ಸಿದ್ದರಾಮಯ್ಯ ಬಜೆಟ್‌ ಜನತೆಯ ವಿಶ್ವಾಸ ಇಮ್ಮಡಿಗೊಳಿಸಿದೆ: ಮಂಜುನಾಥ ಭಂಡಾರಿ

KannadaprabhaNewsNetwork |  
Published : Mar 07, 2025, 11:48 PM IST
07ಮಂಜುನಾಥ | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಜೊತೆಗೆ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಪುತ್ತೂರಿನ ನಾಗರಿಕರು ಅನೇಕ ವರ್ಷಗಳಿಂದ ಮೆಡಿಕಲ್ ಕಾಲೇಜಿಗೆ ಬೇಡಿಕೆ ಇಡುತ್ತಾ ಬಂದಿದ್ದು ಅದು ಈ ಬಾರಿಯ ಬಜೆಟ್ ನಲ್ಲಿ ಘೋಷಣೆಯಾಗುವ ಮೂಲಕ ಜನರ ಬೇಡಿಕೆಗೆ ಮನ್ನಣೆ ಸಿಕ್ಕಂತಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ನೈಜ ಜನಪರ ಕಾಳಜಿ ಹೊಂದಿರುವುದು ಮಾತ್ರವಲ್ಲದೆ ಜನರು ಸರಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಇಮ್ಮಡಿಗೊಳಿಸಿದೆ. ಅದರಲ್ಲೂ ಪುತ್ತೂರಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರಾಗಿರುವುದು ಅತೀವ ಹರ್ಷ ಉಂಟುಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಜೊತೆಗೆ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಪುತ್ತೂರಿನ ನಾಗರಿಕರು ಅನೇಕ ವರ್ಷಗಳಿಂದ ಮೆಡಿಕಲ್ ಕಾಲೇಜಿಗೆ ಬೇಡಿಕೆ ಇಡುತ್ತಾ ಬಂದಿದ್ದು ಅದು ಈ ಬಾರಿಯ ಬಜೆಟ್ ನಲ್ಲಿ ಘೋಷಣೆಯಾಗುವ ಮೂಲಕ ಜನರ ಬೇಡಿಕೆಗೆ ಮನ್ನಣೆ ಸಿಕ್ಕಂತಾಗಿದೆ ಎಂದು ಮಂಜುನಾಥ ಭಂಡಾರಿ ಹೇಳಿದರು.

ಚುನಾವಣೆ ಸಂದರ್ಭದಲ್ಲಿ ಹೇಳಿದ್ದ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನ ಆಗಿದ್ದು ಈ ಮೂಲಕ ಜನರ ವಿಶ್ವಾಸ ಉಳಿಸಿಕೊಂಡಿದೆ. ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ಒಂದು ಸಾವಿರ ರು. ವೇತನ ಹೆಚ್ಚಿಸಿರುವ ಜೊತೆಗೆ ಸಾಂಕ್ರಾಮಿಕ ರೋಗಗಳ ತಡೆಗೆ 50 ಕೋಟಿಯ ವಿಶೇಷ ಅಭಿಯಾನ ಕಾರ್ಯಕ್ರಮ ನೀಡಿದ್ದಾರೆ. ಒಟ್ಟಾರೆ ರಾಜ್ಯದ ಜನರು ಮೆಚ್ಚುವ ಬಜೆಟ್ ನೀಡಿರುವ ಸಿದ್ದರಾಮಯ್ಯ ಅವರು ಈ ಮೂಲಕ ರಾಜ್ಯದ ಎಲ್ಲ ವರ್ಗದ ಜನರಿಗೆ ಇನ್ನಷ್ಟು ಹತ್ತಿರವಾಗಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆರೋಗ್ಯ ಇಲಾಖೆಗೆ ಪುನಶ್ಚೇತನ ನೀಡಿರುವ ಕ್ರಾಂತಿಕಾರಿ ಬಜೆಟ್ ಇದಾಗಿದ್ದು ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಗೆ 100 ಕೋಟಿ ರು. ಅನುದಾನದಲ್ಲಿ ಗೃಹ ಆರೋಗ್ಯ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವ ಘೋಷಣೆ ಮಾಡಲಾಗಿದೆ. ತಾಯಿ‌ ಮಗುವಿನ ಮರಣ ಪ್ರಮಾಣವನ್ನ ಶೂನ್ಯಕ್ಕಿಳಿಸಲು 320 ಕೋಟಿ ಅನುದಾನ ಯೋಜನೆ ಘೋಷಣೆ ಮಾಡಿರುವುದು ಸಿದ್ದರಾಮಯ್ಯರ ಜನಪರ ಕಾಳಜಿಗೆ ಸಾಕ್ಷಿ ಎಂದು ಅಭಿಪ್ರಾಯಪಟ್ಟಿದ್ದಾರೆ.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ