ಕನ್ನಡಪ್ರಭ ವಾರ್ತೆ ವಿಜಯಪುರ
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಎರಡು ವರ್ಷ ಆಗಿದೆ. ರಾಜ್ಯದಲ್ಲಿ ಒಂದು ಅಭಿವೃದ್ಧಿ ಕಾರ್ಯ ನಡೆದಿಲ್ಲ. ಅಲ್ಲದೇ ಅತೀ ಹೆಚ್ಚು ಬಜೆಟ್ ಮಂಡಿಸಿದ್ದಾಗಿ ಹೇಳುವ ಸಿದ್ದರಾಮಯ್ಯ ಅವರು ಮೊದಲು ತಮ್ಮ ಅಧಿಕಾರದ ಸಾಧನೆಗಳ ಬಗ್ಗೆ ಶ್ವೇತ ಪತ್ರ ಹೊರಡಿಸಲಿ ಎಂದು ಸವಾಲು ಹಾಕಿದರು. ಬಜೆಟ್‌ನಲ್ಲಿ ಯೋಜನಾ ವೆಚ್ಚ ಹಾಗೂ ಯೋಜನೇತರ ವೆಚ್ಚವೆಂಬ ಎರಡು ಭಾಗಗಳಿರುತ್ತವೆ. ಈ ಯೋಜನಾ ವೆಚ್ಚದಲ್ಲಿ ಸಿದ್ದರಾಮಯ್ಯ ಇರಿಸಿದ ಅನುದಾನ ಎಷ್ಟು? ಅದರಲ್ಲಿ ಏನೇಲ್ಲ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆಂಬುದನ್ನು ಬಹಿರಂಗಪಡಿಸಲಿ ಎಂದು ವಾಗ್ದಾಳಿ ನಡೆಸಿದರು.
ರಾಜಕೀಯ ಇತಿಹಾಸದಲ್ಲೇ ಭಾರತಕ್ಕಿದು ಪರಿವರ್ತನೆ ಯುಗ. 11 ವರ್ಷದಲ್ಲಿ ಬಡತನವನ್ನು ಅತ್ಯಂತ ಕನಿಷ್ಠ ಮಟ್ಟಕ್ಕೆ ಇಳಿಸಿದ್ದು, ಮುಂದಿನ ದಿನಗಳಲ್ಲಿ ಸಂಪೂರ್ಣ ಬಡತನ ನಿರ್ಮೂಲನೆಗೆ ಮೋದಿ ಸರ್ಕಾರ ಪಣ ತೊಟ್ಟಿದೆ. ಇನ್ನು ಕೆಲವೇ ದಿನಗಳಲ್ಲಿ ಭಾರತ ಜಗತ್ತಿನ 3ನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರ ಹೊಮ್ಮಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತ ಬಡತನ ರೇಖೆಯನ್ನು ಅಳಿಸಿ ಹಾಕುವತ್ತ ಮಹತ್ತರ ಹೆಜ್ಜೆಯಿರಿಸಿದೆ. 2011-12ರಲ್ಲಿ ಶೇ.27.1 ರಷ್ಟಿದ್ದ ಬಡತನ ಪ್ರಮಾಣ ಇದೀಗ ಅತ್ಯಂತ ಕನಿಷ್ಠ ಮಟ್ಟ ಶೇ.5.3ಕ್ಕೆ ಇಳಿದಿದೆ. 26 ಕೋಟಿಗೂ ಹೆಚ್ಚು ಜನ ಬಡತನದಿಂದ ಹೊರ ಬಂದಿದ್ದಾರೆ ಎಂದು ಮಾಹಿತಿ ನೀಡಿದರು.ಇನ್ನಾದರೂ ವಿರೋಧ ಪಕ್ಷದವರು ಪ್ರಧಾನಿ ಬಗ್ಗೆ ವೃಥಾ ಆರೋಪ ನಿಲ್ಲಿಸಲಿ. ಯಾರ ಅವಧಿಯಲ್ಲಿ ಏನೇನು ಸಾಧನೆಯಾಗಿದೆ ಎಂಬುದನ್ನು ಅರಿತುಕೊಳ್ಳಲಿ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯದಲ್ಲೂ ಮುಂದಿದೆ. ತಾವೇ ಸಾಮಾಜಿಕ ಹರಿಕಾರರು ಎನ್ನುವಂತೆ ಬಿಂಬಿಸಿಕೊಳ್ಳುತ್ತಿದ್ದವರು ಸಂಪುಟದಲ್ಲಿ ಶೇ.20ರಷ್ಟ ಸ್ಥಾನಮಾನ ಸಹ ಹಿಂದುಳಿದವರಿಗೆ ಕೊಟ್ಟ ಉದಾಹರಣೆಯಿಲ್ಲ. ಆದರೆ, ಮೋದಿ ಅಧಿಕಾರ ಮಂತ್ರಿ ಮಂಡಲದಲ್ಲಿ ಶೇ.60ರಷ್ಟು ಎಸ್ಸಿ, ಎಸ್ಟಿಯವರಿಗೆ ಅವಕಾಶ ನೀಡಿ ಸಾಮಾಜಿಕ ನ್ಯಾಯ ಮೆರೆದಿದೆ. ಭಾರತ ಹತ್ತು ವರ್ಷದ ಹಿಂದೆ ಆಮದು ಮೇಲೆ ಅವಲಂಬಿತವಾಗಿತ್ತು. ಆದರೆ ಇಂದು ರಫ್ತು ವಲಯದಲ್ಲಿ ವಿಶ್ವ ಪ್ರಸಿದ್ಧವಾಗಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮಾಜಿ ಶಾಸಕ ರಮೇಶ ಭೂನೂರ, ಸೋಮನಗೌಡ ಪಾಟೀಲ ಶಾಸನೂರ, ಬಿಜೆಪಿ ಮುಖಂಡ ವಿಜುಗೌಡ ಪಾಟೀಲ, ಉಮೇಶ ಕಾರಜೋಳ, ವಿಜಯ್ ಜೋಶಿ, ಪಾಪುಸಿಂಗ್ ರಜಪೂತ ಮುಂತಾದವರು ಇದ್ದರು.------
------ಬಾಕ್ಸ್