ಕನ್ನಡಪ್ರಭ ವಾರ್ತೆ ರಾಮದುರ್ಗ
ಪಟ್ಟಣದ ತೇರಬಜಾರದಲ್ಲಿ ಅಭ್ಯರ್ಥಿ ಜಗದೀಶ ಶೆಟ್ಟರ ಪರ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮನದಾಳ ಹಂಚಿಕೊಂಡರು. ಈ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಬರುತ್ತವೆ. ನಂತರ ರಾಜ್ಯ ಸರ್ಕಾರ ಬದಲಾಗುತ್ತದೆ. ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇದ್ದರೆ ಅಭಿವೃದ್ಧಿಗೆ ಸಹಾಯವಾಗುತ್ತದೆ ಎಂದರು.
ಕಾಂಗ್ರೆಸ್‌ನವರು ಹತಾಶೆಯಿಂದ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ಪ್ರಜ್ಞಾವಂತ ಮತದಾರರು ಕಿವಿಗೊಡದೆ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿಕೊಂಡರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಗುಂಗಿನಲ್ಲಿದ್ದಾರೆ. ಆದರೆ, ಒಂದು ಕಿಮೀ ರಸ್ತೆ ಅಭಿವೃದ್ಧಿಪಡಿಸಲು ಸಾಧ್ಯವಾಗಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಅಭ್ಯರ್ಥಿ ಜಗದೀಶ ಶೆಟ್ಟರ ಮಾತನಾಡಿ, ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗುತ್ತಿದ್ದು, ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಹೀಗಾಗಿ, ಬಿಜೆಪಿ ಕೈ ಬಲಪಡಿಸುವಂತೆ ಕೋರಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಡಾ.ಕೆ.ವಿ.ಪಾಟೀಲ, ಬಿ.ಎಸ್.ಬೆಳವಣಕಿ, ಶ್ರೀದೇವಿ ಮಾದನ್ನವರ, ಐ.ಎಸ್.ಹರನಟ್ಟಿ ಸೇರಿದಂತೆ ಇತರರು ಇದ್ದರು.