- ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಶಾಸಕ ಬಿ.ದೇವೇಂದ್ರಪ್ಪ ಅಭಿಮತ- - - ಕನ್ನಡಪ್ರಭ ವಾರ್ತೆ ಜಗಳೂರು
ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿ ಶುಕ್ರುವಾರ 20೨೩- 20೨೪ನೇ ಸಾಲಿನ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಸಮಗ್ರ ಅಭಿವೃದ್ಧಿ ಹಾಗೂ ಮೂಲಸೌಕರ್ಯಗಳನ್ನು ಒದಗಿಸುವ ಸಲುವಾಗಿ ₹೨ ಕೋಟಿ ವೆಚ್ಚದಲ್ಲಿ ಪಟ್ಟಣದ ಸಾರ್ವಜನಿಕರ ಆಸ್ಪತ್ರೆಯಿಂದ ಉಜ್ಜಿನಿ ರಸ್ತೆವರೆಗೆ ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಹಳೇ ತಾಲೂಕು ಕಚೇರಿ ಕಟ್ಟಡ ನೆಲಸಮಗೊಳಿಸಿ ಹೊಸ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ₹೧೦ ಕೋಟಿ, ಪಟ್ಟಣದ ಅಭಿವೃದ್ದಿಗಾಗಿ ₹೮ ಕೋಟಿ ಸೇರಿದಂತೆ ಇತರೆ ಪಟ್ಟಣ ಅಭಿವೃದ್ದಿ ಕಾಮಗಾರಿಗಳಿಗೆ ಮೊದಲ ಹಂತದಲ್ಲಿ ಸುಮಾರು ₹೨೦ ಕೋಟಿ ಅನುದಾನ ನೀಡಿರುವ ನಮ್ಮದೇ ಪಕ್ಷದ ರಾಜ್ಯದಲ್ಲಿನ ಆಡಳಿತಾರೂಢ ಸರ್ಕಾರದ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ವಿವಿಧ ಇಲಾಖೆ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.ಅಲ್ಪಸಂಖ್ಯಾತರ ಸರ್ವತೋಮುಖ ಅಭಿವೃದ್ಧಿಗಾಗಿ ತಾಲೂಕಿಗೆ ₹೫ ಕೋಟಿ ನೀಡಿದೆ. ಕೆಆರ್‌ಡಿಎಲ್‌ರವರು ₹೨ ಕೋಟಿ ವೆಚ್ಚದಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾಮಗಾರಿಯನ್ನು ಉತ್ತಮವಾಗಿ ನಿರ್ವಹಿಸಬೇಕು. ಕಳಪೆ ಕಾಮಗಾರಿ ಎಂಬ ದೂರು ಬಂದರೆ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರಸ್ತೆ ನಿರ್ಮಾಣ ಮಾಡಬೇಕಾದರೆ ಸಾರ್ವಜನಿಕರು ಸಹಕರಿಸಬೇಕು. ₹೨ ಕೋಟಿ ವೆಚ್ಚದಲ್ಲಿ ವಾರ್ಡ್‌ಗಳಲ್ಲಿ ಅಭಿವೃದ್ಧಿ ಕೆಲಸ ಮಾಡಲಾಗುವುದು. ₹೧ ಕೋಟಿ ವೆಚ್ಚದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡಲಾಗುವುದು ಎಂದು ವಿವರಿಸಿದರು.
- - - -08ಜೆ.ಜಿ.ಎಲ್.1: