ಸಿದ್ದರಾಮಯ್ಯ ದಾಖಲೆ ಬಜೆಟ್‌: ರಕ್ಷಿತ್‌ ಶಿವರಾಂ

KannadaprabhaNewsNetwork |  
Published : Mar 10, 2025, 12:21 AM IST
ರಕ್ಷಿತ್‌ ಶಿವರಾಂ | Kannada Prabha

ಸಾರಾಂಶ

ಈ ಬಾರಿಯ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸುವ ಉದ್ದೇಶ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ನವೀಕರಣಕ್ಕೆ ಒತ್ತು ಹಾಗೂ ಕರಾವಳಿಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಅಂಗನವಾಡಿ ಸಹಾಯಕೀಯರ ಮತ್ತು ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಿಸಲಾಗಿದೆ ಎಂದು ರಕ್ಷಿತ್ ಶಿವರಾಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸು ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ 16ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾ ಹೇಳಿಕೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಈ ಬಾರಿಯ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸುವ ಉದ್ದೇಶ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ನವೀಕರಣಕ್ಕೆ ಒತ್ತು ಹಾಗೂ ಕರಾವಳಿಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಅಂಗನವಾಡಿ ಸಹಾಯಕೀಯರ ಮತ್ತು ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಿಸಲಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

2025-26ನೇ ಸಾಲಿನ ಈ ಆಯವ್ಯಯವು ಕರ್ನಾಟಕದ ಭವ್ಯ ಭವಿಷ್ಯದ ದಿಕ್ಸೂಚಿಯಾಗಿ ಹೊರಹೊಮ್ಮಿದೆ. ಜನ ಕೇಂದ್ರೀತ ಅಭಿವೃದ್ಧಿಯ ಮಾದರಿ ಅಳವಡಿಸಿಕೊಂಡಿರುವ ನಮ್ಮ ಸರ್ಕಾರವು ಸಾಮಾಜಿಕ ಬಲವರ್ಧನೆಯ ಮೂಲಕ ಆರ್ಥಿಕ ಸುಸ್ಥಿರತೆ ಸಾಧಿಸುವಲ್ಲಿ ಮುನ್ನುಗ್ಗುತ್ತಿದೆ.

ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಪರತೆಯನ್ನು ಪ್ರತಿಪಾದಿಸುವ ಕರ್ನಾಟಕ ಮಾದರಿಗೆ ದೇಶದಲ್ಲಷ್ಟೇ ಅಲ್ಲ, ಜಾಗತಿಕವಾಗಿಯೂ ಮನ್ನಣೆ ದೊರಕಿದೆ.

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿರುವ ಈ ಬಜೆಟ್ ಕರ್ನಾಟಕದ ಪ್ರಗತಿಗೆ ಕಾರಣವಾಗಲಿದೆ ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ