹನದ ಕೀ ವಿತರಿಸಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಸ್ವಾವಲಂಭಿ ಸಾರಥಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಶನಿವಾರ ವಾಹನದ ಕೀ ವಿತರಿಸಿದರು.

ಈ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದೆ ಎನ್ನುವುದು ಇದು ಕೂಡ ಒಂದು ಪ್ರತ್ಯಕ್ಷ ಸಾಕ್ಷಿಯಾಗಿದೆ. ನಿರುದ್ಯೋಗ ನಿವಾರಣೆಗೆ ಹಲವಾರು ಯೋಜನೆಗಳನ್ನು ನಮ್ಮ ಸರ್ಕಾರ ಕೈಗೊಂಡಿದೆ. ಅದರಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ದೇವರಾಜು ಅರಸು ನಿಗಮ, ಎಸ್ಸಿ ಅಭಿವೃದ್ಧಿ ನಿಗಮ ಹೀರೆ ಹಲವು ನಿಗಮಗಳ ಮೂಲಕ ನಿರುದ್ಯೋಗ ಚಾಲಕರಿಗೆ ವಿಶೇಷ ಸಹಾಯಧನ ನೀಡುವುದರೊಂದಿಗೆ ವಾಹನ ನೀಡಿ ಅನುಕೂಲ ಮಾಡಿಕೊಡುವ ಯೋಜನೆ ಬಹಳ ಉಪಯುಕ್ತವಾಗಿದೆ. ವಾಹನಗಳನ್ನು ಪಡೆದು ಜೀವನ ನಡೆಸುತ್ತಿರುವವರು ಸರ್ಕಾರದ ನಿಯಮದಂತೆ ಸರಿಯಾಗಿ ವಿಮೆ ಪಾವತಿಸಿ. ವಾಹನ ಚಾಲನಾ ಪರವಾನಗಿ ಸೇರಿದಂತೆ ಎಲ್ಲ ನಿಯಮಗಳನ್ನು ಪಾಲಿಸಬೇಕು. ಕುಡಿದು ವಾಹನ ಓಡಿಸದೇ ಎಲ್ಲವುಗಳನ್ನು ಗಮನದಲ್ಲಿಟ್ಟುಕೊಂಡು ಫಲಾನುಭವಿಗಳು ಮುನ್ನಡೆಯಬೇಕು ಎಂದು ಕಿವಿಮಾತು ಹೇಳಿದರು.ಈ ವೇಳೆ ತಹಸೀಲ್ದಾರ್‌ ಕೀರ್ತಿ ಚಾಲಕ, ತಾಲೂಕು ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಗುರು ತಾರನಾಳ, ನೀಲಕಮಠರಾವ ನಾಡಗೌಡ(ಚಿನ್ನುಧಣಿ), ಗೋಪಿ ಮಡಿವಾಳರ, ಕೋಳೂರ ಗ್ರಾಪಂ ಅಧ್ಯಕ್ಷ ಮಂಜುನಾಥಗೌಡ ಪಾಟೀಲ, ಮಲ್ಲಿಕಾರ್ಜನ ಬಾಗೇವಾಡಿ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ