- ಸಿಬಿಐ ತನಿಖೆಗೆ ಕೋರ್ಟ್ ಆದೇಶ ನಮ್ಮ ಹೋರಾಟದ ಫಲ: ದಾವಣಗೆರೆಯಲ್ಲಿ ಪ್ರತಾಪ ಸಿಂಹ ಹೇಳಿಕೆ- - -
ವಾಲ್ಮೀಕಿ ನಿಗಮದ ಹಗರಣ ವಿರುದ್ಧ ಪಾದಯಾತ್ರೆ ಮಾಡುತ್ತೇವೆಂದಾಗ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರ ಅನುಮತಿಯನ್ನೇ ನೀಡಲಿಲ್ಲ. ಆದರೆ, ನಾವು ಕೋರ್ಟ್ ಮೆಟ್ಟಿಲೇರಿದ್ದರಿಂದ ಇಡೀ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆದೇಶ ಸಿಕ್ಕಿರುವುದು ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಮೈಸೂರಿನ ಬಿಜೆಪಿ ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದರು.
ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಮಂಗಳವಾರ ಜಿ.ಎಂ. ಸಿದ್ದೇಶ್ವರ ಅಭಿಮಾನಿ ಬಳಗ ಹಮ್ಮಿಕೊಂಡಿದ್ದ ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಜಿ.ಎಂ. ಸಿದ್ದೇಶ್ವರ ಅವರ 74ನೇ ಜನ್ಮದಿನ ಸಮಾರಂಭದಲ್ಲಿ ಅವರು ಮಾತನಾಡಿದರು. ಮುಡಾ ಸೈಟ್ ಹಗರಣದಲ್ಲಿ ಹೇಗೋ ಬಚಾವ್ ಆಗಿರುವೆ ಎಂದುಕೊಂಡಿದ್ದ ಸಿಎಂ ಸಿದ್ದರಾಮಯ್ಯ, ವಾಲ್ಮೀಕಿ ನಿಗಮ ಹಗರಣದಲ್ಲಿ ಮನೆಗೆ ಹೋಗುವುದು ನಿಶ್ಚಿತ ಎಂದರು.ಕಾಂಗ್ರೆಸ್ ಸರ್ಕಾರವು ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಮಾಡಿಕೊಂಡು, ಬೇರೆ ಬ್ಯಾಂಕ್ ಖಾತೆಗಳಿಗೆ ಹಾಕಿ, ಅಲ್ಲಿಂದ ಹಣ ಡ್ರಾ ಮಾಡಿಕೊಂಡು, ಚುನಾವಣೆಗೆ ಬಳಸಿಕೊಂಡಿದ್ದ ಪ್ರಕರಣ ಇದೀಗ ಸಿಬಿಐನಿಂದ ತನಿಖೆಯಾಗಲಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಸಾಹೇಬರಿಗೆ ನಡುಕ ಶುರುವಾಗಿದೆ ಎಂದರು.
ಹರಿಹರ ಶಾಸಕ ಬಿ.ಪಿ.ಹರೀಶ ಅಧ್ಯಕ್ಷತೆ ವಹಿಸಿದ್ದರು. 74ನೇ ಜನ್ಮದಿನ ಆಚರಿಸಿಕೊಂಡ ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಗಾಯತ್ರಿ ಸಿದ್ದೇಶ್ವರ, ಜೆಡಿಎಸ್ ನಾಯಕ, ಮಾಜಿ ಶಾಸಕ ಎಚ್.ಎಸ್.ಶಿವಶಂಕರ, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಚಿದಾನಂದಪ್ಪ, ಮುಖಂಡ ಜೆ.ಅಮಾನುಲ್ಲಾ ಖಾನ್, ಮಾಜಿ ಶಾಸಕರಾದ ಎಸ್.ವಿ. ರಾಮಚಂದ್ರ, ಎಚ್.ಪಿ.ರಾಜೇಶ, ಪ್ರೊ.ಎನ್.ಲಿಂಗಣ್ಣ, ಮಾಜಿ ಸಂಸದರಾದ ಬಿ.ವಿ.ನಾಯಕ್, ದೂಡಾ ಮಾಜಿ ಅಧ್ಯಕ್ಷರಾದ ಯಶವಂತ ರಾವ್ ಜಾಧವ್, ಎ.ವೈ.ಪ್ರಕಾಶ, ದೇವರಮನಿ ಶಿವಕುಮಾರ, ರಾಜನಹಳ್ಳಿ ಶಿವಕುಮಾರ, ಟಿ.ಶ್ರೀನಿವಾಸ ದಾಸಕರಿಯಪ್ಪ, ಮಾಯಕೊಂಡ ಜಿ.ಎಸ್.ಶ್ಯಾಮ್, ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.ಬಿ.ವಿನಯಕುಮಾರ, ಎಸ್.ಎಂ.ವೀರೇಶ ಹನಗವಾಡಿ, ಜಿ.ಎಂ.ಅನಿತಕುಮಾರ, ಅಣಬೇರು ಜೀವನಮೂರ್ತಿ, ರವಿ ಬಿರಾದಾರ, ಎಚ್.ಸಿ.ಜಯಮ್ಮ, ಶಿವನಗೌಡ ಪಾಟೀಲ, ಕಿಶೋರಕುಮಾರ, ಟಿಂಕರ್ ಮಂಜಣ್ಣ, ಸೋಗಿ ಗುರುಶಾಂತ, ರಾಜು ನೀಲಗುಂದ, ಟಿಪ್ಪು ಸುಲ್ತಾನ್, ನಸೀರ್ ಅಹಮ್ಮದ್ ಇತರರು ಇದ್ದರು.
ಇದೇ ವೇಳೆ ಮಾಯಕೊಂಡ ಜಿ.ಎಸ್.ಶ್ಯಾಮ್ ತಂಡದಿಂದ ಬೃಹತ್ ಹೂವಿನ ಹಾರವನ್ನು ಜಿ.ಎಂ. ಸಿದ್ದೇಶ್ವರ ಅವರಿಗೆ ಹಾಕಿ, ದೊಡ್ಡ ಕೇಕ್ ಕತ್ತರಿಸಲಾಯಿತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಮೊದಲ ಐವರು ಸಾಧಕರು, ಅಂಧ ಮಕ್ಕಳಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.
(ಬಾಕ್ಸ್) ಮೋಸಗಾರರಿಗೆ ಪಾಠ ಕಲಿಸೋಣ: ಕು.ಬಂ:
- - -