ಕನ್ನಡಪ್ರಭ ವಾರ್ತೆ ಮಳವಳ್ಳಿ
ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಪಟ್ಟಣದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಪರ ಘೋಷಣೆ ಕೂಗಿದರು. ನಂತರ ಪಟ್ಟಣದ ಅನಂತ್ ರಾಂ ವೃತ್ತದ ಬಳಿ ಸಿಹಿ ಹಂಚಿ ಸಂಭ್ರಮಿಸಿದರು.
ಟಿಎಪಿಸಿಎಂಎಸ್ ನಿರ್ದೇಶಕ ಬಿ.ಪುಟ್ಟಬಸವಯ್ಯ ಮಾತನಾಡಿ, ರಾಜ್ಯದಲ್ಲಿ ಯಶಸ್ವಿ ಆಡಳಿತದ ಮೂಲಕ ಡಿ.ದೇವರಾಜ ಅರಸು ಅವರ ದಾಖಲೆ ಮುರಿದಿರುವ ಸಿದ್ದರಾಮಯ್ಯ ಅವರಿಗೆ ರಾಜ್ಯದ ಸಿಎಂ ಆಗಿ ಸೇವೆ ಸಲ್ಲಿಸುವ ಅವಕಾಶವನ್ನು ಆ ದೇವರು ಕಲ್ಪಿಸಿಕೊಡಬೇಕು. ಉತ್ತಮ ಆರೋಗ್ಯದೊಂದಿಗೆ ಅಯಸ್ಸು ವೃದ್ಧಿಯಾಗಲಿ ಎಂದು ಶುಭ ಹಾರೈಸಿದರು.ಮನ್ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್ ಮಾತನಾಡಿ, ಬಡ ಜನರ ಪರವಾದ ಚಿಂತನೆಗಳೊಂದಿಗೆ ಬಡವರಿಗೆ ಅನೇಕ ಯೋಜನೆಗಳನ್ನು ಜಾರಿ ಮಾಡಿರುವ ಏಕೈಕ ಮುಖ್ಯಮಂತ್ರಿ ಅಂದರೆ ಅದು ಸಿದ್ದರಾಮಯ್ಯ ಮಾತ್ರ. ಮುಂದಿನ ದಿನಗಳಲ್ಲಿ ಅವರಿಂದ ಮತ್ತಷ್ಟು ಜನಪರ ಕಾರ್ಯಗಳು ಜಾರಿಯಾಲಿ ಎಂದರು.
ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ ಮಾತನಾಡಿ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುವ ವಿರೋಧ ಪಕ್ಷಗಳ ನಡೆ ಖಂಡನೀಯ. ಸದಾ ಬಡವರ ಪರ ಕೆಲಸ ಮಾಡುವ ಅವರಿಗೆ ಮತ್ತಷ್ಟು ಶಕ್ತಿ ದೊರಕಲಿ ಎಂದು ಆಶಿಸಿದರು.ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ಟಿಎಪಿಸಿಎಂಎಸ್ ನಿರ್ದೇಶಕ ಬಿ.ಪುಟ್ಟಬಸವಯ್ಯ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಜಯಣ್ಣ ಮಾತನಾಡಿದರು. ಮನ್ಮುಲ್ ನಿರ್ದೇಶಕ ಡಿ.ಕೃಷ್ಣೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಲಿಂಗರಾಜು, ಕೆಪಿಸಿಸಿ ಸದಸ್ಯ ಸಿದ್ದೇಗೌಡ, ಮುಖಂಡರಾದ ಚಂದ್ರಕುಮಾರ್, ಸಿ.ಮಾಧು, ಪಿ.ಮಾದೇಶ್, ನಾಗರಾಜು, ದಿಲೀಪ್ ಕುಮಾರ್, ಶಶಿ ರಾಜ್, ಬಿ.ಮಹದೇವು, ಬಸಪ್ಪ, ಎಂ.ಮಾದಯ್ಯ, ಸಿ.ಎಂ.ವೇದಮೂರ್ತಿ, ರವೀಂದ್ರ, ವಿಜಯ್ ಕುಮಾರ್, ನೂರುಲ್ಲಾ ಪಾಲ್ಗೊಂಡಿದ್ದರು.