ಬಡಜನತೆಯ ಸಂಕಷ್ಟಕ್ಕೆ ಸ್ಪಂದಿಸಿದ ಸಿದ್ದರಾಮಯ್ಯ: ವಕೀಲ ಕೋರಿ ಗೋಣಿಬಸಪ್ಪ

KannadaprabhaNewsNetwork |  
Published : Jan 08, 2026, 02:15 AM IST
ಹಗರಿಬೊಮ್ಮನಹಳ್ಳಿ ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಸುದೀರ್ಘ ಅವಧಿ ಪೂರೈಸಿದ ಹಿನ್ನಲೆಯಲ್ಲಿ ರೋಗಿಗಳಿಗೆ ಕಾಂಗ್ರೆಸ್‌ನ ಮುಖಂಡರು ಹಾಲು ಹಣ್ಣು ಬ್ರೆಡ್ ವಿತರಿಸಿದರು. | Kannada Prabha

ಸಾರಾಂಶ

ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಡಜನತೆಯ ಕಣ್ಣೀರು ಒರೆಸಿದ್ದಾರೆ. ಸಿಎಂ ಅವರ ಈ ಸುದಿನದಂದು ಆಸ್ಪತ್ರೆಯ ಎಲ್ಲ ರೋಗಿಗಳು ಗುಣಮುಖರಾಗಲಿ

ಹಗರಿಬೊಮ್ಮನಹಳ್ಳಿ: ರಾಜ್ಯದ ಅಹಿಂದ ನಾಯಕ ಮುಖ್ಯಮಂತ್ರಿ ಪದವಿಯಲ್ಲಿ ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ನಿರಂತರವಾಗಿ ಮುಂದುವರೆಯಲಿ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಕೀಲ ಕೋರಿ ಗೋಣಿಬಸಪ್ಪ ಹೇಳಿದರು.

ಸಿಎಂ ಸಿದ್ದರಾಮಯ್ಯ ರಾಜ್ಯದ ಸುದೀರ್ಘ ಅವಧಿಯ ಸಿಎಂ ಆದ ಹಿನ್ನೆಲೆಯಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು ಹಣ್ಣು ಬ್ರೆಡ್ ವಿತರಿಸಿ ಅವರು ಮಾತನಾಡಿದರು.

ಮಾಜಿ ಸಿಎಂ ದಿ.ದೇವರಾಜ ಅರಸು ಅವರ ಅವಧಿಗಿಂತ ಹೆಚ್ಚು ಕಾಲ ಆಡಳಿತ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯನವರು ಜನಪರ ಆಡಳಿತವನ್ನು ನೀಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಡಜನತೆಯ ಕಣ್ಣೀರು ಒರೆಸಿದ್ದಾರೆ. ಸಿಎಂ ಅವರ ಈ ಸುದಿನದಂದು ಆಸ್ಪತ್ರೆಯ ಎಲ್ಲ ರೋಗಿಗಳು ಗುಣಮುಖರಾಗಲಿ ಎಂದು ಹಾರೈಸಿದರು.

ಇನ್ನೊಂದೆಡೆ ಪುರಸಭೆ ಅಧ್ಯಕ್ಷ ಎಂ.ಮರಿರಾಮಣ್ಣ ಪುರಸಭೆ ಪೌರಕಾರ್ಮಿಕರೊಂದಿಗೆ ಕೇಕ್ ಕತ್ತರಿಸಿ ಸಿಎಂ ಸಿದ್ದರಾಮಯ್ಯ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ತ್ಯಾವಣಗಿ ಕೊಟ್ರೇಶ, ಯು.ಬಾಳಪ್ಪ, ಡಾ.ವಿನಾಯಕ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಸೊನ್ನದ ಗುರುಬಸವರಾಜ, ತಾಪಂ ಮಾಜಿ ಸದಸ್ಯ ಚಿಂತ್ರಪಳ್ಳಿ ದೇವೇಂದ್ರಪ್ಪ, ಕೆಪಿಸಿಸಿ ಮಾಧ್ಯಮ ವಕ್ತಾರ ಪತ್ರೇಶ್ ಹಿರೇಮಠ, ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಪ್ರಭಾಕರ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಚ್.ಎಂ. ನೂರಿ, ಮುಖಂಡರಾದ ಗುಂಡ್ರು ಹನುಮಂತಪ್ಪ, ಪೋಟೋ ವೀರೇಶ್, ಸಂತೋಷ, ಪಂಪಾಪತಿ, ಬ್ಯಾಲಾಳು ಮಂಜುನಾಥ, ಮಾರುತಿ, ಜಿ.ಸೋಮನಾಥ ಇದ್ದರು.

ಹಗರಿಬೊಮ್ಮನಹಳ್ಳಿ ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಸುದೀರ್ಘ ಅವಧಿ ಪೂರೈಸಿದ ಹಿನ್ನೆಲೆಯಲ್ಲಿ ರೋಗಿಗಳಿಗೆ ಕಾಂಗ್ರೆಸ್‌ನ ಮುಖಂಡರು ಹಾಲು ಹಣ್ಣು ಬ್ರೆಡ್ ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2025ರಲ್ಲಿ ಬಿಯರ್‌ ಮಾರಾಟ ಭಾರೀ ಕುಸಿತ
ಜನಾಶೀರ್ವಾದದಿಂದ ದೀರ್ಘಾವಧಿ ಸಿಎಂ : ಸಿದ್ದು