ರಾಷ್ಟ್ರಪತಿಗಳಿಗೆ ಏಕವಚನ ಬಳಕೆ ಪ್ರಮಾದ: ಸಿಎಂ ವಿಷಾದ

KannadaprabhaNewsNetwork |  
Published : Jan 29, 2024, 01:31 AM IST
ಸಿದ್ದರಾಮಯ್ಯ | Kannada Prabha

ಸಾರಾಂಶ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಏಕವಚನ ಬಳಕೆ ಪ್ರಯೋಗ ಮಾಡಿದ ಕುರಿತು ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬಿಜೆಪಿಯವರು ಮಾಡಿರುವ ಅವಮಾನದಿಂದ ಆಕ್ರೋಶಗೊಂಡಿದ್ದ ನಾನು ಭಾವುಕನಾಗಿ ಮಾತನಾಡುವಾಗ ಬಾಯ್ತಪ್ಪಿನಿಂದ ಏಕವಚನದಲ್ಲಿ ಸಂಬೋಧಿಸಿದ್ದೇನೆ.

ಅಚಾತುರ್ಯದಿಂದ ಆಗಿರುವ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ನೀಡಿರುವ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿರುವ ಅವರು, ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ರಾಷ್ಟ್ರಪತಿ ಮುರ್ಮು ಅವರಿಗೆ ಸಂಸತ್‌ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿದ್ದರು.

ಅದರಿಂದ ನನಗೆ ತೀವ್ರ ನೋವು ಉಂಟಾಗಿದ್ದಲ್ಲದೆ ಆಕ್ರೋಶ ಹುಟ್ಟಿಸಿತ್ತು. ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ.

ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡ ಏಕವಚನದಲ್ಲಿ ಸಂಭೋದಿಸುವುದು ರೂಢಿ. ಅವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು. ಈ ಪ್ರಮಾದಕ್ಕೆ ವಿಷಾದಿಸುತ್ತೇನೆ ಎಂದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ